Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2023 KKR vs PBKS: ಪಂಜಾಬ್ ಕಿಂಗ್ಸ್ vs ಕೆಕೆಆರ್ ಪಂದ್ಯದ ಟಾಸ್ ವಿವರ, ಆಡುವ 11ರ ಬಳಗ & ಲೈವ್ ಸ್ಕೋರ್

ಶನಿವಾರ, ಏಪ್ರಿಲ್ 1ರಂದು ಮೊಹಾಲಿಯ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ ಎರಡನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಿವೆ.

ಟಾಸ್ ಗೆದ್ದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ನಿತೀಶ್ ರಾಣಾ ಮೊದಲು ಬೌಲಿಂಗ್ ಆಯ್ದುಕೊಂಡಿದ್ದಾರೆ. ಹೀಗಾಗಿ, ಶಿಖರ್ ಧವನ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.

IPL 2023 KKR vs PBKS: Punjab Kings vs KKR Match Toss Report, Playing 11 And Live Score

ಈ ಬಾರಿ ಪಂಜಾಬ್ ಕಿಂಗ್ಸ್ ತಂಡಕ್ಕೆ ಶಿಖರ್ ಧವನ್ ಹೊಸ ನಾಯಕನಾಗಿದ್ದು, ಪ್ರಶಸ್ತಿ ಗೆಲುವಿನ ಭರವಸೆ ಮತ್ತು ನಿರೀಕ್ಷೆಗಳೊಂದಿಗೆ 2023ರ ಐಪಿಎಲ್ ಋತುವನ್ನು ಪ್ರಾರಂಭಿಸಲಿದೆ. ಪಂಜಾಬ್ ಕಿಂಗ್ಸ್ ಯುವ ಮತ್ತು ಅನುಭವಿ ಆಟಗಾರರಿಂದ ಕೂಡಿದ ಅತ್ಯುತ್ತಮ ತಂಡವನ್ನು ಹೊಂದಿದೆ.

ಇನ್ನು ಗಾಯಾಳು ಶ್ರೇಯಸ್ ಅಯ್ಯರ್ ಅನುಪಸ್ಥಿತಿಯಲ್ಲಿ ನಿತೀಶ್ ರಾಣಾ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಎರಡು ಬಾರಿಯ ಐಪಿಎಲ್ ಚಾಂಪಿಯನ್ ಕೆಕೆಆರ್ ತಂಡವು ಯುವ ಮತ್ತು ಅನುಭವಿ ಆಟಗಾರರ ಸಮತೋಲನವನ್ನು ಹೊಂದಿದೆ.

ಟಿವಿ ಮತ್ತು ಲೈವ್ ಸ್ಟ್ರೀಮಿಂಗ್
ಪಂಜಾಬ್ ಕಿಂಗ್ಸ್ vs ಕೆಕೆಆರ್ ಸಂಭಾವ್ಯ ಪಂದ್ಯವನ್ನು ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಗಳಲ್ಲಿ ನೇರಪ್ರಸಾರ ಮಾಡಲಿದ್ದರೆ, Jio Cinema ಅಪ್ಲಿಕೇಶನ್‌ನಲ್ಲಿ ಡಿಜಿಟಲ್ ಲೈವ್ ಸ್ಟ್ರೀಮ್ ಆಗಿ ವೀಕ್ಷಿಸಬಹುದು.

ಪಂಜಾಬ್ ಕಿಂಗ್ಸ್ vs ಕೆಕೆಆರ್ ಆಡುವ 11ರ ಬಳಗ
ಪಂಜಾಬ್ ಕಿಂಗ್ಸ್ ತಂಡ: ಶಿಖರ್ ಧವನ್ (ನಾಯಕ), ಪ್ರಭ್‌ಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್), ಭಾನುಕಾ ರಾಜಪಕ್ಸಾ, ನಾಥನ್ ಎಲ್ಲಿಸ್, ಶಾರುಖ್ ಖಾನ್, ಜಿತೇಶ್ ಶರ್ಮಾ, ಸ್ಯಾಮ್ ಕರ್ರಾನ್, ಸಿಕಂದರ್ ರಝಾ, ರಾಹುಲ್ ಚಾಹರ್, ಹರ್‌ಪ್ರೀತ್ ಬ್ರಾರ್, ಅರ್ಷದೀಪ್ ಸಿಂಗ್.

ಕೆಕೆಆರ್ ತಂಡ: ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ನಿತೀಶ್ ರಾಣಾ (ನಾಯಕ), ರಿಂಕು ಸಿಂಗ್, ಮನ್‌ದೀಪ್ ಸಿಂಗ್, ಆಂಡ್ರೆ ರಸ್ಸೆಲ್, ಸುನಿಲ್ ನರೈನ್, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಅನುಕೂಲ್ ರಾಯ್, ಟಿಮ್ ಸೌಥಿ, ವರುಣ್ ಚಕ್ರವರ್ತಿ.

ಪಂಜಾಬ್ ಕಿಂಗ್ಸ್ ಇಂಪ್ಯಾಕ್ಟ್ ಪ್ಲೇಯರ್ಸ್ - ರಿಷಿ ಧವನ್, ಅಥರ್ವ ಟೈಡೆ, ಮ್ಯಾಥ್ಯೂ ಶಾರ್ಟ್, ಹರ್‌ಪ್ರೀತ್ ಸಿಂಗ್, ಮೋಹಿತ್ ರಾಠಿ.

ಕೆಕೆಆರ್ ಇಂಪ್ಯಾಕ್ಟ್ ಪ್ಲೇಯರ್ಸ್ - ಸುಯಶ್ ಶರ್ಮಾ, ವೈಭವ್ ಅರೋರಾ, ನಾರಾಯಣ್ ಜಗದೀಸನ್, ವೆಂಕಟೇಶ್ ಅಯ್ಯರ್, ಡೇವಿಡ್ ವೈಸ್.

Story first published: Saturday, April 1, 2023, 15:05 [IST]
Other articles published on Apr 1, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+