For Quick Alerts
ALLOW NOTIFICATIONS  
For Daily Alerts
 

KKR vs SRH: ಮತ್ತೊಂದು ರೋಚಕ ಪಂದ್ಯ: ರಾಣಾ, ರಿಂಕು ಹೋರಾಟ ವ್ಯರ್ಥ: ಸನ್‌ರೈಸರ್ಸ್‌ಗೆ ಅಮೋಘ ಗೆಲುವು

ಇಂಡಿಯನ್ ಪ್ರೀಮಿಯರ್ ಲೀಗ್ ಮತ್ತೊಂದು ರೋಚಕ ಪಂದ್ಯಕ್ಕೆ ಸಾಕ್ಷಿಯಾಗಿದೆ. ಕೊಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ನಡೆಸದ ಈ ಪಂದ್ಯದಲ್ಲಿ ರನ್ ಮಳೆಯೇ ಹರಿದಿದ್ದು ಎರಡು ತಂಡಗಳ ಕೆಲ ಬ್ಯಾಟರ್‌ಗಳು ಅಮೋಘ ಪ್ರದರ್ಶನ ನೀಡಿದ್ದಾರೆ. ಈ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ 23 ರನ್‌ಗಳ ಅಂತರದಿಂದ ಗೆದ್ದು ಬೀಗಿದ್ದು ಕೆಕೆಆರ್ ತಂಡ ತವರಿನ ಅಂಗಳದಲ್ಲಿ ಸೋಲಿನ ರುಚಿ ಕಂಡಿದೆ.

ಈ ಪಂದ್ಯದಲ್ಲಿ ಮೊದಲಿಗೆ ಬ್ಯಾಟಿಂಗ್ ಮಾಡಿದ ಸನ್‌ರೈಸರ್ಸ್ ಹೈದರಾಬಾದ್ ತಂಡ ಕೆಕೆಆರ್‌ಗೆ ಭಾರೀ ದೊಡ್ಡ ಮೊತ್ತದ ಗುರಿಯನ್ನು ನಿಗದಿಪಡಿಸಿತ್ತು. ಹ್ಯಾರಿ ಬ್ರೂಕ್ ಅಮೋಘ ಶತಕ ಹಾಗೂ ನಾಯಕ ಐಡೆನ್ ಮಾರ್ಕ್ರಮ್ ಅರ್ಧ ಶತಕದ ನೆರವಿನಿಂದ ಎಸ್‌ಆರ್‌ಹೆಚ್ ತಂಡ ನಾಲ್ಕು ವಿಕೆಟ್ ಕಳೆದುಕೊಂಡು ಬರೊಬ್ಬರಿ 228 ರನ್‌ಗಳನ್ನು ಗಳಿಸಿತ್ತು. ಈ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಕೆಕೆಆರ್ ತಂಡಕ್ಕೆನಾಯಕ ನಿತೀಶ್ ರಾಣಾ ಹಾಗೂ ರಿಂಕು ಸಿಂಗ್ ಆಸರೆಯಾದರು. ಆದರೆ ಗೆಲುವಿನ ದಟ ದಾಟಿಸಲು ಈ ಆಟಗಾರರಿಂದ ಸಾಧ್ಯವಾಗಲಿಲ್ಲ.

IPL 2023 KKR vs SRH: Sunrisers Hyderabad win against Kolkata Knight Riders By 23

ಸನ್‌ರೈಸರ್ಸ್ ತಂಡದ ಆಟಗಾರ ಹ್ಯಾರಿ ಬ್ರೂಕ್ ಐಪಿಎಲ್‌ನಲ್ಲಿ ಪರಿಣಾಮಕಾರಿ ಪ್ರದರ್ಶನ ನೀಡುವಲ್ಲಿ ಈವರೆಗೆ ವಿಫಲವಾಗಿದ್ದರು. ಆದರೆ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸುವಲ್ಲಿ ಅವರು ಸಫಲವಾದರು. ಆರಂಭಿಕನಾಗಿ ಕಣಕ್ಕಿಳಿದು ಅಮೋಘ ಪ್ರದರ್ಶಿಸಿದ ಅವರು 55 ಎಸೆತಗಳನ್ನು ಎದುರಿಸಿದ್ದು 12 ಬೌಂಡರಿ ಹಾಗೂ 3 ಸಿಕ್ಸರ್ ಸಿಡಿಸಿದ್ದಾರೆ. 181.82ರ ಸ್ಟ್ರೈಕ್‌ರೇಟ್‌ನಲ್ಲಿ ಭರ್ತಿ 100 ರನ್‌ ಸಿಡಿಸಿ ಮಿಂಚಿದರು

ಇನ್ನು ಈ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ನಾಯಕ ಐಡೆನ್ ಮಾರ್ಕ್ರಮ್ ಕೂಡ ಅಬ್ಬರಿಸಿದರು. 26 ಎಸೆತಗಳನ್ನು ಎದುರಿಸಿದ ಅವರು 2 ಬೌಂಡರಿ ಹಾಗೂ 5 ಭರ್ಜರಿ ಸಿಕ್ಸರ್ ಸಿಡಿಸಿದ್ದು 50 ರನ್‌ಗಳಿಸಿ ಔಟಾದರು. 192.31ರಸ್ಟ್ರೈಕ್‌ರೇಟ್‌ನಲ್ಲಿ ಅವರು ಬ್ಯಾಟ್ ಬೀಸಿದ್ದಾರೆ. ಉಳಿದಂತೆ ಅಭಿಶೇಕ್ ಶರ್ಮಾ 17 ಎಸೆತಗಳಲ್ಲಿ 32 ರನ್ ಸಿಡಿಸಿದ್ದು ಹೆನ್ರಿಕ್ ಕ್ಲಾಸೆನ್ 6 ಎಸೆತಗಳಲ್ಲಿ 16 ರನ್ ಬಾರಿಸಿದರು.

ಸನ್‌ರೈಸರ್ಸ್ ಹೈದರಾಬಾದ್ ನೀಡಿದ ಈ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಕೆಕೆಆರ್ ತಂಡಕ್ಕೆ ಆರಂಭದಲ್ಲಿಯೇ ಆಘಾತವುಂಟಾಯಿತು. ರಹ್ಮನಿಲ್ಲಾ ಗುರ್ಬಾಜ್ ಆರಂಭದಲ್ಲಿಯೇ ವಿಕೆಟ್ ಕಳೆದುಕೊಂಡರು. ಎನ್ ಜಗದೀಶನ್ ಅವರಿಂದ ಮತ್ತೊಂದು ಉತ್ತಮ ಪ್ರದರ್ಶನ ಬಂದಿತಾದರೂ ವೆಂಕಟೇಶ್ ಐಯ್ಯರ್, ಸುನಿಲ್ ನರೈನ್, ಆಂಡ್ರೆ ರಸೆಲ್ ವೈಫಲ್ಯ ಕಂಡರು. ಆದರೆ ನಾಯಕ ನಿತೀಶ್ ರಾಣಾ ಅವರಿಂದು ಅಮೋಘ ಪ್ರದರ್ಶನ ವ್ಯಕ್ತವಾಯಿತು.

ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ನಿತೀಶ್ ರಾಣಾ 41 ಎಸೆತಗಳಲ್ಲಿ 75 ರನ್‌ಗಳನ್ನು ಗಳಿಸಿದರು. ಇದರಲ್ಲಿ ಐದು ಬೌಂಡರಿ ಹಾಗೂ ಆರು ಸಿಕ್ಸ್ ಒಳಗೊಂಡಿತ್ತು. ಇನ್ನು ಮತ್ತೋರ್ವ ಆಟಗಾರ ರಿಂಕು ಸಿಂಗ್ ಕೂಡ ಈ ಪಂದ್ಯದಲ್ಲಿಯೂ ಅಮೋಘಃ ಪ್ರದರ್ಶನ ನೀಡಿ ಗೆಲುವಿಗಾಗಿ ಮತ್ತೊಮ್ಮೆ ಹೋರಾಟ ನಡೆಸಿದರು. ರಿಂಕು ಈ ಪಂದ್ಯದಲ್ಲಿ 31 ಎಸೆತಗಳಲ್ಲಿ 58 ರನ್‌ಗಳಿಸಿ ಅಜೇಯವಾಗುಳಿದರು. ಅಂತಿಮವಾಗಿ ನಿಗದಿತ 20 ಓವರ್‌ನಲ್ಲಿ ಕೆಕೆಆರ್ 205 ರನ್‌ಗಳನ್ನು ಗಳಿಸಲು ಶಕ್ತವಾಯಿತು. ಹೀಗಾಗಿ 23 ರನ್‌ಗಳ ಅಂತರದ ಸೋಲು ಅನುಭವಿಸಿದೆ.

ಸನ್ ರೈಸರ್ಸ್ ಹೈದರಾಬಾದ್ ಆಡುವ ಬಳಗ: ಹ್ಯಾರಿ ಬ್ರೂಕ್, ಮಯಾಂಕ್ ಅಗರ್ವಾಲ್, ರಾಹುಲ್ ತ್ರಿಪಾಠಿ, ಐಡನ್ ಮಾರ್ಕ್ರಾಮ್(ನಾಯಕ), ಅಭಿಷೇಕ್ ಶರ್ಮಾ, ಹೆನ್ರಿಚ್ ಕ್ಲಾಸೆನ್(ವಿಕೆಟ್ ಕೀಪರ್), ಮಾರ್ಕೊ ಜಾನ್ಸೆನ್, ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಂಡೆ, ಉಮ್ರಾನ್ ಮಲಿಕ್, ಟಿ ನಟರಾಜನ್
ಬೆಂಚ್: ಆದಿಲ್ ರಶೀದ್, ಅಕೇಲ್ ಹೊಸೈನ್, ಗ್ಲೆನ್ ಫಿಲಿಪ್ಸ್, ಸಮರ್ಥ್ ವ್ಯಾಸ್, ಅನ್ಮೋಲ್ಪ್ರೀತ್ ಸಿಂಗ್, ಮಯಾಂಕ್ ದಾಗರ್, ಉಪೇಂದ್ರ ಯಾದವ್, ಕಾರ್ತಿಕ್ ತ್ಯಾಗಿ, ಸನ್ವಿರ್ ಸಿಂಗ್, ಫಜಲ್ಹಕ್ ಫಾರೂಕಿ, ಅಬ್ದುಲ್ ಸಮದ್, ನಿತೀಶ್ ರೆಡ್ಡಿ, ವಿವ್ರಾಂತ್ ಶರ್ಮಾ, ವಾಷಿಂಗ್ಟನ್ ಸುಂದರ್

ಕೋಲ್ಕತ್ತಾ ನೈಟ್ ರೈಡರ್ಸ್ ಆಡುವ ಬಳಗ : ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಎನ್ ಜಗದೀಸನ್, ನಿತೀಶ್ ರಾಣಾ (ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ಸುನಿಲ್ ನರೈನ್, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಸುಯಶ್ ಶರ್ಮಾ, ಲಾಕಿ ಫರ್ಗುಸನ್, ವರುಣ್ ಚಕ್ರವರ್ತಿ
ಬೆಂಚ್: ವೆಂಕಟೇಶ್ ಅಯ್ಯರ್, ಅನುಕೂಲ್ ರಾಯ್, ವೈಭವ್ ಅರೋರಾ, ಡೇವಿಡ್ ವೈಸ್, ಮನದೀಪ್ ಸಿಂಗ್, ಟಿಮ್ ಸೌಥಿ, ಜೇಸನ್ ರಾಯ್, ಲಿಟ್ಟನ್ ದಾಸ್, ಕುಲ್ವಂತ್ ಖೆಜ್ರೋಲಿಯಾ, ಹರ್ಷಿತ್ ರಾಣಾ

Story first published: Friday, April 14, 2023, 23:34 [IST]
Other articles published on Apr 14, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+