For Quick Alerts
ALLOW NOTIFICATIONS  
For Daily Alerts
 

SRH vs LSG: ಸನ್‌ರೈಸರ್ಸ್ ಪ್ಲೇಆಫ್ ಆಸೆಗೆ ತಣ್ಣೀರೆರಚಿದ ಪೂರನ್, ಸ್ಟಾಯಿನಿಸ್!

IPL 2023: Lucknow Super Giants destroys SRH playoff dream by beating them by 7 wickets

ಇಂದು ( ಮೇ 13 ) ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಸನ್ ರೈಸರ್ಸ್ ಹೈದರಾಬಾದ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳ ನಡುವಿನ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ 7 ವಿಕೆಟ್‌ಗಳ ಭರ್ಜರಿ ಗೆಲುವನ್ನು ಸಾಧಿಸಿ ಅಂಕಪಟ್ಟಿಯಲ್ಲಿ ಏರಿಕೆ ಕಂಡು ತನ್ನ ಪ್ಲೇಆಫ್ ಹಾದಿಯನ್ನು ಮತ್ತಷ್ಟು ಸುಗಮ ಮಾಡಿಕೊಳ್ಳುವುದರ ಜತೆಗೆ ಸನ್ ರೈಸರ್ಸ್ ಹೈದರಾಬಾದ್ ತಂಡ ಪ್ಲೇಆಫ್ ರೇಸ್‌ನಿಂದ ಹೊರಬೀಳುವಂತೆ ಮಾಡಿದೆ.

ಹೌದು, ಟಾಸ್ ಗೆದ್ದು ಬ್ಯಾಟಿಂಗ್ ಆರಿಸಿಕೊಂಡು ಮೊದಲು ಬ್ಯಾಟಿಂಗ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ ಹೆನ್ರಿಚ್ ಕ್ಲಾಸಿನ್ ಹಾಗೂ ಅಬ್ದುಲ್ ಸಮದ್ ಅಬ್ಬರದ ಬ್ಯಾಟಿಂಗ್ ನೆರವಿನಿಂದ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 182 ರನ್ ಕಲೆಹಾಕಿ, ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಗೆಲ್ಲಲು 183 ರನ್‌ಗಳ ಗುರಿಯನ್ನು ನೀಡಿತ್ತು.

ಈ ಗುರಿಯನ್ನು ಬೆನ್ನತ್ತುವಲ್ಲಿ ಯಶಸ್ವಿಯಾಗಿರುವ ಲಕ್ನೋ ಸೂಪರ್ ಜೈಂಟ್ಸ್ ಮಾರ್ಕಸ್ ಸ್ಟಾಯಿನಿಸ್ ಹಾಗೂ ನಿಕೋಲಸ್ ಪೂರನ್ ಸ್ಪೋಟಕ ಆಟದ ನೆರವಿನಿಂದ 19.2 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 185 ರನ್ ಕಲೆಹಾಕಿದೆ.

ಸನ್‌ ರೈಸರ್ಸ್ ಹೈದರಾಬಾದ್ ಇನ್ನಿಂಗ್ಸ್: ಸನ್ ರೈಸರ್ಸ್ ಹೈದರಾಬಾದ್ ಪರ ಆರಂಭಿಕ ಆಟಗಾರರಾಗಿ ಅನ್‌ಮೋಲ್‌ಪ್ರೀತ್ ಸಿಂಗ್ ಹಾಗೂ ಅಭಿಷೇಕ್ ಶರ್ಮಾ ಕಣಕ್ಕಿಳಿದರು. ಅನ್‌ಮೋಲ್‌ಪ್ರೀತ್ ಸಿಂಗ್ 27 ಎಸೆತಗಳಲ್ಲಿ 36 ರನ್ ಗಳಿಸಿದರೆ, ಅಭಿಷೇಕ್ ಶರ್ಮಾ 5 ಎಸೆತಗಳಲ್ಲಿ 7 ರನ್ ಕಲೆಹಾಕಿದರು. ಇನ್ನುಳಿದಂತೆ ರಾಹುಲ್ ತ್ರಿಪಾಠಿ 13 ಎಸೆತಗಳಲ್ಲಿ 20 ರನ್, ಏಡನ್ ಮಾರ್ಕ್ರಮ್ 20 ಎಸೆತಗಳಲ್ಲಿ 28 ರನ್, ಗ್ಲೆನ್ ಫಿಲಿಪ್ಸ್ ಗೋಲ್ಡನ್ ಡಕ್ಔಟ್, ಹೆನ್ರಿಚ್ ಕ್ಲಾಸಿನ್ 29 ಎಸೆತಗಳಲ್ಲಿ 47 ರನ್, ಅಬ್ದುಲ್ ಸಮದ್ 25 ಎಸೆತಗಳಲ್ಲಿ ಅಜೇಯ 35 ರನ್ ಹಾಗೂ ಭುವನೇಶ್ವರ್ ಕುಮಾರ್ ಒಂದು ಎಸೆತದಲ್ಲಿ ಅಜೇಯ 2 ರನ್ ಬಾರಿಸಿದರು.

ಲಕ್ನೋ ಸೂಪರ್ ಜೈಂಟ್ಸ್ ತಂಡದ ಪರ ನಾಯಕ ಕೃನಾಲ್ ಪಾಂಡ್ಯ ಎರಡು ವಿಕೆಟ್ ಪಡೆದರೆ, ಯುದ್ವೀರ್ ಸಿಂಗ್ ಚರಕ್, ಅವೇಶ್ ಖಾನ್, ಯಶ್ ಠಾಕೂರ್ ಹಾಗೂ ಅಮಿತ್ ಮಿಶ್ರಾ ತಲಾ ಒಂದೊಂದು ವಿಕೆಟ್ ಪಡೆದರು.

ಲಕ್ನೋ ಸೂಪರ್ ಜೈಂಟ್ಸ್ ಇನ್ನಿಂಗ್ಸ್: ಸನ್ ರೈಸರ್ಸ್ ಹೈದರಾಬಾದ್ ನೀಡಿದ ಗುರಿಯನ್ನು ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ಪರ ಆರಂಭಿಕ ಆಟಗಾರರಾಗಿ ಕೈಲ್ ಮೇಯರ್ಸ್ ಹಾಗೂ ಕ್ವಿಂಟನ್ ಡಿ ಕಾಕ್ ಕಣಕ್ಕಿಳಿದರು. ಕೈಲ್ ಮೇಯರ್ಸ್ 14 ಎಸೆತಗಳನ್ನು ಎದುರಿಸಿ ಕೇವಲ 2 ರನ್ ಗಳಿಸಿದ ಕಾರಣ ಲಕ್ನೋ ಸೂಪರ್ ಜೈಂಟ್ಸ್ ಕಳಪೆ ಆರಂಭವನ್ನು ಪಡೆದುಕೊಂಡಿತು. ಕ್ವಿಂಟನ್ ಡಿ ಕಾಕ್ 19 ಎಸೆತಗಳಲ್ಲಿ 29 ರನ್ ಗಳಿಸಿದರು.

ಹೀಗೆ ಕಳಪೆ ಆರಂಭ ಪಡೆದುಕೊಂಡು ಗೆಲ್ಲುವುದರಲ್ಲಿ ಅನುಮಾನ ಮೂಡಿಸಿದ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಆಸರೆಯಾದದ್ದು ಪ್ರೇರಕ್ ಮಾಂಕಡ್, ಮಾರ್ಕಸ್ ಸ್ಟಾಯಿನಿಸ್ ಹಾಗೂ ನಿಕೋಲಸ್ ಪೂರನ್. ಈ ಮೂವರ ಅಮೋಘ ಆಟ ಪಂದ್ಯದ ದಿಕ್ಕನ್ನೇ ಬದಲಾಯಿಸಿತು. ಮಂಕಾಡ್ 45 ಎಸೆತಗಳಲ್ಲಿ 7 ಬೌಂಡರಿ ಹಾಗೂ ಎರಡು ಸಿಕ್ಸರ್ ಸಹಿತ ಅಜೇಯ 64 ರನ್ ಗಳಿಸಿದರೆ, ಮಾರ್ಕಸ್ ಸ್ಟಾಯಿನಿಸ್ 25 ಎಸೆತಗಳಲ್ಲಿ 2 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 40 ರನ್ ಗಳಿಸಿದರು. ಸ್ಟಾಯಿನಿಸ್ ಔಟ್ ಆದ ಬಳಿಕ ಕಣಕ್ಕಿಳಿದ ನಿಕೋಲಸ್ ಪೂರನ್ 13 ಎಸೆತಗಳಲ್ಲಿ 3 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ಅಜೇಯ 44 ರನ್ ಚಚ್ಚಿ 338.46 ಸ್ಟ್ರೈಕ್ ರೇಟ್‌ನೊಂದಿಗೆ ಬ್ಯಾಟ್ ಬೀಸಿದರು. ಪೂರನ್ ಬ್ಯಾಟ್ ಹಿಡಿದು ಕಣಕ್ಕಿಳಿಯುತ್ತಿದ್ದಂತೆ ಮೊದಲ ಮೂರು ಎಸೆತಗಳಲ್ಲಿಯೇ ಮೂರು ಸಿಕ್ಸರ್ ಬಾರಿಸಿ ಅಬ್ಬರಿಸಿದ್ದು ವಿಶೇಷವಾಗಿತ್ತು.

ಸನ್ ರೈಸರ್ಸ್ ಹೈದರಾಬಾದ್ ಪರ ಅಭಿಷೇಕ್ ಶರ್ಮಾ, ಮಯಾಂಕ್ ಮಾರ್ಕಂಡೆ ಹಾಗೂ ಗ್ಲೆನ್ ಫಿಲಿಪ್ಸ್ ತಲಾ ಒಂದೊಂದು ವಿಕೆಟ್ ಪಡೆದರು.

ಆಡುವ ಬಳಗಗಳು:

ಲಕ್ನೋ ಸೂಪರ್ ಜೈಂಟ್ಸ್ ಆಡುವ ಬಳಗ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಕೈಲ್ ಮೇಯರ್ಸ್, ಕೃನಾಲ್ ಪಾಂಡ್ಯ (ನಾಯಕ), ಪ್ರೇರಕ್ ಮಂಕಡ್, ಮಾರ್ಕಸ್ ಸ್ಟೋನಿಸ್, ನಿಕೋಲಸ್ ಪೂರನ್, ಅಮಿತ್ ಮಿಶ್ರಾ, ಯಶ್ ಠಾಕೂರ್, ರವಿ ಬಿಷ್ಣೋಯ್, ಯುಧ್ವೀರ್ ಸಿಂಗ್ ಚರಕ್, ಅವೇಶ್ ಖಾನ್

ಸನ್ ರೈಸರ್ಸ್ ಹೈದರಾಬಾದ್ ಆಡುವ ಬಳಗ: ಅಭಿಷೇಕ್ ಶರ್ಮಾ, ಅನ್ಮೋಲ್‌ಪ್ರೀತ್ ಸಿಂಗ್, ರಾಹುಲ್ ತ್ರಿಪಾಠಿ, ಐಡೆನ್ ಮಾರ್ಕ್ರಾಮ್(ನಾಯಕ), ಹೆನ್ರಿಚ್ ಕ್ಲಾಸೆನ್(ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಅಬ್ದುಲ್ ಸಮದ್, ಟಿ ನಟರಾಜನ್, ಮಯಾಂಕ್ ಮಾರ್ಕಂಡೆ, ಭುವನೇಶ್ವರ್ ಕುಮಾರ್, ಫಜಲ್ಹಕ್ ಫಾರೂಕಿ

Story first published: Saturday, May 13, 2023, 19:59 [IST]
Other articles published on May 13, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+