
ಸದ್ಯ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 56ನೇ ಪಂದ್ಯ ನಾಳೆ ( ಮೇ 11 ) ನಡೆಯಲಿದೆ. ಈ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿವೆ.
ಈ ಪಂದ್ಯ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ರಾತ್ರಿ 7.30ಕ್ಕೆ ಪಂದ್ಯ ಶುರುವಾಗಲಿದೆ. ಇನ್ನು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿರುವ ಮೊದಲ ಪಂದ್ಯ ಇದಾಗಿದೆ.
ಸದ್ಯ ರಾಜಸ್ಥಾನ್ ರಾಯಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಅಂಕಪಟ್ಟಿಯಲ್ಲಿ ಹೆಚ್ಚೇನೂ ವ್ಯತ್ಯಾಸಗಳನ್ನೇನೂ ಹೊಂದಿಲ್ಲ. ಎರಡೂ ತಂಡಗಳು ಸರಿ ಸಮನಾದ ಅಂಕಗಳನ್ನು ಹೊಂದಿದ್ದು ರಾಜಸ್ಥಾನ್ ರಾಯಲ್ಸ್ ತಂಡದ ನೆಟ್ ರನ್ ರೇಟ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನೆಟ್ ರನ್ ರೇಟ್‌ಗಿಂತ ಉತ್ತಮವಾಗಿರುವ ಕಾರಣ ಅಂಕಪಟ್ಟಿಯಲ್ಲಿ ತುಸು ಉತ್ತಮ ಸ್ಥಾನವನ್ನು ಪಡೆದುಕೊಂಡಿದೆ.
ಹೌದು, ಕೊಲ್ಕತ್ತಾ ನೈಟ್ ರೈಡರ್ಸ್ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 11 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದು, 5 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋಲುವುದರ ಮೂಲಕ 10 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ. ಅತ್ತ ರಾಜಸ್ಥಾನ್ ರಾಯಲ್ಸ್ ತಂಡ ಸಹ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 11 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದು, 5 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತು 10 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.
ಇನ್ನು ಈ ಎರಡು ತಂಡಗಳ ಹಾಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳೂ ಸಹ ಅಂಕಪಟ್ಟಿಯಲ್ಲಿ 10 ಅಂಕಗಳನ್ನು ಪಡೆದುಕೊಂಡಿರುವ ಕಾರಣ ಈ ಪಂದ್ಯದಲ್ಲಿ ಗೆಲ್ಲಲಿರುವ ತಂಡ ಪ್ಲೇಆಫ್ ರೇಸ್‌ನಲ್ಲಿ ಮತ್ತೊಂದು ಹಂತ ಮೇಲಕ್ಕೇರಲಿದೆ ಹಾಗೂ ಸೋಲಲಿರುವ ತಂಡ ಪ್ಲೇಆಫ್ ರೇಸ್‌ನಿಂದ ಬಹುತೇಕ ಹೊರಬೀಳಲಿದೆ.
ಹೀಗೆ ಕುತೂಹಲ ಕೆರಳಿಸಿರುವ ಈ ಪಂದ್ಯದಲ್ಲಿ ಯಾವ ತಂಡ ಗೆಲ್ಲಬಹುದು ಎಂಬ ಚರ್ಚೆಗಳು ಆರಂಭವಾಗಿದ್ದು, ಡ್ರೀಮ್ ಫ್ಯಾಂಟಿಸಿ ಕ್ರಿಕೆಟ್ ಪ್ರಿಯರು ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಬಲ್ಲ ಆಟಗಾರರನ್ನು ಆರಿಸಿ ಡ್ರೀಮ್ ಟೀಮ್ ರಚಿಸುವಲ್ಲಿ ನಿರತರಾಗಿದ್ದಾರೆ. ಈ ರೀತಿ ಡ್ರೀಮ್ ಟೀಮ್ ರಚಿಸುತ್ತಿರುವವರು ಈ ಕೆಳಕಂಡಂತೆ ಆಟಗಾರರನ್ನು ಆರಿಸಿದರೆ ಉತ್ತಮ ಅಂಕಗಳನ್ನು ಗಳಿಸಬಹುದಾಗಿದೆ.
ಡ್ರೀಮ್ ಟೀಮ್ 1: ಕೀಪರ್ - ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್, ರಹಮಾನುಲ್ಲಾ ಗುರ್ಬಾಜ್
ಬ್ಯಾಟ್ಸ್‌ಮನ್‌ಗಳು - ಜೇಸನ್ ರಾಯ್, ನಿತೀಶ್ ರಾಣಾ, ಯಶಸ್ವಿ ಜೈಸ್ವಾಲ್ (ನಾಯಕ), ರಿಂಕು ಸಿಂಗ್
ಆಲ್ ರೌಂಡರ್‌ಗಳು - ಆಂಡ್ರೆ ರಸೆಲ್ (ಉಪನಾಯಕ), ರವಿಚಂದ್ರನ್ ಅಶ್ವಿನ್
ಬೌಲರ್‌ಗಳು - ಯುಜುವೇಂದ್ರ ಚಹಾಲ್, ವರುಣ್ ಚಕ್ರವರ್ತಿ
ಡ್ರೀಮ್ ಟೀಮ್ 2: ಕೀಪರ್ - ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ಉಪನಾಯಕ), ರಹಮಾನುಲ್ಲಾ ಗುರ್ಬಾಜ್
ಬ್ಯಾಟ್ಸ್‌ಮನ್‌ಗಳು - ಜೇಸನ್ ರಾಯ್, ನಿತೀಶ್ ರಾಣಾ, ಯಶಸ್ವಿ ಜೈಸ್ವಾಲ್
ಆಲ್ ರೌಂಡರ್‌ಗಳು - ಆಂಡ್ರೆ ರಸೆಲ್ (ನಾಯಕ), ರವಿಚಂದ್ರನ್ ಅಶ್ವಿನ್
ಬೌಲರ್‌ಗಳು - ಯುಜುವೇಂದ್ರ ಚಹಾಲ್, ವರುಣ್ ಚಕ್ರವರ್ತಿ, ಟ್ರೆಂಟ್ ಬೌಲ್ಟ್