For Quick Alerts
ALLOW NOTIFICATIONS  
For Daily Alerts
 

IPL 2023: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯ ತಪ್ಪಿಸಿಕೊಂಡಿದ್ಯಾಕೆ ಪಂಜಾಬ್ ಕಿಂಗ್ಸ್ ನಾಯಕ ಶಿಖರ್ ಧವನ್

ಇಂಡಿಯನ್ ಪ್ರೀಮಿಯರ್ ಲೀಗ್‌ 2023ರ ಆವೃತ್ತಿಯಲ್ಲಿ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶಿಖರ್ ಧವನ್ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ. ತಂಡದ ಪರವಾಗಿ ಅತ್ಯಂತ ಹೆಚ್ಚು ರನ್ ಗಳಿಸಿರುವ ಅವರು ತಂಡದ ಬ್ಯಾಟಿಂಗ್‌ನ ಆಧಾರ ಸ್ಥಂಭವಾಗಿದ್ದಾರೆ. ಶನಿವಾರ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಅವರು ಕಣಕ್ಕಿಳಿಯದಿರುವುದು ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ. ಗಾಯದ ಕಾರಣದಿಂದ ಅವರು ಲಕ್ನೋ ವಿರುದ್ಧದ ಪಂದ್ಯ ತಪ್ಪಿಸಿಕೊಂಡಿದ್ದಾರೆ.

ಶಿಖರ್ ಧವನ್ ಧವನ್ ಅನುಪಸ್ಥಿತಿಯಲ್ಲಿ ಸ್ಯಾಮ್ ಕರನ್ ತಂಡದ ನಾಯಕತ್ವ ವಹಿಸಿಕೊಂಡಿದ್ದರು. ಟಾಸ್ ಬಳಿಕ ಮಾತನಾಡಿದ ಸ್ಯಾಮ್ ಕರನ್, ಶಿಖರ್ ಧವನ್ ಭುಜದ ಗಾಯದಿಂದ ಬಳಲುತ್ತಿದ್ದಾರೆ ಎನ್ನುವ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಧವನ್ ಗಾಯಗೊಂಡಿರುವುದು ತಂಡಕ್ಕೆ ಆತಂಕವನ್ನುಂಟು ಮಾಡಿದೆ. ಇದುವರೆಗೆ ಆಡಿರುವ ನಾಲ್ಕು ಪಂದ್ಯಗಳಲ್ಲಿ 233 ರನ್ ಗಳಿಸಿ ಮಿಂಚಿದ್ದಾರೆ.

Shikhar Dhawan

ಶೀಖರ್ ಧವನ್ ಬಗ್ಗೆ ಮಾಹಿತಿ ನೀಡಿದ ಸ್ಯಾಮ್ ಕರನ್, "ಶಿಖರ್ ಧವನ್ ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯದ ಸಂದರ್ಭದಲ್ಲಿ ಗಾಯಗೊಂಡರು. ಅವರ ಗಾಯದ ಪರಿಸ್ಥಿತಿ ಬಗ್ಗೆ ಇನ್ನೂ ತಿಳಿದಿಲ್ಲ, ಅವರು ಹೆಚ್ಚಿನ ಸಮಯದವರೆಗೆ ಫೀಲ್ಡ್‌ನಿಂದ ಹೊರಗಿರುವುದಿಲ್ಲ ಎಂದು ಭಾವಿಸುತ್ತೇನೆ. ಮುಂದಿನ ಪಂದ್ಯದಲ್ಲಿ ಅವರು ಫಿಟ್ ಆಗಬಹುದು. ಅವರ ಅನುಪಸ್ಥಿತಿ ತಂಡಕ್ಕೆ ದೊಡ್ಡ ಹಿನ್ನಡೆ" ಎಂದು ಹೇಳಿದರು.

Shikhar Dhawan

ಪ್ರಮುಖ ಆಟಗಾರರಿಗೆ ಗಾಯದ ಸಮಸ್ಯೆ

ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯಕ್ಕೆ ಮುನ್ನವೇ ತಂಡದ ಪ್ರಮುಖ ಸ್ಫೋಟಕ ಆಲ್‌ರೌಂಡರ್ ಲಿಯಾಮ್ ಲಿವಿಂಗ್‌ಸ್ಟೋನ್ ತಂಡವನ್ನು ಸೇರಿಕೊಂಡಿದ್ದರೂ ಅವರು ಪ್ಲೇಯಿಂಗ್ 11 ನಲ್ಲಿ ಸ್ಥಾನ ಪಡೆದುಕೊಂಡಿರಲಿಲ್ಲ, ಶನಿವಾರ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಕೂಡ ಅವರು ಕಣಕ್ಕಿಳಿಯದಿರುವುದು ಮತ್ತೊಂದು ದೊಡ್ಡ ಹೊಡೆತವಾಗಿದೆ.

ಶಿಖರ್ ಧವನ್ ಪಂಜಾಬ್ ಪರವಾಗಿ ಬ್ಯಾಟಿಂಗ್‌ನ ಆಧಾರ ಸ್ಥಂಭವಾಗಿದ್ದಾರೆ, ಸನ್‌ರೈಸರ್ಸ್ ಹೈದರಾಬಾದ್‌ ವಿರುದ್ಧ ಅವರು ಮೊದಲ ಓವರ್ ನಿಂದ ಕೊನೆಯ ಓವರ್ ವರೆಗೆ ಬ್ಯಾಟಿಂಗ್ ಮಾಡಿ ಅಜೇಯ 99 ರನ್ ಗಳಿಸಿದ್ದರು. ಮೊದಲ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿದ ಪಂಜಾಬ್ ನಂತರ ಎರಡು ಪಂದ್ಯಗಳಲ್ಲಿ ಸೋಲನುಭವಿಸಿತ್ತು.

ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಶಿಖರ್ ಧವನ್ ಬದಲಾಗಿ ಅಥರ್ವ ಟೈಡೆ ಅವರು ಅವಕಾಶ ಪಡೆದುಕೊಂಡರು. ಆದರೆ, ಮೂರು ಎಸೆತಗಳನ್ನು ಆಡಿದ ಅವರು ಯಾವುದೇ ರನ್ ಗಳಿಸದೇ ಔಟಾಗುವ ಮೂಲಕ ನಿರಾಸೆ ಮೂಡಿಸಿದರು. ಮುಂದಿನ ಪಂದ್ಯದ ವೇಳೆಗೆ ಶಿಖರ್ ಧವನ್ ಫಿಟ್ ಆಗುವ ಸಾಧ್ಯತೆ ಇದ್ದು, ಅತ್ಯುತ್ತಮ ಪ್ರದರ್ಶನ ಮುಂದುವರೆಸುವ ವಿಶ್ವಾಸದಲ್ಲಿದ್ದಾರೆ.

ಲಕ್ನೋ ವಿರುದ್ಧ ಗೆಲುವು ಸಾಧಿಸಿದ ಪಂಜಾಬ್

ಶಿಖರ್ ಧವನ್ ಅನುಪಸ್ಥಿತಿಯಲ್ಲಿ ಕೂಡ ಪಂಜಾಬ್ ಕಿಂಗ್ಸ್ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಮಣಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 159 ರನ್ ಗಳಸಿತು. ಈ ಮೊತ್ತವನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ಆಲ್‌ರೌಂಡರ್ ಸಿಕಂದರ್ ರಾಜಾ ಅರ್ಧಶತಕ ಮತ್ತು ಶಾರೂಖ್ ಖಾನ್ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ 8 ವಿಕೆಟ್‌ಗಳ ಜಯ ಸಾಧಿಸಿತು. ಸತತ ಎರಡು ಸೋಲುಗಳನ್ನು ಕಂಡ ಬಳಿಕ ಪಂಜಾಬ್ ಕಿಂಗ್ಸ್ ಮತ್ತೆ ಗೆಲುವಿನ ಹಳಿಗೆ ಮರಳಿದೆ.

Story first published: Saturday, April 15, 2023, 23:47 [IST]
Other articles published on Apr 15, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+