IPL 2023 KKR vs SRH: ಟಾಸ್ ಗೆದ್ದ ಕೆಕೆಆರ್ ಬೌಲಿಂಗ್ ಆಯ್ಕೆ: ಪ್ಲೇಯಿಂಗ್ 11

ಇಂಡಿಯನ್ ಪ್ರೀಮಿಯರ್ ಲೀಗ್ 2023ರ 19ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಕೊಲ್ಕತ್ತಾದ ಈಡನ್ ಗಾರ್ಡನ್‌ನ್ಲಲಿ ಈ ಪಂದ್ಯ ನಡೆಯುತ್ತಿದೆ.
ಈ ಬಾರಿಯ ಐಪಿಎಲ್‌ನ ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸೋಲು ಕಂಡಿದ್ದ ಕೆಕೆಆರ್ ಬಳಿಕ ಆರ್‌ಸಿಬಿ ತಂಡದ ವಿರುದ್ಧ ಗೆದ್ದು ಬೀಗಿತ್ತು. ಬಳಿಕ ಹಾಳಿ ಚಾಂಪಿಯನ್ ಗುಜರಾತ್ ಟೈಟನ್ಸ್ ವಿರುದ್ಧ ತವರಿನಾಚೆಗಿನ ಪಂದ್ಯದಲ್ಲಿ ಗೆದ್ದು ಬೀಗಿದ ಕೆಕೆಆರ್ ತನ್ನ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ. ಹೀಗಾಗಿ ಅಂಕಪಟ್ಟಿಯಲ್ಲಿ ಕೆಕೆಆರ್ ತಂಡ ಸದ್ಯ 4ನೇ ಸ್ಥಾನವನ್ನು ಪಡೆದುಕೊಂಡಿದೆ.
ಇತ್ತ ಸನ್‌ರೈಸರ್ಸ್ ಹೈದರಾಬಾದ್ ತಂಡ ಆರಂಬಿಕ ಎರಡು ಪಂದ್ಯಗಳಲ್ಲಿ ಸೋಲು ಅನುಭವಿಸಿ ಭಾರೀ ಹಿನ್ನಡೆಯಲ್ಲಿತ್ತು. ಆದರೆ ಈ ಹಿಂದಿನ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಿದ್ದು ಆ ಪಂದ್ಯದಲ್ಲಿ ಎಸ್‌ಆರ್‌ಹೆಚ್ ತಂಡ 8 ವಿಕೆಟ್‌ಗಳ ಅಂತರದ ಭಾರೀ ಗೆಲುವು ಸಾಧಿಸಿದೆ. ಈ ಮೂಲಕ ಟೂರ್ನಿಯಲ್ಲಿ ಮೊದಲ ಗೆಲುವು ಸಾಧಿಸಿದ್ದು ಈ ಗೆಲುವಿನ ಲಯವನ್ನು ಮುಂದುವರಿಸಿಕೊಂಡು ಹೋಗುವ ವಿಶ್ವಾಸದಲ್ಲಿದೆ.
ಕೊಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣ ಕೆಕೆಆರ್ ತಂಡದ ತವರು ಮೈದಾನವಾಗಿದ್ದು 79 ಐಪಿಎಲ್ ಪಂದ್ಯಗಳು ನಡೆದಿದೆ. ಸಾಮಾನ್ಯವಾಗಿ ಇಲ್ಲಿ ಬ್ಯಾಟಿಂಗ್ ಸ್ನೇಹಿ ಪಿಚ್ ಆಗಿದ್ದು ಹೈಸ್ಕೋರಿಂಗ್ ಮ್ಯಾಚ್‌ಗಳೂ ಹೆಚ್ಚಾಗಿ ನಡೆದಿದೆ. ಕ್ರೀಡಾಂಗಣ ಕೂಡ ಸಣ್ಣದಾಗಿರುವ ಕಾರಣ 180ಕ್ಕಿಂತ ಕಡಿಮೆ ಮೊತ್ತವನ್ನು ಇಲ್ಲಿ ರಕ್ಷಿಸಿಕೊಳ್ಳುವುದು ದೊಡ್ಡ ಸವಾಲಾಗಿರಲಿದೆ. ಹಾಗಾಗಿ ಇಲ್ಲಿ ಟಾಸ್ ಗೆದ್ದ ತಂಡ ಆರಂಭದಲ್ಲಿ ಬೌಲಿಂಗ್ ನಡೆಸುವ ತೀರ್ಮಾನ ತೆಗೆದುಕೊಳ್ಳುವುದು ಸಹಜ.
ಸನ್ ರೈಸರ್ಸ್ ಹೈದರಾಬಾದ್ ಆಡುವ ಬಳಗ: ಹ್ಯಾರಿ ಬ್ರೂಕ್, ಮಯಾಂಕ್ ಅಗರ್ವಾಲ್, ರಾಹುಲ್ ತ್ರಿಪಾಠಿ, ಐಡನ್ ಮಾರ್ಕ್ರಾಮ್(ನಾಯಕ), ಅಭಿಷೇಕ್ ಶರ್ಮಾ, ಹೆನ್ರಿಚ್ ಕ್ಲಾಸೆನ್(ವಿಕೆಟ್ ಕೀಪರ್), ಮಾರ್ಕೊ ಜಾನ್ಸೆನ್, ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಂಡೆ, ಉಮ್ರಾನ್ ಮಲಿಕ್, ಟಿ ನಟರಾಜನ್
ಕೋಲ್ಕತ್ತಾ ನೈಟ್ ರೈಡರ್ಸ್ ಆಡುವ ಬಳಗ : ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಎನ್ ಜಗದೀಸನ್, ನಿತೀಶ್ ರಾಣಾ (ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ಸುನಿಲ್ ನರೈನ್, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಸುಯಶ್ ಶರ್ಮಾ, ಲಾಕಿ ಫರ್ಗುಸನ್, ವರುಣ್ ಚಕ್ರವರ್ತಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications