Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ ಇತಿಹಾಸದಲ್ಲಿ ದಾಖಲಾದ ಟಾಪ್ 10 ಅತಿಕಡಿಮೆ ರನ್‌ಗಳು; 4 ಸ್ಥಾನ ಆರ್‌ಸಿಬಿಯದ್ದೇ!

IPL 2023: List of top 10 lowest team totals in the history of IPL

ನಿನ್ನೆ ( ಮೇ 14 ) ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವೆ ನಡೆದ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 60ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ 59 ರನ್‌ಗಳಿಗೆ ಆಲ್‌ಔಟ್ ಆಗುವ ಮೂಲಕ ಅತಿಕಡಿಮೆ ರನ್ ಗಳಿಸಿದ ತಂಡಗಳ ಪಟ್ಟಿಯಲ್ಲಿ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ.

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 171 ರನ್ ಕಲೆಹಾಕಿ ಎದುರಾಳಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಗೆಲ್ಲಲು 172 ರನ್‌ಗಳ ಗುರಿಯನ್ನು ನೀಡಿತು.

ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲಗೊಂಡ ರಾಜಸ್ಥಾನ್ ರಾಯಲ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬೌಲಿಂಗ್ ದಾಳಿಗೆ ನಲುಗಿ 10.3 ಓವರ್‌ಗಳಲ್ಲಿ ಕೇವಲ 59 ರನ್‌ಗಳಿಗೆ ಆಲ್ಔಟ್ ಆಯಿತು. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು 112 ರನ್‌ಗಳ ಬೃಹತ್ ಗೆಲುವನ್ನು ದಾಖಲಿಸಿತು.

ಒಂದೆಡೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬೃಹತ್ ಗೆಲುವನ್ನು ಕಾಣುವುದರ ಮೂಲಕ ಪ್ಲೇಆಫ್ ಸುತ್ತಿಗೆ ಸಮೀಪಿಸಿದರೆ ಮತ್ತೊಂದೆಡೆ ರಾಜಸ್ಥಾನ್ ರಾಯಲ್ಸ್ 59 ರನ್‌ಗಳಿಗೆ ಆಲ್ಔಟ್ ಆಗುವ ಮೂಲಕ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿಯೇ ಮೂರನೇ ಅತಿಕಡಿಮೆ ಮೊತ್ತ ದಾಖಲಿಸಿದ ಕೆಟ್ಟ ದಾಖಲೆಯನ್ನು ಬರೆದಿದೆ. ಈ ಹಿಂದೆ ರಾಜಸ್ಥಾನ್ ರಾಯಲ್ಸ್ ಇದೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 58 ರನ್‌ಗಳಿಗೆ ಆಲ್‌ಔಟ್ ಆಗುವ ಮೂಲಕ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಎರಡನೇ ಅತಿಕಡಿಮೆ ಮೊತ್ತ ದಾಖಲಿಸಿದ ತಂಡ ಎಂಬ ಕೆಟ್ಟ ದಾಖಲೆಯನ್ನೂ ಸಹ ಬರೆದಿತ್ತು.

ಹಾಗಾದರೆ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ದಾಖಲಾಗಿರುವ ಟಾಪ್ 10 ಅತಿಕಡಿಮೆ ಮೊತ್ತಗಳು ಯಾವುವು ಎಂಬ ಪಟ್ಟಿ ಇಲ್ಲಿದೆ ನೋಡಿ..

1. 2017ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೊಲ್ಕತ್ತಾ ನೈಟ್‌ ರೈಡರ್ಸ್ ವಿರುದ್ಧ 9.4 ಓವರ್‌ಗಳಲ್ಲಿ 49 ರನ್‌ಗಳಿಗೆ ಆಲ್ಔಟ್ ಆಗಿತ್ತು.
2. 2009ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 15.1 ಓವರ್‌ಗಳಲ್ಲಿ 58 ರನ್‌ಗಳಿಗೆ ಆಲ್‌ಔಟ್ ಆಗಿತ್ತು.

3. ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 10.3 ಓವರ್‌ಗಳಲ್ಲಿ 59 ರನ್ ಗಳಿಸಿ ಆಲ್‌ಔಟ್ ಆಗಿದೆ.
4. 2017ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ 13.4 ಓವರ್‌ಗಳಲ್ಲಿ 66 ರನ್ ಗಳಿಸಿ ಆಲ್ಔಟ್ ಆಗಿತ್ತು.

5. 2017ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ತಂಡ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ 17.1 ಓವರ್‌ಗಳಲ್ಲಿ 67 ರನ್ ಗಳಿಸಿ ಆಲ್‌ಔಟ್ ಆಗಿತ್ತು.
6. 2008ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ 15.2 ಓವರ್‌ಗಳಲ್ಲಿ 67 ರನ್ ಗಳಿಸಿ ಆಲ್ಔಟ್ ಆಗಿತ್ತು.

7. 2022ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 16.1 ಓವರ್‌ಗಳಲ್ಲಿ 68 ರನ್ ಗಳಿಸಿ ಆಲ್ಔಟ್ ಆಗಿತ್ತು.
8. 2019ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 17.1 ಓವರ್‌ಗಳಲ್ಲಿ 70 ರನ್ ಗಳಿಸಿ ಆಲ್‌ಔಟ್ ಆಗಿತ್ತು.

9. 2014ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರಾಜಸ್ಥಾನ್ ರಾಯಲ್ಸ್ ವಿರುದ್ಧ 15 ಓವರ್‌ಗಳಲ್ಲಿ 70 ರನ್ ಗಳಿಸಿ ಆಲ್‌ಔಟ್ ಆಗಿತ್ತು.
10. 2017ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ರೈಸಿಂಗ್ ಪುಣೆ ಸೂಪರ್‌ಜಿಯಂಟ್ ವಿರುದ್ಧ 15.5 ಓವರ್‌ಗಳಲ್ಲಿ 73 ರನ್ ಗಳಿಸಿ ಆಲ್‌ಔಟ್ ಆಗಿತ್ತು.

Story first published: Monday, May 15, 2023, 22:24 [IST]
Other articles published on May 15, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+