Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2023: ಐಪಿಎಲ್ ಇತಿಹಾಸದಲ್ಲಿ ಯಾರೂ ಮಾಡದ ದಾಖಲೆ ಮಾಡಿದ ಕೇಲ್ ಮೇಯರ್ಸ್

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಆರಂಭಿಕ ಆಟಗಾರ ಕೇಲ್ ಮೇಯರ್ಸ್ ಹೊಸ ದಾಖಲೆ ಬರೆದಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ವೆಸ್ಟ್ ಇಂಡೀಸ್‌ನ ಸ್ಟಾರ್ ಆಲ್‌ರೌಂಡರ್ ಭರ್ಜರಿ ಪ್ರದರ್ಶನ ನೀಡಿ ಮಿಂಚಿದರು. ಸತತ ಎರಡನೇ ಪಂದ್ಯದಲ್ಲಿಯೂ ವಿಂಡೀಸ್‌ನ ಈ ಆಟಗಾರ ಅರ್ಧ ಶತಕ ಸಿಡಿಸಿದ್ದಾರೆ.

ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಪದಾರ್ಪಣೆ ಮಾಡಿ ಸತತ ಎರಡು ಪಂದ್ಯಗಳಲ್ಲಿ ಅರ್ಧ ಶತಕ ಸಿಡಿಸಿದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ. ಕುತೂಹಲಕಾರಿ ಸಂಗತಿಯೆಂದರೆ ಸಿಎಸ್‌ಕೆ ವಿರುದ್ಧದ ಪಂದ್ಯದಲ್ಲಿ ಕೇವಲ 21 ಎಸೆತದಲ್ಲಿ ಅರ್ಧ ಶತಕ ಸಿಡಿಸಿದ ಕೇನ್ ಮೇಯರ್ಸ್ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಅತ್ಯಂತ ವೇಗವಾಗಿ ಅರ್ಧ ಶತಕ ಸಿಡಿಸಿದ ದಾಖಲೆಯನ್ನು ಸರಿಗಟ್ಟಿದ್ದಾರೆ.

IPL 2023: LSG opener Kyle Mayers create new record in history of IPL

ಸೋಮವಾರ ನಡೆದ ಪಂದ್ಯದಲ್ಲಿ ಕೇಲ್ ಮೇಯರ್ಸ್ 22 ಎಸೆತಗಳನ್ನು ಎದುರಿಸಿದ್ದು 53 ರನ್‌ಗಳಿಸಿದ ಬಳಿಕ ಮೊಯೀನ್ ಅಲಿಗೆ ವಿಕೆಟ್ ಒಪ್ಪಿಸಿದರು. ಈ ಸ್ಪೋಟಕ ಇನ್ನಿಂಗ್ಸ್‌ನಲ್ಲಿ 8 ಬೌಂಡರಿ ಹಾಗೂ 2 ಭರ್ಜರಿ ಸಿಕ್ಸರ್ ಒಳಗೊಂಡಿತ್ತು. ಬರೊಬ್ಬರಿ 240.91ರ ಸ್ಟ್ರೈಕ್‌ರೇಟ್‌ನಲ್ಲಿ ಕೇಲ್ ಮೇಯರ್ಸ್ ಈ ಪಂದ್ಯದಲ್ಲಿ ಬ್ಯಾಟ್ ಬೀಸಿದ್ದು ಲಕ್ನೋ ತಂಡಕ್ಕೆ ಆರಂಭದಲ್ಲಿಯೇ ಬಲ ತುಂಬಿದರು.

ಇದಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಕೇಲ್ ಮೇಯರ್ಸ್ ಸ್ಪೋಟಕ ಆರಂಭವನ್ನು ನೀಡಿದ್ದರು. 38 ಎಸೆತಗಳನ್ನು ಎದುರಿಸಿದ್ದ ಅವರು 2 ಬೌಂಡರಿ ಹಾಗೂ 7 ಸಿಕ್ಸರ್ ನೆರವಿನಿಂದ 73 ರನ್ ಬಾರಿಸಿ ಮಿಂಚಿದ್ದರು. ಇದು ಕೇಲ್ ಮೇಯರ್ಸ್ ಅವರ ಚೊಚ್ಚಲ ಐಪಿಎಲ್ ಪಂದ್ಯವಾಗಿತ್ತು. ಈ ಪಂದ್ಯವನ್ನು ಎಲ್‌ಎಸ್‌ಜಿ ತಂಡ 50 ರನ್‌ಗಳ ಅಂತರದಿಂದ ಗೆದ್ದು ಬೀಗಿತ್ತು.

ಇನ್ನು ಈ ಪಂದ್ಯದಲ್ಲಿ ಮೊದಲಿಗೆ ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ನಡೆಸಿದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರವಾಗಿ ಆರಂಭಿಕರಾದ ಋತುರಾಜ್ ಗಾಯಕ್ವಾಡ್ ಹಾಗೂ ಡೆವೋನ್ ಕಾನ್ವೆ ಅಬ್ಬರದ ಪ್ರದರ್ಶನ ನೀಡಿದರು. ಇದರ ಪರಿಣಾಮವಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 217 ರನ್‌ಗಳನ್ನು ಗಳಿಸಿತ್ತು.

ಇದಕ್ಕೆ ಪ್ರತಿಯಾಗಿ ಬ್ಯಾಟಿಂಗ್ ನಡೆಸಿದ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪರವಾಗಿ ಆರಂಭಿಕ ಆಟಗಾರ ಕೇಲ್ ಮೇಯರ್ಸ್ ಹಾಗೂ ನಾಯಕ ಕೆಎಲ್ ರಾಹುಲ್ ಉತ್ತಮ ಆರಂಭ ನೀಡಿದರು. ಮಧ್ಯಮ ಕ್ರಮಾಂಕದಲ್ಲಿ ನಿಕೋಲಸ್ ಪೂರನ್ ಹೊರತುಪಡಿಸಿದರೆ ಪರಿಣಾಮಕಾರಿ ಬ್ಯಾಟಿಂಗ್ ಬಾರಲಿಲ್ಲ. ಹೀಗಾಗಿ ಈ ಹೈಸ್ಕೋರಿಂಗ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ 205 ರನ್‌ಗಳಿಗೆ ಆಲೌಟ್ ಆಯಿತು.

ಚೆನ್ನೈ ಸೂಪರ್ ಕಿಂಗ್ಸ್: ಡೆವೊನ್ ಕಾನ್ವೆ, ರುತುರಾಜ್ ಗಾಯಕ್ವಾಡ್, ಮೊಯಿನ್ ಅಲಿ, ಬೆನ್ ಸ್ಟೋಕ್ಸ್, ಅಂಬಟಿ ರಾಯುಡು, ರವೀಂದ್ರ ಜಡೇಜಾ, ಎಂಎಸ್ ಧೋನಿ (ನಾಯಕ & ವಿಕೆಟ್ ಕೀಪರ್), ಶಿವಂ ದುಬೆ, ಮಿಚೆಲ್ ಸ್ಯಾಂಟ್ನರ್, ದೀಪಕ್ ಚಹಾರ್, ಆರ್‌ಎಸ್ ಹಂಗರ್ಗೇಕರ್
ಬೆಂಚ್: ತುಷಾರ್ ದೇಶಪಾಂಡೆ, ಡ್ವೈನ್ ಪ್ರಿಟೋರಿಯಸ್, ಸುಭ್ರಾಂಶು ಸೇನಾಪತಿ, ಶೇಕ್ ರಶೀದ್, ಅಜಿಂಕ್ಯ ರಹಾನೆ, ನಿಶಾಂತ್ ಸಿಂಧು, ಅಜಯ್ ಜಾದವ್ ಮಂಡಲ್, ಪ್ರಶಾಂತ್ ಸೋಲಂಕಿ, ಸಿಮರ್ಜೀತ್ ಸಿಂಗ್, ಆಕಾಶ್ ಸಿಂಗ್, ಭಗತ್ ವರ್ಮಾ

ಲಕ್ನೋ ಸೂಪರ್ ಜೈಂಟ್ಸ್: ಕೆಎಲ್ ರಾಹುಲ್ (ನಾಯಕ), ಕೈಲ್ ಮೇಯರ್ಸ್, ದೀಪಕ್ ಹೂಡಾ, ಕೃನಾಲ್ ಪಾಂಡ್ಯ, ಮಾರ್ಕಸ್ ಸ್ಟೋನಿಸ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಕೃಷ್ಣಪ್ಪ ಗೌತಮ್, ಮಾರ್ಕ್ ವುಡ್, ರವಿ ಬಿಷ್ಣೋಯ್, ಯಶ್ ಠಾಕೂರ್, ಅವೇಶ್ ಖಾನ್
ಬೆಂಚ್: ಆಯುಷ್ ಬಡೋನಿ, ಜಯದೇವ್ ಉನದ್ಕತ್, ಡೇನಿಯಲ್ ಸಾಮ್ಸ್, ಪ್ರೇರಕ್ ಮಂಕಡ್, ಅಮಿತ್ ಮಿಶ್ರಾ, ಸ್ವಪ್ನಿಲ್ ಸಿಂಗ್, ನವೀನ್-ಉಲ್-ಹಕ್, ರೊಮಾರಿಯೋ ಶೆಫರ್ಡ್, ಯುದ್ವೀರ್ ಸಿಂಗ್ ಚರಕ್, ಕರಣ್ ಶರ್ಮಾ, ಮಯಾಂಕ್ ಯಾದವ್, ಮನನ್ ವೋಹ್ರಾ

Story first published: Tuesday, April 4, 2023, 14:29 [IST]
Other articles published on Apr 4, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+