For Quick Alerts
ALLOW NOTIFICATIONS  
For Daily Alerts
 

IPL 2023: ಎಲಿಮಿನೇಟರ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ಮುಖಾಮುಖಿ

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಬುಧವಾರ ಎಲಿಮಿನೇಟರ್ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ವಿರುದ್ಧ ಸೆಣೆಸಾಟ ನಡೆಸಲಿದೆ. ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣ ಈ ಪಂದ್ಯಕ್ಕೆ ಆತಿಥ್ಯ ವಹಿಸಲಿದ್ದು ಮೊದಲ ಕ್ವಾಲಿಫೈಕರ್ ಪಂದ್ಯ ಕೂಡ ಇದೇ ಪಂದ್ಯದಲ್ಲಿ ನಡೆಯುತ್ತಿದೆ.

ಲಕ್ನೋ ಸೂಪರ್ ಜೈಂಟ್ಸ್ ತಂಡ ಆರಂಭದಲ್ಲಿ ಉತ್ತಮ ಪ್ರದರ್ಶನ ನೀಡಿ ಬಳಿಕ ಮಧ್ಯದಲ್ಲಿ ಗೆಲುವಿನ ಲಯ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆದರೆ ಸರಿಯಾದ ಸಮಯದಲ್ಲಿ ಲಯ ಕಂಡುಕೊಂಡ ಕಾರಣ ಪ್ಲೇಆಫ್‌ಗೆ ಪ್ರವೇಶ ಪಡೆದುಕೊಂಡರುವ ಕೃನಾಲ್ ಪಾಂಡ್ಯ ನೇತೃತ್ವದ ತಂಡ ಮೊದಲ ಬಾರಿಗೆ ಫೈನಲ್ ಪ್ರವೇಶದ ಕನಸು ಕಾಣುತ್ತಿದೆ. ಆದರೆ ಅದು ಸಾಧ್ಯವಾಗಬೇಕಾದರೆ ಮೊದಲ ಅಗ್ನಿ ಪರೀಕ್ಷೆಯಲ್ಲಿ ಎಲ್‌ಎಸ್‌ಜಿ ತಂಡ ಗೆಲುವು ಸಾಧಿಸಬೇಕಿದೆ.

IPL 2023, LSG vs MI Eliminator match: Predicted Playing 11 and Pitch Report

ಇನ್ನು ಮುಂಬೈ ಇಂಡಿಯನ್ಸ್ ತಂಡ ಟೂರ್ನಿಯ ಆರಂಭದಲ್ಲಿ ಸಾಕಷ್ಟು ಹಿನ್ನಡೆ ಕಂಡಿದ್ದರೂ ಕೊನೆಯ ಹಂತದಲ್ಲಿ ಉತ್ತಮ ಪ್ರದರ್ಶನ ನೀಡಿದ ಕಾರಣದಿಂದಾಗಿ ಪ್ಲೇಆಫ್‌ನಲ್ಲಿ ಅವಕಾಶ ಗಿಟ್ಟಿಸಿಕೊಂಡಿದೆ. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಮಹತ್ವದ ಪಂದ್ಯದಲ್ಲಿ ಗೆಲುವು ಸಾಧಿಸಿ 16 ಅಂಕಗಳನ್ನು ಪಡೆದ ಮುಂಬೈ ಇಂಡಿಯನ್ಸ್ ತಂಡ ಪ್ಲೇಆಫ್‌ಗೆ ಪ್ರವೇಶಿಸಿತು.

ಪಂದ್ಯದ ಮಾಹಿತಿ ಹಾಗೂ ನೇರಪ್ರಸಾರದ ವಿವರ
ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳ ವಿರುದ್ಧದ ಈ ಪಂದ್ಯ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಮೇ 24ರಂದು ಆಯೋಜನೆಯಾಗಲಿದೆ. ಸಂಜೆ 7:30ಕ್ಕೆ ಈ ಪಂದ್ಯ ಆರಂಭವಾಗಲಿದ್ದು 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಸ್ಟಾರ್ ಸ್ಪೋರ್ಟ್ಸ್ ವಾಹಿನಿ ಪಂದ್ಯದ ನೇರಪ್ರಸಾರ ಮಾಡಿದರೆ ಜಿಯೋ ಸಿನಿಮಾದಲ್ಲಿ ಲೈವ್‌ಸ್ಟ್ರೀಮಿಂಗ್ ಮೂಲಕ ವೀಕ್ಷಿಸುವ ಅವಕಾಶವಿದೆ.

ಪಿಚ್ ರಿಪೋರ್ಟ್ ಹೀಗಿದೆ
ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದ ಪಿಚ್ ಬ್ಯಾಟರ್ ಹಾಗೂ ಬೌಲರ್ ಎರಡು ವಿಭಾಗಕ್ಕೂ ಉತ್ತಮವಾಗಿ ನೆರವು ನೀಡಲಿದೆ. ಪಿಚ್‌ನಲ್ಲಿ ಬೌನ್ಸ್ ಇದ್ದತೂ ನ್ಯಾಟರ್‌ಗಳು ಉತ್ತಮ ಮೊತ್ತಗಳಿಸಲು ಪಿಚ್ ನೆರವಾಗಲಿದೆ. ಇಲ್ಲಿ ಟಾಸ್ ಗೆದ್ದ ತಂಡ ರನ್ ಬೆನ್ನಟ್ಟುವುದನ್ನು ಆಯ್ಕೆ ಮಾಡಿಕೊಳ್ಳುವುದು ಉತ್ತಮ ನಿರ್ಧಾರವಾಗಲಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ತವರು ಮೈದಾನವಾಗಿರುವ ಕಾರಣ ತವರಿನ ಪಿಚ್‌ನ ಲಾಭ ಧೋನಿ ಪಡೆಗೆ ದೊರೆಯಲಿದೆ.

ಇತ್ತಂಡಗಳ ಸಂಭಾವ್ಯ ಆಡುವ ಬಳಗ
ಲಕ್ನೋ ಸೂಪರ್ ಜೈಂಟ್ಸ್
ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ದೀಪಕ್ ಹೂಡಾ, ಪ್ರೇರಕ್ ಮಂಕಡ್, ಕೃನಾಲ್ ಪಾಂಡ್ಯ (ನಾಯಕ), ಮಾರ್ಕಸ್ ಸ್ಟೊಯಿನಿಸ್, ನಿಕೋಲಸ್ ಪೂರನ್, ಕೃಷ್ಣಪ್ಪ ಗೌತಮ್, ರವಿ ಬಿಷ್ಣೋಯ್, ಯಶ್ ಠಾಕೂರ್, ನವೀನ್-ಉಲ್-ಹಕ್, ಮೊಹ್ಸಿನ್ ಖಾನ್.

ಮುಂಬೈ ಇಂಡಿಯನ್ಸ್
ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ನೆಹಾಲ್ ವಧೇರಾ, ಕ್ಯಾಮೆರಾನ್ ಗ್ರೀನ್, ಟಿಮ್ ಡೇವಿಡ್, ಪಿಯೂಷ್ ಚಾವ್ಲಾ, ಕ್ರಿಸ್ ಜೋರ್ಡಾನ್, ಜೇಸನ್ ಬೆಹ್ರೆನ್ಡಾರ್ಫ್, ಆಕಾಶ್ ಮಧ್ವಲ್, ಕುಮಾರ್ ಕಾರ್ತಿಕೇಯ.

Story first published: Tuesday, May 23, 2023, 15:29 [IST]
Other articles published on May 23, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+