KKR vs RCB: ಸೇಡಿನ ಪಂದ್ಯದಲ್ಲಿ ಟಾಸ್ ಗೆದ್ದ ಆರ್‌ಸಿಬಿ; ಪ್ಲೇಯಿಂಗ್ 11 & ಲೈವ್ ಸ್ಕೋರ್ ಇಲ್ಲಿದೆ

ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 36ನೇ ಪಂದ್ಯ ಇಂದು ( ಏಪ್ರಿಲ್ 26 ) ನಡೆಯಲಿದ್ದು, ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಿವೆ.
ಪಂದ್ಯದಲ್ಲಿ ಟಾಸ್ ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಫೀಲ್ಡಿಂಡ್ ಆಯ್ದುಕೊಂಡಿದ್ದು, ಎದುರಾಳಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದಾರೆ.
ಟಾಸ್ ಗೆದ್ದ ಬಳಿಕ ಮಾತನಾಡಿದ ನಾಯಕ ವಿರಾಟ್ ಕೊಹ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಹಲವು ಪಂದ್ಯಗಳಲ್ಲಿ ಚೇಸ್ ಮಾಡಿ ಗೆದ್ದಿರುವ ಕಾರಣ ಮೊದಲು ಬೌಲಿಂಗ್ ಮಾಡುವ ಆಯ್ಕೆ ಆರಿಸಿಕೊಂಡೆ ಎಂದರು. ಅಲ್ಲದೇ ಫಾಫ್ ಡು ಪ್ಲೆಸಿಸ್ ಇಂದಿನ ಪಂದ್ಯದಲ್ಲಿಯೂ ಇಂಪ್ಯಾಕ್ಟ್ ಪ್ಲೇಯರ್ ಎಂದು ತಿಳಿಸಿದರು.
ಆಡುವ ಬಳಗಗಳು:
ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡುವ ಬಳಗ: ವಿರಾಟ್ ಕೊಹ್ಲಿ(ನಾಯಕ), ಶಹಬಾಜ್ ಅಹ್ಮದ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್(ವಿಕೆಟ್), ಸುಯಶ್ ಪ್ರಭುದೇಸಾಯಿ, ವನಿಂದು ಹಸರಂಗ, ಡೇವಿಡ್ ವಿಲ್ಲಿ, ವಿಜಯ್‌ಕುಮಾರ್ ವೈಶಾಕ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್
ಕೊಲ್ಕತ್ತಾ ನೈಟ್ ರೈಡರ್ಸ್ ಆಡುವ ಬಳಗ: ಎನ್ ಜಗದೀಸನ್(ವಿಕೆಟ್ ಕೀಪರ್), ಜೇಸನ್ ರಾಯ್, ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ(ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ಸುನಿಲ್ ನರೈನ್, ಡೇವಿಡ್ ವೈಸ್, ವೈಭವ್ ಅರೋರಾ, ಉಮೇಶ್ ಯಾದವ್, ವರುಣ್ ಚಕ್ರವರ್ತಿ
ರಾಯಲ್ ಚಾಲೆಂರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವಿನ ಈ ಪಂದ್ಯದ ಲೈವ್ ಸ್ಕೋರ್ ಇಲ್ಲಿದೆ..
ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಇತ್ತಂಡಗಳ ನಡುವೆ ನಡೆಯುತ್ತಿರುವ ಎರಡನೇ ಮುಖಾಮುಖಿ ಪಂದ್ಯ ಇದಾಗಿದ್ದು, ಮೊದಲ ಬಾರಿ ಇತ್ತಂಡಗಳು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಮುಖಾಮುಖಿಯಾದಾಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಹೀನಾಯವಾಗಿ ಸೋತಿತ್ತು.
ಇನ್ನು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 9ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟರ್ ರೈಡರ್ಸ್ ತಂಡಗಳು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಮೊದಲ ಬಾರಿಗೆ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಕೊಲ್ಕತ್ರಾ ನೈಟ್ ರೈಡರ್ಸ್ ರಹಮನ್ನುಲ್ಲಾ ಗುರ್ಬಜ್, ನಿತಿಶ್ ರಾಣಾ ಹಾಗೂ ವಿಶೇಷವಾಗಿ ಶಾರ್ದೂಲ್ ಠಾಕೂರ್ ಅಬ್ಬರದ ಆಟದ ನೆರವಿನಿಂದಾಗಿ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 204 ರನ್ ಕಲೆಹಾಕಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಗೆಲ್ಲಲು 205 ರನ್‌ಗಳ ಗುರಿಯನ್ನು ನೀಡಿತ್ತು.
ಆದರೆ ಈ ಗುರಿಯನ್ನು ಬೆನ್ನತ್ತುವಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿಫಲವಾಗಿತ್ತು. 17.4 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು ಕೇವಲ 123 ರನ್‌ಗಳಿಗೆ ಆಲ್ ಔಟ್ ಆಗಿತ್ತು.
ಹೀಗಾಗಿ ಈ ಮುಖಾಮುಖಿ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸೇಡು ತೀರಿಸಿಕೊಳ್ಳಲು ಸಿಕ್ಕಿರುವ ವೇದಿಕೆಯಾಗಿದೆ. ಇನ್ನು ಈ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವುದು ರಾಯಲ್ ಚಾಲೆಂಜರ್ಸ್‌ಗೆ ಪ್ಲಸ್ ಪಾಯಿಂಟ್ ಆಗಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications