
ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 53ನೇ ಪಂದ್ಯ ಇಂದು ( ಮೇ 8 ) ಜರುಗಲಿದ್ದು, ಈ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ.
ಈ ಪಂದ್ಯ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ರಾತ್ರಿ 7.30ಕ್ಕೆ ಆರಂಭಗೊಳ್ಳಲಿದೆ. ಇನ್ನು ಪಂಜಾಬ್ ಕಿಂಗ್ಸ್ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 10 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತು 10 ಅಂಕಗಳನ್ನು ಪಡೆದುಕೊಳ್ಳುವ ಮೂಲಕ ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದ್ದು, ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 10 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು, 6 ಪಂದ್ಯಗಳಲ್ಲಿ ಸೋತು 8 ಅಂಕಗಳನ್ನು ಪಡೆದುಕೊಳ್ಳುವ ಮೂಲಕ ಅಂಕಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ.
ಈ ಮೂಲಕ ಪಂಜಾಬ್ ಕಿಂಗ್ಸ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕಿಂತ ಒಂದು ಪಂದ್ಯ ಹೆಚ್ಚು ಗೆದ್ದು ಅಂಕಪಟ್ಟಿಯಲ್ಲಿ ಉತ್ತಮ ಸ್ಥಾನದಲ್ಲಿದೆ. ಈ ಎರಡೂ ತಂಡಗಳೂ ಸಹ ಪ್ಲೇಆಫ್ ರೇಸ್‌ನಲ್ಲಿದ್ದು, ಈ ಪಂದ್ಯದಲ್ಲಿ ಗೆಲ್ಲಲೇಬೇಕಾದ ಗುರಿಯನ್ನು ಹೊಂದಿವೆ.
ಇನ್ನು ಇತ್ತಂಡಗಳು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಪರಸ್ಪರ ಮುಖಾಮುಖಿಯಾಗಲಿರುವ ಎರಡನೇ ಪಂದ್ಯ ಇದಾಗಿದ್ದು, ಏಪ್ರಿಲ್ 1ರಂದು ನಡೆದಿದ್ದ ಟೂರ್ನಿಯ ಎರಡನೇ ಪಂದ್ಯದಲ್ಲಿ ಮೊದಲ ಬಾರಿಗೆ ಮುಖಾಮುಖಿಯಾಗಿದ್ದಾಗ ಸೋತಿದ್ದ ಪ್ರತೀಕಾರವನ್ನು ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ತೀರಿಸಿಕೊಳ್ಳುವ ಯೋಜನೆಯಲ್ಲಿದೆ.
ಹೀಗೆ ಈ ಪಂದ್ಯದಲ್ಲಿ ಯಾವ ತಂಡ ಗೆಲ್ಲಬಹುದು ಎಂಬ ಚರ್ಚೆಗಳು ಜೋರಾಗಿದ್ದು, ಈ ಚರ್ಚೆಗಳ ಜತೆಗೆ ಡ್ರೀಮ್ ಟೀಮ್ ಪ್ರಿಯರು ಈ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಬಲ್ಲ ಆಟಗಾರರನ್ನು ಆರಿಸಿ ಫ್ಯಾಂಟಸಿ ತಂಡಗಳನ್ನು ರಚಿಸುತ್ತಿದ್ದಾರೆ. ಹೀಗೆ ಡ್ರೀಮ್ ಟೀಮ್ ರಚಿಸುತ್ತಿರುವ ಕ್ರಿಕೆಟ್ ಪ್ರಿಯರು ಈ ಕೆಳಕಂಡಂತೆ ತಂಡಗಳನ್ನು ರಚಿಸಿದರೆ ಹೆಚ್ಚಿನ ಫ್ಯಾಂಟಸಿ ಅಂಕಗಳನ್ನು ಗಳಿಸಬಹುದಾಗಿದೆ.
ಡ್ರೀಮ್ ಟೀಮ್ 1 :
ವಿಕೆಟ್ ಕೀಪರ್ - ಜಿತೇಶ್ ಶರ್ಮಾ, ರಹಮಾನುಲ್ಲಾ ಗುರ್ಬಾಜ್
ಬ್ಯಾಟ್ಸ್‌ಮನ್‌ಗಳು - ಶಿಖರ್ ಧವನ್, ಜೇಸನ್ ರಾಯ್, ನಿತೀಶ್ ರಾಣಾ
ಆಲ್ ರೌಂಡರ್‌ಗಳು - ಆಂಡ್ರೆ ರಸೆಲ್ (ಉಪನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕರ್ರಾನ್ (ನಾಯಕ), ಮ್ಯಾಥ್ಯೂ ಶಾರ್ಟ್
ಬೌಲರ್‌ಗಳು - ವರುಣ್ ಚಕ್ರವರ್ತಿ, ಅರ್ಷದೀಪ್ ಸಿಂಗ್
ಡ್ರೀಮ್ ಟೀಮ್ 2:
ವಿಕೆಟ್ ಕೀಪರ್ - ಜಿತೇಶ್ ಶರ್ಮಾ, ರಹಮಾನುಲ್ಲಾ ಗುರ್ಬಾಜ್
ಬ್ಯಾಟ್ಸ್‌ಮನ್‌ಗಳು - ಶಿಖರ್ ಧವನ್ (ಉಪನಾಯಕ), ಜೇಸನ್ ರಾಯ್, ನಿತೀಶ್ ರಾಣಾ
ಆಲ್ ರೌಂಡರ್‌ಗಳು - ಆಂಡ್ರೆ ರಸೆಲ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕರ್ರಾನ್
ಬೌಲರ್‌ಗಳು - ವರುಣ್ ಚಕ್ರವರ್ತಿ, ಅರ್ಷದೀಪ್ ಸಿಂಗ್, ನಾಥನ್ ಎಲ್ಲಿಸ್
ಸಂಭಾವ್ಯ ಆಡುವ ಬಳಗಗಳು:
ಪಂಜಾಬ್ ಕಿಂಗ್ಸ್: ಶಿಖರ್ ಧವನ್ (ನಾಯಕ), ಪ್ರಭ್‌ಸಿಮ್ರಾನ್ ಸಿಂಗ್, ಮ್ಯಾಥ್ಯೂ ಶಾರ್ಟ್, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ(ವಾಕ್), ಸ್ಯಾಮ್ ಕುರಾನ್, ಶಾರುಖ್ ಖಾನ್, ಹರ್‌ಪ್ರೀತ್ ಬ್ರಾರ್, ರಿಷಿ ಧವನ್, ರಾಹುಲ್ ಚಾಹರ್, ಅರ್ಶ್‌ದೀಪ್ ಸಿಂಗ್, ನಾಥನ್ ಎಲ್ಲಿಸ್
ಕೊಲ್ಕತ್ತಾ ನೈಟ್ ರೈಡರ್ಸ್: ಕೋಲ್ಕತ್ತಾ ನೈಟ್ ರೈಡರ್ಸ್: ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಜೇಸನ್ ರಾಯ್, ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ (ನಾಯಕ), ಆಂಡ್ರೆ ರಸೆಲ್, ರಿಂಕು ಸಿಂಗ್, ಸುನಿಲ್ ನರೈನ್, ಶಾರ್ದೂಲ್ ಠಾಕೂರ್, ವೈಭವ್ ಅರೋರಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ಅನುಕುಲ್ ರಾಯ್