Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

LSG vs KKR: ಮಹತ್ವದ ಪಂದ್ಯದ ಟಾಸ್ ವರದಿ, ಪ್ಲೇಯಿಂಗ್ 11 & ಲೈವ್ ಸ್ಕೋರ್

IPL 2023: Kolkata Knight Riders vs Lucknow Super Giants toss report, playing 11 & live score

ಕಳೆದ ಮಾರ್ಚ್ ತಿಂಗಳಾಂತ್ಯದಲ್ಲಿ ಆರಂಭಗೊಂಡ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತ ಮುಕ್ತಾಯದ ಹಂತ ತಲುಪಿದೆ.

ಇಂದು ( ಮೇ 20 ) ಹಾಗೂ ನಾಳೆ ( ಮೇ 21 ) ಟೂರ್ನಿಯ ಲೀಗ್ ಹಂತದ ಕೊನೆಯ 4 ಪಂದ್ಯಗಳು ಜರುಗುತ್ತಿವೆ. ಇಂದು ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವಿನ ಪಂದ್ಯ ಆಯೋಜನೆಯಾಗಿವೆ.

ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಭರ್ಜರಿ ಜಯ ಸಾಧಿಸಿದ್ದು, ಇದೀಗ ದಿನದ ಎರಡನೇ ಪಂದ್ಯ ಆರಂಭಗೊಂಡಿದೆ. ಟಾಸ್ ಗೆದ್ದಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ನಿತೀಶ್ ರಾಣಾ ಫೀಲ್ಡಿಂಗ್ ಆಯ್ದುಕೊಂಡಿದ್ದು, ತಮ್ಮ ಎದುರಾಳಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದಾರೆ.

ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದ್ದು, ಪಂದ್ಯದಲ್ಲಿ ಕಣಕ್ಕಿಳಿದಿರುವ ಆಡುವ ಬಳಗ ಈ ಕೆಳಕಂಡಂತಿದೆ..

ಕೋಲ್ಕತ್ತಾ ನೈಟ್ ರೈಡರ್ಸ್ (ಪ್ಲೇಯಿಂಗ್ XI): ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಜೇಸನ್ ರಾಯ್, ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ (ನಾಯಕ), ಆಂಡ್ರೆ ರಸೆಲ್, ರಿಂಕು ಸಿಂಗ್, ಶಾರ್ದೂಲ್ ಠಾಕೂರ್, ಸುನಿಲ್ ನರೈನ್, ವೈಭವ್ ಅರೋರಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ

ಲಕ್ನೋ ಸೂಪರ್ ಜೈಂಟ್ಸ್ (ಪ್ಲೇಯಿಂಗ್ XI): ಕ್ವಿಂಟನ್ ಡಿ ಕಾಕ್(ವಿಕೆಟ್ ಕೀಪರ್), ಕರಣ್ ಶರ್ಮಾ, ಪ್ರೇರಕ್ ಮಂಕಡ್, ಮಾರ್ಕಸ್ ಸ್ಟೋನಿಸ್, ನಿಕೋಲಸ್ ಪೂರನ್, ಕೃನಾಲ್ ಪಾಂಡ್ಯ(ನಾಯಕ), ಆಯುಷ್ ಬಡೋನಿ, ಕೃಷ್ಣಪ್ಪ ಗೌತಮ್, ರವಿ ಬಿಷ್ಣೋಯ್, ನವೀನ್-ಉಲ್-ಹಕ್, ಮೊಹ್ಸಿನ್ ಖಾನ್

ಪ೦ದ್ಯದ ಲೈವ್ ಸ್ಕೋರ್ ಅಪ್‌ಡೇಟ್ ಈ ಕೆಳಕಂಡಂತಿದೆ..

1
57123

ಇನ್ನು ಟೂರ್ನಿಯಲ್ಲಿ ಇಲ್ಲಿಯವರೆಗೂ 13 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಫಲಿತಾಂಶ ಕಾಣದೇ ಇರುವ ಲಕ್ನೋ ಸೂಪರ್ ಜೈಂಟ್ಸ್ ತಂಡ 15 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದು, ಈ ಪಂದ್ಯದಲ್ಲಿ ಗೆದ್ದರೆ 17 ಅಂಕಗಳನ್ನು ಪಡೆದುಕೊಂಡು ಪ್ಲೇಆಫ್‌ಗೆ ಲಗ್ಗೆ ಇಡಲಿದೆ.

ಇನ್ನು 13 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 7 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದ್ದು, ಈ ಪಂದ್ಯವನ್ನು ಗೆದ್ದರೂ ಸಹ ಪ್ಲೇಆಫ್ ಅನುಮಾನವಾಗಿದೆ. ಆದರೆ ಈ ಪಂದ್ಯದಲ್ಲಿ ಕೆಕೆಆರ್ ಗೆದ್ದರೆ ಲಕ್ನೋ ತಂಡದ ಪ್ಲೇಆಫ್ ಆಸೆ ಮಣ್ಣಾಗುವುದಂತೂ ಪಕ್ಕಾ. ಹೀಗಾಗಿ ಈ ಪಂದ್ಯ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.

Story first published: Saturday, May 20, 2023, 19:28 [IST]
Other articles published on May 20, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+