KKR vs RR: ಪ್ಲೇಆಫ್ ಹಾದಿ ಸುಗಮಗೊಳಿಸಲು ಮತ್ತೆರಡು ತಂಡಗಳ ಸೆಣೆಸಾಟ
ಇಂದು ಐಪಿಎಲ್‌ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗುತ್ತಿದೆ. ಟೂರ್ನಿಯ ಲೀಗ್ ಹಂತ ಅಂತಿಮ ಹಂತದವನ್ನು ತಲುಪುತ್ತಿದ್ದಂತೆಯೇ ಪ್ರತಿ ಪಂದ್ಯಗಳ ಫಲಿತಾಂಶಗಳು ಕೂಡ ನಿರ್ಣಾಯಕವಾಗಿದ್ದು ಟೂರ್ನಿಯಲ್ಲಿ ಪ್ಲೇಆಫ್ ಹಂತಕ್ಕೇರಲು ಎಲ್ಲಾ ತಂಡಗಳು ಕೊನೆಯ ಹಂತದ ಕಸರತ್ತು ನಡೆಸುತ್ತಿದೆ. ಇಂದು ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಮಡಗಳು ಮುಖಾಮುಖಿಯಾಗುತ್ತಿದೆ.
ಈ ಎರಡು ತಂಡಗಳು ಕೂಡ ಅಂಕಪಟ್ಟಿಯಲ್ಲಿ ಐದು ಹಾಗೂ ಆರನೇ ಸ್ಥಾನದಲ್ಲಿದೆ. ಎರಡು ತಂಡಗಳು ಕೂಡ 11 ಪಂದ್ಯಗಳನ್ನು ಆಡಿರುವ ಕಾರಣ ಇಂದಿನ ಪಂದ್ಯವೂ ಸೇರಿದಂತೆ ಒಟ್ಟು ಮೂರು ಪಂದ್ಉಯಗಳು ಮಾತ್ರವೇ ಬಾಕಿಯಿದೆ. ಹೀಗಾಗಿ ಪ್ರತಿ ಪಂದ್ಯಗಳಲ್ಲಿ ದೊರೆಯುವ ಎರಡು ಅಂಕಗಳು ಅತ್ಯಂತ ಮಹತ್ವ ಪಡೆದುಕೊಂಡಿದೆ. ಇದು ಅಭಿಮಾನಿಗಳಲ್ಲಿಯೂ ತೀವ್ರ ಕುತೂಹಲ ಕೆರಳಿಸಿದೆ.

ರಾಜಸ್ಥಾನ್ ರಾಯಲ್ಸ್ ತಂಡ ಈವರೆಗೆ ಆಡಿರುವ 11 ಪಂದ್ಯಗಳಲ್ಲಿ 5 ಗೆಲುವು ಸಾಧಿಸಿದ್ದು 6 ಸೋಲು ಕಂಡಿದೆ. ಹೀಗಾಗಿ 10 ಅಂಕಗಳೊಂದಿಗೆ 5ನೇ ಸ್ಥಾನದಲ್ಲಿದೆ ಆರ್‌ಆರ್. ಆರಂಭದಲ್ಲಿ ಅಮೋಘ ಪ್ರದರ್ಶನ ನೀಡಿ ಅಬ್ಬರಿಸಿದ್ದ ರಾಜಸ್ಥಾನ್ ರಾಯಲ್ಸ್ ಕಳೆದ ಆರು ಪಂದ್ಯಗಳಲ್ಲಿ ಐದು ಸೋಲು ಅನುಭವಿಸಿ ಸಂಕಷ್ಟದಲ್ಲಿದೆ. ಈ ಹಿಂದಿನ ಮೂರು ಪಂದ್ಯಗಳಲ್ಲಿ ಸೋಲು ಕಾಣುವ ಮೂಲಕ ಹ್ಯಾಟ್ರಿಕ್ ಸೋಲು ಕಂಡಿರುವ ಆರ್‌ಆರ್ ಸೋಲಿನ ಸುಳಿಯಿಂದ ಹೊರಬರುವ ಪ್ರಯತ್ನದಲ್ಲಿದೆ.
ಇನ್ನು ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಇತ್ತೀಚೆಗೆ ಅದ್ಭುತ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದೆ. ಆರ್‌ಆರ್ ರೀತಿಯಲ್ಲಿಯೇ ಆಡಿರುವ 11 ಪಂದ್ಯಗಳಲ್ಲಿ 5 ಗೆಲುವು ಸಾಧಿಸಿರುವ ಕೆಕೆಆರ್ 10 ಅಂಕಗಳನ್ನು ಪಡೆದುಕೊಂಡಿದೆ. ಪಂಜಾಬ್ ಕಿಂಗ್ಸ್ ವಿರುದ್ಧ ಬೃಹತ್ ರನ್ ಬೆನ್ನಟ್ಟಿ ಸಾಧಿಸಿರುವ ಗೆಲುವು ಕೆಕೆಆರ್ ಆತ್ಮವಿಶ್ವಾಸವನ್ನು ಮತ್ತಷ್ಟು ಹೆಚ್ಚಿಸಿರುವುದರಲ್ಲಿ ಅನುಮಾನವಿಲ್ಲ.
ಕೊಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣ ಈವರೆಗೆ ಐಪಿಎಲ್ ಇತಿಹಾಸದಲ್ಲಿ ಈವರೆಗೆ 83 ಪಂದ್ಯಗಳನ್ನು ಆಯೋಜನೆ ಮಾಡಿದೆ. ಈ ಮೈದಾನ ಬ್ಯಾಟಿಂಗ್ ಸ್ನೇಹಿ ಎನಿಸಿಕೊಂಡಿದ್ದು ದೇಶದ ಹೈಸ್ಕೋರಿಂಗ್ ತಾಣಗಳಲ್ಲಿ ಒಂದೆನಿಸಿಕೊಂಡಿದೆ. ಇಲ್ಲಿ 180ಕ್ಕಿಂತ ಕಡಿಮೆ ರನ್‌ಗಳಿಸಿದರೆ ರನ್ ರಕ್ಷಿಸಿಕೊಳ್ಳುವುದು ಅಸಾಧ್ಯ ಎಂಬಂಥಾ ಸನ್ನಿವೇಶವಿದೆ. ಹಾಗಾಗಿ ಇಲ್ಲಿಟಾಸ್ ಗೆದ್ದ ತಂಡ ರನ್ ಬೆನ್ನಟ್ಟುವ ನಿರ್ಧಾರ ತೆಗೆದುಕೊಳ್ಳುವುದು ಸಾಮಾನ್ಯ.
ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್ (ನಾಯಕ), ಯಶಸ್ವಿ ಜೈಸ್ವಾಲ್, ಶಿಮ್ರಾನ್ ಹೆಟ್ಮೆಯರ್, ದೇವದತ್ ಪಡಿಕ್ಕಲ್, ಜೋಸ್ ಬಟ್ಲರ್, ಧ್ರುವ ಜುರೆಲ್, ರಿಯಾನ್ ಪರಾಗ್, ಪ್ರಸಿದ್ಧ್ ಕೃಷ್ಣ, ಟ್ರೆಂಟ್ ಬೌಲ್ಟ್, ಒಬೆದ್ ಮೆಕಾಯ್, ನವದೀಪ್ ಸೈನಿ, ಕುಲದೀಪ್ ಸೇನ್, ಕುಲದೀಪ್ ಯಾದವ್, ಆರ್ ಅಶ್ವಿನ್, ಯುಜ್ವೇಂದ್ರ ಚಾಹಲ್, ಕೆಸಿ ಕಾರಿಯಪ್ಪ, ಜೇಸನ್ ಹೋಲ್ಡರ್, ಡೊನೊವನ್ ಫೆರೇರಾ, ಸಂದೀಪ್ ಶರ್ಮಾ, ಕುನಾಲ್ ರಾಥೋಡ್, ಆಡಮ್ ಝಂಪಾ, ಕೆಎಂ ಆಸಿಫ್, ಮುರುಗನ್ ಅಶ್ವಿನ್, ಆಕಾಶ್ ವಶಿಷ್ಟ್, ಅಬ್ದುಲ್ ಪಿ ಎ, ಜೋ ರೂಟ್
ಕೊಲ್ಕತ್ತಾ ನೈಟ್ ರೈಡರ್ಸ್: ನಿತೀಶ್ ರಾಣಾ (ನಾಯಕ), ವರುಣ್ ಚಕ್ರವರ್ತಿ, ಲಾಕಿ ಫರ್ಗುಸನ್, ರಹಮಾನುಲ್ಲಾ ಗುರ್ಬಾಜ್, ವೆಂಕಟೇಶ್ ಅಯ್ಯರ್, ಸುನಿಲ್ ನರೈನ್, ಹರ್ಷಿತ್ ರಾಣಾ, ಅನುಕುಲ್ ರಾಯ್, ಆಂಡ್ರೆ ರಸೆಲ್, ರಿಂಕು ಸಿಂಗ್, ಟಿಮ್ ಸೌಥಿ, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ವೈಭವ್ ಅರೋರಾ, ಎನ್ ಜಗದೀಸನ್, ಸುಯಶ್ ಶರ್ಮಾ, ಡೇವಿಡ್ ವೈಸ್, ಕುಲ್ವಂತ್ ಖೆಜ್ರೋಲಿಯಾ, ಲಿಟನ್ ದಾಸ್, ಮನ್‌ದೀಪ್ ಸಿಂಗ್, ಜೇಸನ್ ರಾಯ್, ಆರ್ಯ ದೇಸಾಯಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications