
ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ಇದೇ ಭಾನುವಾರ ( ಮೇ 28 ) ಅಹ್ಮದಾಬಾದ್‌ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಫೈನಲ್ ಪಂದ್ಯದ ಮೂಲಕ ಮುಕ್ತಾಯಗೊಳ್ಳಲಿದೆ.
ಒಂದನೇ ಕ್ವಾಲಿಫಯರ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಮಣಿಸಿದ ಚೆನ್ನೈ ಸೂಪರ್ ಕಿಂಗ್ಸ್ ಫೈನಲ್‌ಗೆ ಲಗ್ಗೆ ಇಟ್ಟಿದ್ದು, ಇಂದು ( ಮೇ 26 ) ನಡೆಯಲಿರುವ ಗುಜರಾತ್ ಟೈಟನ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಎರಡನೇ ಕ್ವಾಲಿಫಯರ್ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್ ತಲುಪಲಿದೆ.
ಹೀಗೆ ಟೂರ್ನಿಯಲ್ಲಿ ಇನ್ನೆರಡು ಪಂದ್ಯಗಳು ಮಾತ್ರ ಬಾಕಿ ಉಳಿದುಕೊಂಡಿದ್ದು, ಇಲ್ಲಿಯವರೆಗೂ ನಡೆದಿರುವ ಪಂದ್ಯಗಳ ಪೈಕಿ ಅತಿಕಡಿಮೆ ಟಾರ್ಗೆಟ್ ನೀಡಿಯೂ ಗೆದ್ದ 5 ಪಂದ್ಯಗಳು ಯಾವುವು ಎಂಬ ಮಾಹಿತಿ ಈ ಕೆಳಕಂಡಂತಿದೆ..
5. ರಾಜಸ್ಥಾನ್ ರಾಯಲ್ಸ್ vs ಲಕ್ನೋ ಸೂಪರ್ ಜೈಂಟ್ಸ್: ಈ ಬಾರಿಯ ಟೂರ್ನಿಯ 26ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಪರಸ್ಪರ ಮುಖಾಮುಖಿಯಾಗಿದ್ದವು. ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 154 ರನ್ ಕಲೆಹಾಕಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಗೆಲ್ಲಲು 155 ರನ್‌ಗಳ ಗುರಿಯನ್ನು ನೀಡಿತ್ತು. ಆದರೆ ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲವಾದ ರಾಜಸ್ಥಾನ್ ರಾಯಲ್ಸ್ ತಂಡ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 144 ರನ್ ಕಲೆಹಾಕಿತ್ತು. ಈ ಮೂಲಕ ಲಕ್ನೋ ಸೂಪರ್ ಜೈಂಟ್ಸ್ 10 ರನ್‌ಗಳ ಗೆಲುವು ಕಂಡಿತ್ತು.
4. ಟೂರ್ನಿಯ 34ನೇ ಪಂದ್ಯ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ನಡೆದಿತ್ತು. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಡೆಲ್ಲಿ ಕ್ಯಾಪಿಟಲ್ಸ್ 9 ವಿಕೆಟ್ ನಷ್ಟಕ್ಕೆ 144 ರನ್ ಕಲೆಹಾಕಿ ಸನ್ ರೈಸರ್ಸ್‌ಗೆ 145 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲವಾಗಿದ್ದ ಸನ್ ರೈಸರ್ಸ್ ಹೈದರಾಬಾದ್ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 137 ರನ್ ಕಲೆಹಾಕಿತ್ತು. ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ 7 ರನ್‌ಗಳ ಗೆಲುವನ್ನು ಕಂಡಿತ್ತು.
3. ಟೂರ್ನಿಯ 30ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಗುಜರಾತ್ ಟೈಟನ್ಸ್ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 135 ರನ್ ಕಲೆಹಾಕಿ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಗೆಲ್ಲಲು 136 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲವಾಗಿದ್ದ ಲಕ್ನೋ ಸೂಪರ್ ಜೈಂಟ್ಸ್ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 128 ರನ್ ಕಲೆಹಾಕಿತ್ತು. ಈ ಮೂಲಕ ಕಡಿಮೆ ಮೊತ್ತ ಕಲೆಹಾಕಿಯೂ ಗುಜರಾತ್ ಟೈಟನ್ಸ್ 7 ರನ್‌ಗಳ ಗುರಿಯನ್ನು ನೀಡಿತ್ತು.
2. ಟೂರ್ನಿಯ 44ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 130 ರನ್ ಕಲೆಹಾಕಿ ಗುಜರಾತ್ ಟೈಟನ್ಸ್ ತಂಡಕ್ಕೆ ಗೆಲ್ಲಲು 131 ರನ್‌ಗಳ ಗುರಿಯನ್ನು ನೀಡಿತ್ತು. ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ 5 ರನ್‌ಗಳ ರೋಚಕ ಜಯ ಕಂಡಿತ್ತು.
1. ಈ ಬಾರಿ ಅತಿಕಡಿಮೆ ರನ್ ಕಲೆಹಾಕಿಯೂ ಗೆದ್ದ ತಂಡ ಎಂಬ ಸಾಧನೆಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಾಡಿದೆ. ಟೂರ್ನಿಯ 43ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 126 ರನ್ ಕಲೆಹಾಕಿ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಗೆಲ್ಲಲು 127 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲವಾದ ಲಕ್ನೋ ಸೂಪರ್ ಜೈಂಟ್ಸ್ 19.5 ಓವರ್‌ಗಳಲ್ಲಿ 108 ರನ್‌ಗಳಿಗೆ ಆಲ್‌ಔಟ್ ಆಗಿತ್ತು. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು 18 ರನ್‌ಗಳ ಗೆಲುವನ್ನು ಕಂಡಿತ್ತು.