KKR vs PBKS: ಪಂದ್ಯದ ಟಾಸ್ ವರದಿ, ಪ್ಲೇಯಿಂಗ್ 11 & ಲೈವ್ ಸ್ಕೋರ್

ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 53ನೇ ಪಂದ್ಯ ಇಂದು ( ಮೇ 8 ) ನಡೆಯುತ್ತಿದ್ದು, ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿವೆ.
ಈ ಪಂದ್ಯ ಕೊಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯುತ್ತಿದ್ದು, ಟಾಸ್ ಗೆದ್ದಿರುವ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶಿಖರ್ ಧವನ್ ಮೊದಲು ಬ್ಯಾಟಿಂಗ್ ಮಾಡುವ ಆಯ್ಕೆ ಮಾಡಿಕೊಂಡಿದ್ದಾರೆ.
ಪಂಜಾಬ್ ಕಿಂಗ್ಸ್ ತಂಡದಿಂದ ಮ್ಯಾಥ್ಯೂ ಶಾರ್ಟ್ ಹೊರಗುಳಿದಿದ್ದು, ಭಾನುಕ ರಾಜಪಕ್ಸೆ ಆಡುವ ಬಳಗ ಸೇರಿದ್ದಾರೆ. ಅತ್ತ ಕೊಲ್ಕತ್ತಾ ನೈಟ್ ರೈಡರ್ಸ್ ಆಡುವ ಬಳಗದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
ಆಡುವ ಬಳಗಗಳು:
ಕೊಲ್ಕತ್ತಾ ನೈಟ್ ರೈಡರ್ಸ್ ಆಡುವ ಬಳಗ: ರಹಮಾನುಲ್ಲಾ ಗುರ್ಬಾಜ್(ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ(ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ಸುನಿಲ್ ನರೈನ್, ಶಾರ್ದೂಲ್ ಠಾಕೂರ್, ವೈಭವ್ ಅರೋರಾ, ಹರ್ಷಿತ್ ರಾಣಾ, ಸುಯಶ್ ಶರ್ಮಾ, ವರುಣ್ ಚಕ್ರವರ್ತಿ
ಪಂಜಾಬ್ ಕಿಂಗ್ಸ್ ಆಡುವ ಬಳಗ: ಪ್ರಭಾಸಿಮ್ರಾನ್ ಸಿಂಗ್, ಶಿಖರ್ ಧವನ್(ನಾಯಕ), ಭಾನುಕಾ ರಾಜಪಕ್ಸೆ, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ(ವಿಕೆಟ್ ಕೀಪರ್), ಸ್ಯಾಮ್ ಕುರಾನ್, ಶಾರುಖ್ ಖಾನ್, ಹರ್‌ಪ್ರೀತ್ ಬ್ರಾರ್, ರಿಷಿ ಧವನ್, ರಾಹುಲ್ ಚಾಹರ್, ಅರ್ಶ್‌ದೀಪ್ ಸಿಂಗ್
ಇನ್ನು ಪಂಜಾಬ್ ಕಿಂಗ್ಸ್ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 10 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತು 10 ಅಂಕಗಳನ್ನು ಪಡೆದುಕೊಳ್ಳುವ ಮೂಲಕ ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದ್ದು, ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 10 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು, 6 ಪಂದ್ಯಗಳಲ್ಲಿ ಸೋತು 8 ಅಂಕಗಳನ್ನು ಪಡೆದುಕೊಳ್ಳುವ ಮೂಲಕ ಅಂಕಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ.
ಈ ಮೂಲಕ ಪಂಜಾಬ್ ಕಿಂಗ್ಸ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕಿಂತ ಒಂದು ಪಂದ್ಯ ಹೆಚ್ಚು ಗೆದ್ದು ಅಂಕಪಟ್ಟಿಯಲ್ಲಿ ಉತ್ತಮ ಸ್ಥಾನದಲ್ಲಿದೆ. ಈ ಎರಡೂ ತಂಡಗಳೂ ಸಹ ಪ್ಲೇಆಫ್ ರೇಸ್‌ನಲ್ಲಿದ್ದು, ಈ ಪಂದ್ಯದಲ್ಲಿ ಗೆಲ್ಲಲೇಬೇಕಾದ ಗುರಿಯನ್ನು ಹೊಂದಿವೆ.
ಇನ್ನು ಇತ್ತಂಡಗಳು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಪರಸ್ಪರ ಮುಖಾಮುಖಿಯಾಗಲಿರುವ ಎರಡನೇ ಪಂದ್ಯ ಇದಾಗಿದ್ದು, ಏಪ್ರಿಲ್ 1ರಂದು ನಡೆದಿದ್ದ ಟೂರ್ನಿಯ ಎರಡನೇ ಪಂದ್ಯದಲ್ಲಿ ಮೊದಲ ಬಾರಿಗೆ ಮುಖಾಮುಖಿಯಾಗಿದ್ದಾಗ ಸೋತಿದ್ದ ಪ್ರತೀಕಾರವನ್ನು ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ತೀರಿಸಿಕೊಳ್ಳುವ ಯೋಜನೆಯಲ್ಲಿದೆ.
ಕೊಲ್ಕತ್ತಾ ನೈಟ್ ರೈಡರ್ಸ್ vs ಪಂಜಾಬ್ ಕಿಂಗ್ಸ್ ಪಂದ್ಯದ ಲೈವ್ ಸ್ಕೋರ್ ಅಪ್‌ಡೇಟ್:
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications