Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

KKR vs RR: ಪಂದ್ಯದ ಟಾಸ್ ವರದಿ, ಪ್ಲೇಯಿಂಗ್ 11 & ಲೈವ್ ಸ್ಕೋರ್

IPL 2023: Kolkata Knight Riders vs Rajasthan Royals toss report, playing 11 & live score

ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 56 ನೇ ಪಂದ್ಯ ಇಂದು ( ಮೇ 11 ) ನಡೆಯುತ್ತಿದ್ದು, ಈ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿವೆ.

ಈ ಪಂದ್ಯ ಕೊಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯುತ್ತಿದ್ದು, ಟಾಸ್ ಗೆದ್ದಿರುವ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಮೊದಲು ಫೀಲ್ಡಿಂಗ್ ಮಾಡುವ ಆಯ್ಕೆ ಮಾಡಿಕೊಂಡಿದ್ದು ಎದುರಾಳಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದಾರೆ.

ಇನ್ನು ರಾಜಸ್ಥಾನ್ ರಾಯಲ್ಸ್ ಆಡುವ ಬಳಗದಲ್ಲಿ ಎರಡು ಬದಲಾವಣೆಗಳಾಗಿವೆ. ಕುಲ್‌ದೀಪ್ ಯಾದವ್ ಬದಲಾಗಿ ಟ್ರೆಂಟ್ ಬೌಲ್ಟ್ ಕಣಕ್ಕಿಳಿಯುತ್ತಿದ್ದು, ಮುರುಗನ್ ಅಶ್ವಿನ್ ಬದಲು ಕೆಎಂ ಆಸೀಫ್ ಕಣಕ್ಕಿಳಿದಿದ್ದಾರೆ.

ಆಡುವ ಬಗಳಗಳು:

ರಾಜಸ್ಥಾನ್ ರಾಯಲ್ಸ್ ಆಡುವ ಬಳಗ: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್(ನಾಯಕ ಹಾಗೂ ವಿಕೆಟ್ ಕೀಪರ್), ಜೋ ರೂಟ್, ಧ್ರುವ್ ಜುರೆಲ್, ಶಿಮ್ರಾನ್ ಹೆಟ್ಮೆಯರ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಸಂದೀಪ್ ಶರ್ಮಾ, ಕೆಎಂ ಆಸಿಫ್, ಯುಜ್ವೇಂದ್ರ ಚಾಹಲ್

ಕೊಲ್ಕತ್ತಾ ನೈಟ್ ರೈಡರ್ಸ್ ಆಡುವ ಬಳಗ: ರಹಮಾನುಲ್ಲಾ ಗುರ್ಬಾಜ್(ವಿಕೆಟ್ ಕೀಪರ್), ಜೇಸನ್ ರಾಯ್, ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ(ನಾಯಕ), ಆಂಡ್ರೆ ರಸೆಲ್, ರಿಂಕು ಸಿಂಗ್, ಸುನಿಲ್ ನರೈನ್, ಶಾರ್ದೂಲ್ ಠಾಕೂರ್, ಅನುಕೂಲ್ ರಾಯ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ

ರಾಜಸ್ಥಾನ್ ರಾಯಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವಿನ ಪಂದ್ಯದ ಲೈವ್ ಸ್ಕೋರ್ ಇಲ್ಲಿದೆ

1
57111

ಇನ್ನು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿರುವ ಮೊದಲ ಪಂದ್ಯ ಇದಾಗಿದೆ.

ಸದ್ಯ ರಾಜಸ್ಥಾನ್ ರಾಯಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಅಂಕಪಟ್ಟಿಯಲ್ಲಿ ಹೆಚ್ಚೇನೂ ವ್ಯತ್ಯಾಸಗಳನ್ನೇನೂ ಹೊಂದಿಲ್ಲ. ಎರಡೂ ತಂಡಗಳು ಸರಿ ಸಮನಾದ ಅಂಕಗಳನ್ನು ಹೊಂದಿದ್ದು ರಾಜಸ್ಥಾನ್ ರಾಯಲ್ಸ್ ತಂಡದ ನೆಟ್ ರನ್ ರೇಟ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನೆಟ್ ರನ್ ರೇಟ್‌ಗಿಂತ ಉತ್ತಮವಾಗಿರುವ ಕಾರಣ ಅಂಕಪಟ್ಟಿಯಲ್ಲಿ ತುಸು ಉತ್ತಮ ಸ್ಥಾನವನ್ನು ಪಡೆದುಕೊಂಡಿದೆ.

ಹೌದು, ಕೊಲ್ಕತ್ತಾ ನೈಟ್ ರೈಡರ್ಸ್ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 11 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದು, 5 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋಲುವುದರ ಮೂಲಕ 10 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ. ಅತ್ತ ರಾಜಸ್ಥಾನ್ ರಾಯಲ್ಸ್ ತಂಡ ಸಹ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 11 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದು, 5 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತು 10 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.

ಇನ್ನು ಈ ಎರಡು ತಂಡಗಳ ಹಾಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳೂ ಸಹ ಅಂಕಪಟ್ಟಿಯಲ್ಲಿ 10 ಅಂಕಗಳನ್ನು ಪಡೆದುಕೊಂಡಿರುವ ಕಾರಣ ಈ ಪಂದ್ಯದಲ್ಲಿ ಗೆಲ್ಲಲಿರುವ ತಂಡ ಪ್ಲೇಆಫ್ ರೇಸ್‌ನಲ್ಲಿ ಮತ್ತೊಂದು ಹಂತ ಮೇಲಕ್ಕೇರಲಿದೆ ಹಾಗೂ ಸೋಲಲಿರುವ ತಂಡ ಪ್ಲೇಆಫ್ ರೇಸ್‌ನಿಂದ ಬಹುತೇಕ ಹೊರಬೀಳಲಿದೆ.

Story first published: Thursday, May 11, 2023, 19:16 [IST]
Other articles published on May 11, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+