LSG vs SRH IPL 2023: ಲಕ್ನೋ ತಂಡದ ಆಲ್‌ರೌಂಡ್ ಪ್ರದರ್ಶನ; ಹೈದರಾಬಾದ್ ತಂಡಕ್ಕೆ ಸತತ 2ನೇ ಸೋಲು
ಶುಕ್ರವಾರ, ಏಪ್ರಿಲ್ 7ರಂದು ಲಕ್ನೋದಲ್ಲಿ ನಡೆದ 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 10ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು ಸನ್‌ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಅನಾಯಾಸ ಗೆಲುವು ಸಾಧಿಸಿದೆ.
ಸನ್‌ರೈಸರ್ಸ್ ಹೈದರಾಬಾದ್ ತಂಡ ನೀಡಿದ್ದ 122 ರನ್‌ಗಳ ಗುರಿ ಬೆನ್ನಟ್ಟಿದ ಲಕ್ನೋ ಸೂಪರ್ ಜೈಂಟ್ಸ್ ಕೇವಲ 16 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 127 ರನ್‌ಗಳನ್ನು ಗಳಿಸಿ 5 ವಿಕೆಟ್‌ಗಳ ಗೆಲುವು ದಾಖಲಿಸಿತು.

ಈ ಮೂಲಕ ಕೆಎಲ್ ರಾಹುಲ್ ಪಡೆ ಆಡಿದ ಮೂರು ಪಂದ್ಯಗಳಲ್ಲಿ ಎರಡು ಗೆಲುವು ಮತ್ತು ಒಂದು ಸೋಲು ಕಂಡಿದ್ದರೆ, ಏಡೆನ್ ಮಾರ್ಕ್ರಾಮ್ ನಾಯಕತ್ವದ ಸನ್‌ರೈಸರ್ಸ್ ಹೈದರಾಬಾದ್ ತಂಡ ಆಡಿದ ಎರಡೂ ಪಂದ್ಯಗಳನ್ನು ಸೋತು ನಿರಾಸೆ ಅನುಭವಿಸಿದೆ.
ಸೂಪರ್ ಜೈಂಟ್ಸ್ ತಂಡದ ಪರ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ನಾಯಕ ಕೆಎಲ್ ರಾಹುಲ್ ಮತ್ತು ಕೈಲ್ ಮೇಯರ್ಸ್ ಉತ್ತಮ ಆರಂಭ ಒದಗಿಸಿದರು. ಮೊದಲ ವಿಕೆಟ್‌ಗೆ 4.3 ಓವರ್‌ಗಳಲ್ಲಿ 35 ರನ್ ಜೊತೆಯಾಟ ನೀಡಿದರು. ಈ ವೇಳೆ 13 ರನ್ ಗಳಿಸಿದ್ದ ಕೈಲ್ ಮೇಯರ್ಸ್ ವಿಕೆಟ್ ಒಪ್ಪಿಸಿದರು.

ನಂತರ ಬಂದ ದೀಪಕ್ ಹೂಡಾ 8 ಎಸೆತಗಳಲ್ಲಿ 1 ಸಿಕ್ಸರ್ ಸಮೇತ 7 ರನ್ ಗಳಿಸಿ ಭುವನೇಶ್ವರ್ ಕುಮಾರ್ ಬೌಲಿಂಗ್‌ನಲ್ಲಿ ಅವರಿಗೇ ಕ್ಯಾಚ್ ನೀಡಿ ಪೆವಿಲಿಯನ್ ಸೇರಿದರು. ಆಗ ಬ್ಯಾಟಿಂಗ್‌ಗೆ ಬಂದ ಕೃನಾಲ್ ಪಾಂಡ್ಯ ಅವರು ಕೆಎಲ್ ರಾಹುಲ್ ಜೊತೆ ಸೇರಿ ಉತ್ತಮ ಜೊತೆಯಾಟವಾಡಿದರು.
ಕೃನಾಲ್ ಪಾಂಡ್ಯ 23 ಎಸೆತಗಳಲ್ಲಿ 4 ಬೌಂಡಿರಿ ಮತ್ತು 1 ಸಿಕ್ಸರ್ ನೆರವಿನಿಂದ 34 ರನ್ ಗಳಿಸಿ ಔಟಾದರು. ಇವರ ಬಳಿಕ ಆರಂಭಿಕ ಕೆಎಲ್ ರಾಹುಲ್ 31 ಎಸೆತಗಳಲ್ಲಿ 4 ಬೌಂಡರಿ ಸಮೇತ 35 ರನ್ ಬಾರಿಸಿ ವಿಕೆಟ್ ನೀಡಿದರು. ಕೊನೆಯಲ್ಲಿ ಮಾರ್ಕಸ್ ಸ್ಟೋಯಿನಿಸ್ 11 ರನ್ ಮತ್ತು ನಿಕೋಲಸ್ ಪೂರನ್ 10 ರನ್ ಗಳಿಸಿ ಗೆಲುವಿನ ಗಡಿ ಮುಟ್ಟಿಸಿದರು.
ಇನ್ನು ಬೌಲಿಂಗ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ಪರ ಆದಿಲ್ ರಶೀದ್ 3 ಓವರ್‌ಗಳಲ್ಲಿ 23 ರನ್ ನೀಡಿ 2 ವಿಕೆಟ್ ಪಡೆದರು. ಭುವನೇಶ್ವರ್ ಕುಮಾರ್ 2 ಓವರ್‌ಗಳಲ್ಲಿ 19 ರನ್ ನೀಡಿ 1 ವಿಕೆಟ್ ಪಡೆದರು. ಫಜಲ್ಹಕ್ ಫಾರೂಕಿ 3 ಓವರ್‌ಗಳಲ್ಲಿ 13 ರನ್ ನೀಡಿ 1 ವಿಕೆಟ್ ಪಡೆದರೆ, ಉಮ್ರಾನ್ ಮಲಿಕ್ 2 ಓವರ್‌ಗಳಲ್ಲಿ 22 ರನ್ ನೀಡಿ 1 ವಿಕೆಟ್ ಪಡೆದರು.
ಇದಕ್ಕೂ ಮುನ್ನ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಏಡೆನ್ ಮಾರ್ಕ್ರಾಮ್ ನಾಯಕತ್ವದ ಸನ್‌ರೈಸರ್ಸ್ ಹೈದರಾಬಾದ್ ತಂಡ ನಿಗದಿತ 20 ಓವರ್‌ಗಳಲ್ಲಿ ವಿಕೆಟ್ ಕಳೆದುಕೊಂಡು 121 ರನ್ ಗಳಿಸಿತು.
ಸನ್‌ರೈಸರ್ಸ್ ಹೈದರಾಬಾದ್ ತಂಡ ಪರ ಬ್ಯಾಟಿಂಗ್ ಆರಂಭಿಸಿದ ಮಯಾಂಕ್ ಅಗರ್ವಾಲ್ ಮತ್ತು ಅನ್ಮೋಲ್‌ಪ್ರಿತ್ ಸಿಂಗ್ ಉತ್ತಮ ಆರಂಭ ನೀಡುವಲ್ಲಿ ವಿಫಲರಾದರು. 2.5 ಓವರ್‌ಗಳಲ್ಲಿ ತಂಡದ ಮೊತ್ತ 21 ರನ್‌ಗಳಾಗಿದ್ದಾಗ 8 ರನ್ ಗಳಿಸಿ ಆಡುತ್ತಿದ್ದ ಮಯಾಂಕ್ ಅಗರ್ವಾಲ್ ಬೇಗನೆ ವಿಕೆಟ್ ಒಪ್ಪಿಸಿದರು.
ನಂತರ ಬಂದ ರಾಹುಲ್ ತ್ರಿಪಾಠಿ 41 ಎಸೆತಗಳಲ್ಲಿ 4 ಬೌಂಡರಿಗಳ ಸಮೇತ ನಿಧಾಗತಿಯ 35 ರನ್ ಗಳಿಸಿದರು. ಈ ವೇಳೆ ಅನ್ಮೋಲ್‌ಪ್ರಿತ್ ಸಿಂಗ್ 26 ಎಸೆತಗಳಲ್ಲಿ 3 ಬೌಂಡರಿ ಮತ್ತು 1 ಸಿಕ್ಸರ್ ಸಹಾಯದಿಂದ 31 ರನ್ ಗಳಿಸಿದ್ದಾಗ ಕೃನಾಲ್ ಪಾಂಡ್ಯಗೆ ವಿಕೆಟ್ ಒಪ್ಪಿಸಿದರು.
ಆಗ ಕ್ರೀಸ್‌ಗೆ ಬಂದ ನಾಯಕ ಏಡೆನ್ ಮಾರ್ಕ್ರಾಮ್ ಎದುರಿಸಿದ ಮೊದಲ ಎಸೆತದಲ್ಲಿಯೇ ಕೃನಾಲ್ ಪಾಂಡ್ಯ ಬೌಲಿಂಗ್‌ನಲ್ಲಿ ಬೌಲ್ಡ್ ಆದರು. ನಂತರ ಹ್ಯಾರಿ ಬ್ರೂಕ್ 3 ರನ್, ವಾಷಿಂಗ್ಟನ್ ಸುಂದರ್ 28 ಎಸೆತಗಳಲ್ಲಿ 16 ರನ್, ಅಬ್ದುಲ್ ಸಮದ್ 10 ಎಸೆತಗಳಲ್ಲಿ 1 ಬೌಂಡರಿ ಮತ್ತು 2 ಸಿಕ್ಸರ್ ನೆರವಿನಿಂದ 21 ರನ್ ಗಳಿಸಿದರು. ಉಳಿದಂತೆ ಆದಿಲ್ ರಶೀದ್ 4 ರನ್ ಗಳಿಸಿದರು.
ಇನ್ನು ಬೌಲಿಂಗ್‌ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪರ ಕೃನಾಲ್ ಪಾಂಡ್ಯ 4 ಓವರ್‌ಗಳಲ್ಲಿ 18 ರನ್ ನೀಡಿ 3 ವಿಕೆಟ್ ಪಡೆದರೆ, ಅಮಿತ್ ಮಿಶ್ರಾ 4 ಓವರ್‌ಗಳಲ್ಲಿ 23 ರನ್ ನೀಡಿ 2 ವಿಕೆಟ್ ಪಡೆದರು. ಉಳಿದಂತೆ ಯಶ್ ಠಾಕೂರ್ ಮತ್ತು ರವಿ ಬಿಷ್ಣೋಯಿ ತಲಾ ಒಂದೊಂದು ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications