Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2023 LSG Vs PBKS: ಪಂಜಾಬ್ ಶಿಸ್ತಿನ ಬೌಲಿಂಗ್: ಲಕ್ನೋಗೆ ಆಸರೆಯಾದ ಕೆಎಲ್ ರಾಹುಲ್

ಇಂಡಿಯನ್ ಪ್ರೀಮಿಯರ್ ಲೀಗ್ 2023ರ ಆವೃತ್ತಿಯ 21ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್‌ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 159 ರನ್ ಕಲೆಹಾಕಿದೆ. ಲಕ್ನೋದ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಶಿಸ್ತಿನ ಬೌಲಿಂಗ್ ಪ್ರದರ್ಶಿಸಿತು.

ಶಿಖರ್ ಧವನ್ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಕಾರಣ ಸ್ಯಾಮ್ ಕರನ್ ತಂಡದ ನಾಯಕತ್ವ ವಹಿಸಿಕೊಂಡಿದ್ದರು. ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ಉತ್ತಮ ಆರಂಭ ಪಡೆಯಿತು. ನಾಯಕ ಕೆಎಲ್ ರಾಹುಲ್ ಮತ್ತು ಕೈಲ್ ಮೇಯರ್ಸ್ ಮೊದಲನೇ ವಿಕೆಟ್‌ಗೆ 53 ರನ್‌ಗಳನ್ನು ಕಲೆಹಾಕಿದರು.

 KL Rahuls Half Century

ಕೈಲ್ ಮೇಯರ್ಸ್ 23 ಎಸೆತಗಳಲ್ಲಿ 1 ಬೌಂಡರಿ ಮೂರು ಸಿಕ್ಸರ್ ಸಹಿತ 29 ರನ್ ಗಳಿಸಿದರು. ಕೈಲ್ ಮೇಯರ್ಸ್ ಔಟಾಗುತ್ತಿದ್ದಂತೆ ಕ್ರೀಸ್‌ಗೆ ಬಂದ ದೀಪಕ್ ಹೂಡಾ ಕೇವಲ 2 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ನಂತರ ಬಂದ ಕೃನಾಲ್ ಪಾಂಡ್ಯ 17 ಎಸೆತಗಳಲ್ಲಿ 18 ರನ್ ಗಳಿಸುವ ಮೂಲಕ ನಾಯಕ ರಾಹುಲ್‌ಗೆ ಉತ್ತಮ ಜೊತೆಯಾದರು. ಈ ಜೋಡಿ 48 ರನ್‌ಗಳನ್ನು ಕಲೆಹಾಕಿತು.

ಕಳೆದ ಪಂದ್ಯದಲ್ಲಿ 14 ಎಸೆತಗಳಲ್ಲಿ ಅರ್ಧಶತಕ ಗಳಿಸಿದ್ದ ನಿಕೋಲಸ್ ಪೂರನ್ ಇಂದು ಆಡಿದ ಮೊದಲ ಎಸೆತದಲ್ಲೇ ಔಟಾದರು. ಮಾರ್ಕಸ್ ಸ್ಟೊಯಿನಿಸ್ ಕೂಡ 11 ಎಸೆತಗಳಲ್ಲಿ 15 ರನ್ ಗಳಿಸಿ ಔಟಾದರು. ಆಯುಷ್ ಬದೋನಿ ಅಜೇಯ 5 ರನ್ ಗಳಿಸಿದರೆ, ಕೃಷ್ಣಪ್ಪ ಗೌತಮ್ ಕೇವಲ 1 ರನ್ ಗಳಿಸಿ ಔಟಾದರು.ಯುದುವೀರ್ ಸಿಂಗ್ ಕೂಡ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು.

ನಾಯಕ ಸ್ಯಾಮ್ ಕರನ್ ಮೂರು ವಿಕೆಟ್ ಪಡೆದು ಮಿಂಚಿದರು. ಕಗಿಸೊ ರಬಾಡ ಎರಡು ವಿಕೆಟ್ ಪಡೆದರು. ಅರ್ಷದೀಪ್ ಸಿಂಗ್, ಹಪ್ರೀತ್ ಬ್ರಾರ್ ಮತ್ತು ಸಿಕಂದರ್ ರಾಜಾ ತಲಾ ಒಂದು ವಿಕೆಟ್ ಪಡೆಯುವ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಕಟ್ಟಿ ಹಾಕಿದರು.

 KL Rahuls Half Century

ತಾಳ್ಮೆಯ ಅರ್ಧಶತಕ ಗಳಿಸಿದ ನಾಯಕ ಕೆಎಲ್ ರಾಹುಲ್

ಉತ್ತಮ ಆರಂಭ ಪಡೆದ ಲಕ್ನೋ ಸೂಪರ್ ಜೈಂಟ್ಸ್ ನಂತರ ದಿಢೀರ್ ಕುಸಿತ ಕಂಡಿತು. ಒಂದು ಕಡೆ ವಿಕೆಟ್ ಬೀಳುತ್ತಿದ್ದರೆ ಮತ್ತೊಂದು ಕಡೆ ನಾಯಕ ಕೆಎಲ್ ರಾಹುಲ್ ಜವಾಬ್ದಾರಿಯುತ ಇನ್ನಿಂಗ್ಸ್ ಆಡಿದರು. 56 ಎಸೆತಗಳಲ್ಲಿ 8 ಬೌಂಡರಿ 1 ಸಿಕ್ಸರ್ ಸಹಿತ 74 ರನ್ ಗಳಿಸಿ ಕೊನೆಯ ಕ್ಷಣದಲ್ಲಿ ವಿಕೆಟ್ ಒಪ್ಪಿಸಿದರು. ಇದು ಕೆಎಲ್ ರಾಹುಲ್‌ಗೆ ಈ ಆವೃತ್ತಿಯ ಮೊದಲ ಅರ್ಧಶತಕವಾಗಿದೆ.

ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ 11

ಮ್ಯಾಥ್ಯೂ ಶಾರ್ಟ್, ಅಥರ್ವ ಟೈಡೆ, ಸಿಕಂದರ್ ರಜಾ, ಹರ್‌ಪ್ರೀತ್ ಸಿಂಗ್ ಭಾಟಿಯಾ, ಸ್ಯಾಮ್ ಕುರಾನ್ (ನಾಯಕ), ಶಾರುಖ್ ಖಾನ್, ಜಿತೇಶ್ ಶರ್ಮಾ(ವಿಕೆಟ್ ಕೀಪರ್), ಕಗಿಸೊ ರಬಾಡ, ಅರ್ಶ್‌ದೀಪ್ ಸಿಂಗ್, ರಾಹುಲ್ ಚಾಹರ್, ಹರ್‌ಪ್ರೀತ್ ಬ್ರಾರ್,

ಲಕ್ನೋ ಸೂಪರ್ ಜೈಂಟ್ಸ್ ಪ್ಲೇಯಿಂಗ್ 11

ಕೆಎಲ್ ರಾಹುಲ್ (ನಾಯಕ), ಕೈಲ್ ಮೇಯರ್ಸ್, ಕೃನಾಲ್ ಪಾಂಡ್ಯ, ದೀಪಕ್ ಹೂಡಾ, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಮಾರ್ಕಸ್ ಸ್ಟೊಯಿನಿಸ್, ಆಯುಷ್ ಬದೋನಿ, ಯುಧ್ವೀರ್ ಸಿಂಗ್ ಚರಕ್, ಅವೇಶ್ ಖಾನ್, ರವಿ ಬಿಷ್ಣೋಯ್, ಮಾರ್ಕ್ ವುಡ್.

Story first published: Saturday, April 15, 2023, 21:38 [IST]
Other articles published on Apr 15, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+