For Quick Alerts
ALLOW NOTIFICATIONS  
For Daily Alerts
 

IPL 2023 KKR Vs MI: ಮುಂಬೈ ಬೌಲಿಂಗ್ ಆಯ್ಕೆ: ರೋಹಿತ್ ಅಲಭ್ಯ ಸೂರ್ಯಕುಮಾರ್ ನಾಯಕ, ಅರ್ಜುನ್ ತೆಂಡೂಲ್ಕರ್ ಪದಾರ್ಪಣೆ

ಇಂಡಿಯನ್ ಪ್ರೀಮಿಯರ್ ಲೀಗ್ 2023ರ 22ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಟಾಸ್ ಗೆದ್ದಿರುವ ಮುಂಬೈ ಇಂಡಿಯನ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದೆ. ಅನಾರೋಗ್ಯದ ಕಾರಣ ರೋಹಿತ್ ಶರ್ಮಾ ಈ ಪಂದ್ಯವನ್ನು ತಪ್ಪಿಸಿಕೊಂಡಿದ್ದು, ಸೂರ್ಯಕುಮಾರ್ ಯಾದವ್ ತಂಡದ ನಾಯಕರಾಗಿದ್ದಾರೆ.

ನಾಯಕ ರೋಹಿತ್ ಶರ್ಮಾ ಅಲಭ್ಯವಾಗಿರುವುದು ಮುಂಬೈ ಇಂಡಿಯನ್ಸ್ ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ಅರ್ಧಶತಕ ಗಳಿಸುವ ಮೂಲಕ ಫಾರ್ಮ್‌ಗೆ ಮರಳಿದ್ದರು, ತವರಿನಲ್ಲಿ ನಡೆಯುವ ಪಂದ್ಯವನ್ನು ತಪ್ಪಿಸಿಕೊಂಡಿರುವುದು ತಂಡದ ಬ್ಯಾಟಿಂಗ್‌ ಮೇಲೆ ಪರಿಣಾಮ ಬೀರಲಿದೆ.

Mumbai Indians Win The Toss

ಕ್ರಿಕೆಟ್ ದಿಗ್ಗಜ ಸಚಿನ ತೆಂಡೂಲ್ಕರ್ ಮಗ ಅರ್ಜುನ್ ತೆಂಡೂಲ್ಕರ್ ಮೊದಲನೇ ಐಪಿಎಲ್ ಪಂದ್ಯವನ್ನಾಡಲು ಸಜ್ಜಾಗಿದ್ದಾರೆ. ಇಶಾನ್ ಕಿಶನ್ ಕೊತೆ ಕ್ಯಾಮೆರಾನ್ ಗ್ರೀನ್ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆ ಇದೆ. ಡುವಾನ್ ಜಾನ್ಸೆನ್ ಕೂಡ ಪ್ಲೇಯಿಂಗ್ 11ನಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ರೋಹಿತ್ ಶರ್ಮಾ ಪ್ಲೇಯಿಂಗ್‌ 11ನಿಂದ ಹೊರಗುಳಿದರೂ ಇಂಪ್ಯಾಕ್ಟ್ ಪ್ಲೇಯರ್ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಕೆಕೆಆರ್ ತಂಡದಲ್ಲಿ ಆಂಡ್ರೆ ರಸೆಲ್ ಫಿಟ್ ಆಗಿದ್ದು ಇಂದಿನ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ. ಉಳಿದಂತೆ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಕಳೆದ ಮೂರು ಪಂದ್ಯಗಳಲ್ಲಿ ಕೆಕೆಆರ್ 200ಕ್ಕೂ ಹೆಚ್ಚು ರನ್ ಕಲೆಹಾಕಿರುವುದರಿಂದ ಬ್ಯಾಟಿಂಗ್ ವಿಭಾಗ ಆತ್ಮವಿಶ್ವಾಸದಲ್ಲಿದೆ.

ಮುಂಬೈ ಇಂಡಿಯನ್ಸ್ ಸಂಭಾವ್ಯ ಪ್ಲೇಯಿಂಗ್ 11

ಇಶಾನ್ ಕಿಶನ್ (ವಿಕೆಟ್ ಕೀಪರ್), ಕ್ಯಾಮೆರಾನ್ ಗ್ರೀನ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಟಿಮ್ ಡೇವಿಡ್, ನೆಹಾಲ್ ವಧೇರಾ, ಅರ್ಜುನ್ ತೆಂಡೂಲ್ಕರ್, ಹೃತಿಕ್ ಶೋಕೀನ್, ಪಿಯೂಷ್ ಚಾವ್ಲಾ, ಡುವಾನ್ ಜಾನ್ಸೆನ್, ರಿಲೆ ಮೆರೆಡಿತ್. ಇಂಪ್ಯಾಕ್ಟ್ ಪ್ಲೇಯರ್: ರೋಹಿತ್ ಶರ್ಮಾ, ವಿಷ್ಣು ವಿನೋದ್, ರಮಣ್‌ದೀಪ್ ಸಿಂಗ್, ಕುಮಾರ್ ಕಾರ್ತಿಕೇಯ, ಅರ್ಷದ್ ಖಾನ್.

ಕೆಕೆಆರ್ ಸಂಭಾವ್ಯ ಪ್ಲೇಯಿಂಗ್ 11

ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ಎನ್ ಜಗದೀಸನ್, ನಿತೀಶ್ ರಾಣಾ (ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ಸುನಿಲ್ ನರೈನ್, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಲಾಕಿ ಫರ್ಗುಸನ್, ವರುಣ್ ಚಕ್ರವರ್ತಿ. ಇಂಪ್ಯಾಕ್ಟ್ ಪ್ಲೇಯರ್: ಮಂದೀಪ್ ಸಿಂಗ್, ಡೇವಿಡ್ ವೀಸೆ, ಅಂಕುಲ್ ರಾಯ್, ವೈಭವ್ ಅರೋರಾ, ಸುಯಾಶ್ ಶರ್ಮಾ.

Story first published: Sunday, April 16, 2023, 15:17 [IST]
Other articles published on Apr 16, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+