
ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಇಂದು ಡಬಲ್ ಹೆಡ್ಡರ್ ಪಂದ್ಯ ನಡೆಯಲಿದೆ. ಮೊದಲ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸುತ್ತಿದೆ. ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಆತಿಥೇಯ ಸಿಎಸ್‌ಕೆ ಆರಂಭದಲ್ಲಿ ಬ್ಯಾಟಿಂಗ್ ನಡೆಸಲಿದೆ. ಮಳೆಯಿಂದಾಗಿ ಪಂದ್ಯ 15 ನಿಮಿಷಗಳಷ್ಟು ತಡವಾಗಿ ಆರಂಭಗೊಂಡಿತು.
ಲಕ್ನೋದ ಏಕಾನ ಕ್ರೀಡಾಂಗಣದಲ್ಲಿ ಬ್ಯಾಟಿಂಗ್ ಯಾವಾಗಲೂ ಕಠಿಣ ಎಂಬುದು ತಿಳಿದಿರುವ ಸಂಗತಿ. ಅದಕ್ಕೆ ಪೂರಕವಾಗಿ ಕಳೆದ ಪಂದ್ಯದಲ್ಲಿ ಆರ್‌ಸಿಬಿ ಹಾಗೂ ಎಲ್‌ಎಸ್‌ಜಿ ಇದೇ ಮೈದಾನದಲ್ಲಿ ಮುಖಾಮುಖಿಯಾಗಿದ್ದಾಗ ರನ್‌ಗಳಿಸಲು ಬ್ಯಾಟರ್‌ಗಳು ಪರದಾಡಿರುವುದು ಕೂಡ ಗಮನಿಸಬಹುದು. ಇಂದಿನ ಪಂದ್ಯದಲ್ಲಿಯೂ ಪಿಚ್ ಅದೇ ರೀತಿಯಾಗಿ ವರ್ತಿಸುವ ಸಾಧ್ಯತೆಯಿದೆ. ಇಲ್ಲಿ ರನ್‌ಗಳಿಸುವುದು ಬ್ಯಾಟರ್‌ಗಳಿಗೆ ಕಠಿಣವಾಗಿರಲಿದ್ದು ಸಿಕ್ಸರ್ ಬೌಂಡರಿಗಿಂತ ಹೆಚ್ಚಾಗಿ ಸ್ಟ್ರೈಕ್ ರೊಟೇಟ್ ಮಾಡುವುದರ ಮೇಲೆ ಬ್ಯಾಟರ್‌ಗಳು ಗಮನಹರಿಸಬೇಕಾಗುತ್ತದೆ. ಇನ್ನು ಈ ಪಂದ್ಯದಲ್ಲಿ ಸ್ಪಿನ್ನರ್‌ಗಳ ಪಾತ್ರ ಅತ್ಯಂತ ಮಹತ್ವದ್ದಾಗಿರಲಿದೆ.
ಲೈವ್ ಸ್ಕೋರ್ ಹೀಗಿದೆ
ಹವಾಮಾನ ವರದಿ: ಈ ಪಂದ್ಯಕ್ಕೆ ಮಳೆಯ ಆತಂಕ ಇದ್ದು ಲಕ್ನೋ ಪ್ರದೇಶದಲ್ಲಿ ಪಂದ್ಯದ ಅವಧಿಯಲ್ಲಿ ಮಳೆಯಾಗುವ ಸಾಧ್ಯತೆ ಶೇಕಡಾ 24ರಷ್ಟು ಇದೆ. ಇನ್ನು ಪಂದ್ಯದ ಸಂದರ್ಭದಲ್ಲಿ 21-27 ಡಿಗ್ರಿ ಸೆಲ್ಸಿಯಸ್‌ನಷ್ಟು ಉಷ್ಣಾಂಶವಿರುವ ನಿರೀಕ್ಷೆಯಿದೆ.
ಲಕ್ನೋ ಸೂಪರ್ ಜೈಂಟ್ಸ್: ಅವೇಶ್ ಖಾನ್, ಆಯುಷ್ ಬಡೋನಿ, ಕ್ವಿಂಟನ್ ಡಿ ಕಾಕ್, ಕೆ ಗೌತಮ್, ದೀಪಕ್ ಹೂಡಾ, ಪ್ರೇರಕ್ ಮಂಕಡ್, ಕೈಲ್ ಮೇಯರ್ಸ್, ಅಮಿತ್ ಮಿಶ್ರಾ, ಮೊಹ್ಸಿನ್ ಖಾನ್, ನವೀನ್-ಉಲ್-ಹಕ್, ಕೃನಾಲ್ ಪಾಂಡ್ಯ (ನಾಯಕ), ನಿಕೋಲಸ್ ಪೂರನ್, ರವಿ ಬಿಷ್ಣೋಯ್, ಡೇನಿಯಲ್ ಸಾಮ್ಸ್, ಕರಣ್ ಶರ್ಮಾ, ರೊಮಾರಿಯೋ ಶೆಫರ್ಡ್, ಮಾರ್ಕಸ್ ಸ್ಟೊಯಿನಿಸ್, ಸ್ವಪ್ನಿಲ್ ಸಿಂಗ್, ಜಯದೇವ್ ಉನದ್ಕತ್, ಮನನ್ ವೋಹ್ರಾ, ಮಾರ್ಕ್ ವುಡ್, ಮಯಾಂಕ್ ಯಾದವ್, ಯಶ್ ಠಾಕೂರ್, ಯುದ್ವೀರ್ ಸಿಂಗ್.
ಚೆನ್ನೈ ಸೂಪರ್ ಕಿಂಗ್ಸ್: ಎಂಎಸ್ ಧೋನಿ(ನಾಯಕ), ಋತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಮೊಯಿನ್ ಅಲಿ, ಸುಭ್ರಾಂಶು ಸೇನಾಪತಿ, ಅಂಬಾಟಿ ರಾಯುಡು, ರವೀಂದ್ರ ಜಡೇಜಾ, ಶಿವಂ ದುಬೆ, ರಾಜವರ್ಧನ್ ಹಂಗರ್ಗೇಕರ್, ಡ್ವೈನ್ ಪ್ರಿಟೋರಿಯಸ್, ಮಿಚೆಲ್ ಸ್ಯಾಂಟ್ನರ್, ಮಹೇಶ್ ತೀಕ್ಷಣ, ಪ್ರಶಾಂತ್ ಸೋಲಂಕಿ, ದೀಪಕ್ ಚಾಹರ್, ಮುಖೇಶ್ ಚೌಧರಿ, ಸಿಮರ್ಜೀತ್ ಸಿಂಗ್, ತುಷಾರ್ ದೇಶಪಾಂಡೆ, ಮಥೀಶ ಪತಿರಾನ, ಬೆನ್ ಸ್ಟೋಕ್ಸ್, ಸಿಸಂದಾ ಮಗಲಾ, ಅಜಿಂಕ್ಯ ರಹಾನೆ, ಶೇಕ್ ರಶೀದ್, ನಿಶಾಂತ್ ಸಿಂಧು, ಅಜಯ್ ಮಂಡಲ್, ಭಗತ್ ವರ್ಮಾ, ಆಕಾಶ್ ಸಿಂಗ್