For Quick Alerts
ALLOW NOTIFICATIONS  
For Daily Alerts
 

IPL 2023: ಆರೆಂಜ್ ಕ್ಯಾಪ್ ಗೆದ್ದ ಗಿಲ್ ಹಾಗೂ ಪರ್ಪಲ್ ಕ್ಯಾಪ್ ಗೆದ್ದ ಶಮಿಗೆ ಸಿಕ್ಕ ಹಣವೆಷ್ಟು? ಡುಪ್ಲೆಸಿಸ್‌ಗೆ ಸಿಕ್ತು ಪ್ರೈಜ್!

IPL 2023: List of Orange cap, purple cap and other award winners in this tournament

ನಿನ್ನೆ ( ಮೇ 29 ) ಅಹ್ಮದಾಬಾದ್‌ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್‌ ಟೈಟನ್ಸ್ ತಂಡಗಳ ನಡುವಿನ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 5 ವಿಕೆಟ್‌ಗಳ ಗೆಲುವನ್ನು ದಾಖಲಿಸುವುದರ ಮೂಲಕ ಐದನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಮೊನ್ನೆಯೇ ಮುಕ್ತಾಯಗೊಳ್ಳಬೇಕಿದ್ದ ಈ ಪಂದ್ಯಕ್ಕೆ ಮಳೆ ಅಡ್ಡಿ ಉಂಟು ಮಾಡಿದ ಕಾರಣ ನಿನ್ನೆಗೆ ಮುಂದೂಡಲ್ಪಟ್ಟಿತ್ತು. ಆದರೆ ಮೊದಲ ಇನ್ನಿಂಗ್ಸ್ ಮುಕ್ತಾಯಗೊಂಡು ಎರಡನೇ ಇನ್ನಿಂಗ್ಸ್ ಆರಂಭಗೊಳ್ಳುತ್ತಿದ್ದಂತೆ ಮತ್ತೆ ಮಳೆ ಸುರಿಯಲಾರಂಭಿಸಿತು. ಮಳೆಯ ಹೊಡೆತಕ್ಕೆ ಪಂದ್ಯ ಐದು ಓವರ್ ಕಡಿತಗೊಂಡಿತು.

ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟನ್ಸ್ ವೃದ್ಧಿಮಾನ್ ಸಹಾ ಹಾಗೂ ಸಾಯಿ ಸುದರ್ಶನ್ ಅಬ್ಬರದ ಬ್ಯಾಟಿಂಗ್ ನೆರವಿನಿಂದ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 214 ರನ್ ಕಲೆಹಾಕಿದ್ದು ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಗೆಲ್ಲಲು 215 ರನ್‌ಗಳ ಕಠಿಣ ಗುರಿಯನ್ನು ನೀಡಿತ್ತು.

ಆದರೆ ಮಳೆಯ ಕಾರಣದಿಂದಾಗಿ 15 ಓವರ್‌ಗಳಿಗೆ ಪಂದ್ಯ ಕುಸಿದು ಚೆನ್ನೈ ಸೂಪರ್ ಕಿಂಗ್ಸ್ 15 ಓವರ್‌ಗಳಲ್ಲಿ 171 ರನ್ ಬಾರಿಸಬೇಕಾದ ಅಗತ್ಯವಿತ್ತು. ಈ ಗುರಿಯನ್ನು ಯಶಸ್ವಿಯಾಗಿ ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ 15 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 171 ರನ್ ಕಲೆಹಾಕಿ 5 ವಿಕೆಟ್‌ಗಳ ಗೆಲುವನ್ನು ಕಂಡಿತು.

ಹೀಗೆ ಗುಜರಾತ್ ಟೈಟನ್ಸ್ ಸತತವಾಗಿ ಎರಡನೇ ಬಾರಿಗೆ ಟ್ರೋಫಿ ಗೆಲ್ಲುವ ಅವಕಾಶವನ್ನು ಕೈತಪ್ಪಿಸಿಕೊಂಡರೆ, ಚೆನ್ನೈ ಸೂಪರ್ ಕಿಂಗ್ಸ್ ಐದನೇ ಬಾರಿಗೆ ಚಾಂಪಿಯನ್ ಆಯಿತು. ಇನ್ನು ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಆಟಗಾರರಿಗೆ ಆರೆಂಜ್ ಕ್ಯಾಪ್, ಪರ್ಪಲ್ ಕ್ಯಾಪ್ ಸೇರಿದಂತೆ ಹಲವು ಕೆಟಗರಿಗಳ ಅಡಿಯಲ್ಲಿ ಪ್ರಶಸ್ತಿಯನ್ನು ನೀಡಲಾಗಿದ್ದು, ಬಹುಮಾನ ಧನವನ್ನು ನೀಡಲಾಗಿದೆ. ಹೀಗೆ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಪ್ರಶಸ್ತಿಗಳಿಗೆ ಭಾಜನರಾಗಿ ಬಹುಮಾನ ಗೆದ್ದ ಆಟಗಾರರು ಹಾಗೂ ಬಹುಮಾನದ ವಿವರ ಈ ಕೆಳಕಂಡಂತಿದೆ..

* ಟೂರ್ನಿಯಲ್ಲಿ ಅತಿಹೆಚ್ಚು ರನ್ ಗಳಿಸಿ ಆರೆಂಜ್ ಕ್ಯಾಪ್ ಗೆದ್ದ ಗುಜರಾತ್ ಟೈಟನ್ಸ್ ತಂಡದ ಶುಬ್‌ಮನ್ ಗಿಲ್ 10 ಲಕ್ಷ ರೂಪಾಯಿ ಬಹುಮಾನ ಧನ ಪಡೆದರು.
* ಟೂರ್ನಿಯಲ್ಲಿ ಅತಿಹೆಚ್ಚು ವಿಕೆಟ್ ಪಡೆದು ಪರ್ಪಲ್ ಕ್ಯಾಪ್ ಗೆದ್ದ ಮೊಹಮ್ಮದ್ ಶಮಿ 10 ಲಕ್ಷ ರೂಪಾಯಿ ಬಹುಮಾನ ಧನ ಪಡೆದರು.
* ಗುಜರಾತ್ ಟೈಟನ್ಸ್ ತಂಡದ ರಶೀದ್ ಖಾನ್ 'ಕ್ಯಾಚ್ ಆಫ್ ದ ಸೀಸನ್' ಪ್ರಶಸ್ತಿ ಪಡೆದು 10 ಲಕ್ಷ ರೂಪಾಯಿ ಬಹುಮಾನ ಧನ ಗೆದ್ದರು.
* ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಟೂರ್ನಿಯಲ್ಲಿ ಅತಿ ಉದ್ದದ ಸಿಕ್ಸರ್ ಬಾರಿಸಿದ್ದಕ್ಕಾಗಿ 10 ಲಕ್ಷ ರೂಪಾಯಿ ಬಹುಮಾನ ಧನ ಗೆದ್ದರು.
* ಮೋಸ್ಟ್ ವ್ಯಾಲ್ಯುಯೆಬಲ್ ಪ್ಲೇಯರ್ ಎನಿಸಿಕೊಂಡ ಶುಬ್‌ಮನ್ ಗಿಲ್ 10 ಲಕ್ಷ ರೂಪಾಯಿ ಬಹುಮಾನ ಧನ ಗೆದ್ದರು.
* ಈ ಬಾರಿಯ ಐಪಿಎಲ್ ಟೂರ್ನಿಯ ಸೂಪರ್ ಸ್ಟ್ರೈಕರ್ ಎನಿಸಿಕೊಂಡ ಗ್ಲೆನ್ ಮ್ಯಾಕ್ಸ್‌ವೆಲ್ 10 ಲಕ್ಷ ರೂಪಾಯಿ ಬಹುಮಾನ ಧನ ಗೆದ್ದರು.
* ಗೇಮ್ ಚೇಂಜರ್ ಆಫ್ ದ ಸೀಸಸ್ ಪ್ರಶಸ್ತಿ ಗೆದ್ದ ಶುಬ್‌ಮನ್ ಗಿಲ್ 10 ಲಕ್ಷ ರೂಪಾಯಿ ಬಹುಮಾನ ಧನ ಗೆದ್ದರು.
* ಈ ಬಾರಿಯ ಎಮರ್ಜಿಂಗ್ ಪ್ಲೇಯರ್ ಎನಿಸಿಕೊಂಡ ಯಶಸ್ವಿ ಜೈಸ್ವಾಲ್ 10 ಲಕ್ಷ ರೂಪಾಯಿ ಬಹುಮಾನ ಧನ ಗೆದ್ದರು.

Story first published: Tuesday, May 30, 2023, 10:47 [IST]
Other articles published on May 30, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+