IPL 2023: ಆರ್‌ಸಿಬಿ vs ಕೊಲ್ಕತ್ತಾ ನಡುವಿನ 31 ಪಂದ್ಯಗಳಲ್ಲಿ ಹೆಚ್ಚು ಗೆದ್ದಿರುವ ತಂಡ ಯಾವುದು?

ಸದ್ಯ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 36ನೇ ಪಂದ್ಯ ನಾಳೆ ( ಏಪ್ರಿಲ್ 26 ) ನಡೆಯಲಿದೆ. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ.
ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿರುವ ಎರಡನೇ ಪಂದ್ಯ ಇದಾಗಿದ್ದು, ಮೊದಲ ಬಾರಿ ಮುಖಾಮುಖಿಯಾದಾಗ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೀನಾಯವಾಗಿ ಸೋಲನ್ನು ಕಂಡಿತ್ತು.
ಹೀಗಾಗಿ ನಾಳೆ ನಡೆಯಲಿರುವ ಎರಡನೇ ಮುಖಾಮುಖಿ ಪಂದ್ಯದ ಮೇಲೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಚಿತ್ತ ನೆಟ್ಟಿದ್ದು, ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ. ಇನ್ನು ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಒಟ್ಟು 31 ಪಂದ್ಯಗಳಲ್ಲಿ ಪರಸ್ಪರ ಮುಖಾಮುಖಿಯಾಗಿದ್ದು, ನಾಳೆ ನಡೆಯಲಿರುವ ಪಂದ್ಯ 32ನೇ ಮುಖಾಮುಖಿಯ ಪಂದ್ಯವಾಗಲಿದೆ.
ಹಾಗಿದ್ದರೆ ಇಲ್ಲಿಯವರೆಗೂ ನಡೆದಿರುವ ಇತ್ತಂಡಗಳ ನಡುವಿನ 31 ಪಂದ್ಯಗಳಲ್ಲಿ ಯಾವ ತಂಡ ಹೆಚ್ಚು ಪಂದ್ಯಗಳಲ್ಲಿ ಮೇಲುಗೈ ಸಾಧಿಸಿದೆ, ಇತ್ತೀಚೆಗಿನ ಪಂದ್ಯಗಳಲ್ಲಿ ಯಾವ ತಂಡ ಹೆಚ್ಚು ಗೆಲುವನ್ನು ಸಾಧಿಸಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..
ಎರಡೂ ತಂಡಗಳು ಮುಖಾಮುಖಿಯಾಗಿರುವ 31 ಪಂದ್ಯಗಳಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 17 ಪಂದ್ಯಗಳಲ್ಲಿ ಗೆಲುವನ್ನು ಸಾಧಿಸಿದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 14 ಪಂದ್ಯಗಳಲ್ಲಿ ಜಯವನ್ನು ಕಂಡಿದೆ. ಈ ಮೂಲಕ ಉಭಯ ತಂಡಗಳ ಮುಖಾಮುಖಿ ಪಂದ್ಯಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಮೇಲುಗೈಯನ್ನು ಸಾಧಿಸಿದೆ.
ಇನ್ನು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 9ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟರ್ ರೈಡರ್ಸ್ ತಂಡಗಳು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಮೊದಲ ಬಾರಿಗೆ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಕೊಲ್ಕತ್ರಾ ನೈಟ್ ರೈಡರ್ಸ್ ರಹಮನ್ನುಲ್ಲಾ ಗುರ್ಬಜ್, ನಿತಿಶ್ ರಾಣಾ ಹಾಗೂ ವಿಶೇಷವಾಗಿ ಶಾರ್ದೂಲ್ ಠಾಕೂರ್ ಅಬ್ಬರದ ಆಟದ ನೆರವಿನಿಂದಾಗಿ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 204 ರನ್ ಕಲೆಹಾಕಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಗೆಲ್ಲಲು 205 ರನ್‌ಗಳ ಗುರಿಯನ್ನು ನೀಡಿತ್ತು.
ಆದರೆ ಈ ಗುರಿಯನ್ನು ಬೆನ್ನತ್ತುವಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿಫಲವಾಗಿತ್ತು. 17.4 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು ಕೇವಲ 123 ರನ್‌ಗಳಿಗೆ ಆಲ್ ಔಟ್ ಆಗಿತ್ತು. ಇದು ಈ ಬಾರಿಯ ಕಥೆಯಾದರೆ ಕಳೆದ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಇತ್ತಂಡಗಳು ಮುಖಾಮುಖಿಯಾಗಿದ್ದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 3 ವಿಕೆಟ್‌ಗಳ ಜಯ ಸಾಧಿಸಿತ್ತು.
ಇನ್ನು ಎರಡೂ ತಂಡಗಳು ಪರಸ್ಪರ ಮುಖಾಮುಖಿಯಾದಾಗ ದಾಖಲಾಗಿರುವ ಗರಿಷ್ಠ ರನ್ ವಿಷಯಕ್ಕೆ ಬಂದರೆ ಕೊಲ್ಕತ್ತಾ ನೈಟ್ ರೈಡರ್ಸ್ ಕಲೆ ಹಾಕಿರುವ ಗರಿಷ್ಠ ರನ್ 222 ಆದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಕಲೆಹಾಕಿರುವ ಗರಿಷ್ಠ ರನ್ 213. ಇತ್ತಂಡಗಳ ಕನಿಷ್ಠ ರನ್ ವಿಚಾರದಲ್ಲಿಯೂ ಸಹ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಭಂಗ ಅನುಭವಿಸಿದೆ. 49 ರನ್ ಮೊತ್ತವನ್ನು ಕಲೆಹಾಕಿ ಐಪಿಎಲ್ ಇತಿಹಾಸದಲ್ಲಿಯೇ ಅತಿಕಡಿಮೆ ರನ್ ಗಳಿಸಿದ ತಂಡ ಎನಿಸಿಕೊಂಡಿದೆ. ಇನ್ನು ಕೊಲ್ಕತ್ತಾ ನೈಟ್ ರೈಡರ್ಸ್ ಕಲೆಹಾಕಿರುವ ಕನಿಷ್ಠ ರನ್ 84.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications