Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

LSG vs SRH IPL 2023: ಲಕ್ನೋ ಬೌಲಿಂಗ್ ದಾಳಿಗೆ ತತ್ತರಿಸಿದ ಹೈದರಾಬಾದ್; ಕೆಎಲ್ ರಾಹುಲ್ ಪಡೆಗೆ ಸಾಧಾರಣ ಗುರಿ

ಶುಕ್ರವಾರ, ಏಪ್ರಿಲ್ 7ರಂದು ಲಕ್ನೋದಲ್ಲಿ ನಡೆಯುತ್ತಿರುವ 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 10ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸನ್‌ರೈಸರ್ಸ್ ಹೈದರಾಬಾದ್ ತಂಡ ಸಾಧಾರಣ ಮೊತ್ತ ಕಲೆಹಾಕಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಏಡೆನ್ ಮಾರ್ಕ್ರಾಮ್ ನಾಯಕತ್ವದ ಸನ್‌ರೈಸರ್ಸ್ ಹೈದರಾಬಾದ್ ತಂಡ ನಿಗದಿತ 20 ಓವರ್‌ಗಳಲ್ಲಿ ವಿಕೆಟ್ ಕಳೆದುಕೊಂಡು 121 ರನ್ ಗಳಿಸಿದ್ದು, ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ 122 ರನ್‌ಗಳ ಗುರಿ ನೀಡಿದೆ.

IPL 2023: Lucknow Super Giants Need 122 Runs To Win Against Sun Risers Hyderabad

ಸನ್‌ರೈಸರ್ಸ್ ಹೈದರಾಬಾದ್ ತಂಡ ಪರ ಬ್ಯಾಟಿಂಗ್ ಆರಂಭಿಸಿದ ಮಯಾಂಕ್ ಅಗರ್ವಾಲ್ ಮತ್ತು ಅನ್ಮೋಲ್‌ಪ್ರಿತ್ ಸಿಂಗ್ ಉತ್ತಮ ಆರಂಭ ನೀಡುವಲ್ಲಿ ವಿಫಲರಾದರು. 2.5 ಓವರ್‌ಗಳಲ್ಲಿ ತಂಡದ ಮೊತ್ತ 21 ರನ್‌ಗಳಾಗಿದ್ದಾಗ 8 ರನ್ ಗಳಿಸಿ ಆಡುತ್ತಿದ್ದ ಮಯಾಂಕ್ ಅಗರ್ವಾಲ್ ಬೇಗನೆ ವಿಕೆಟ್ ಒಪ್ಪಿಸಿದರು.

ನಂತರ ಬಂದ ರಾಹುಲ್ ತ್ರಿಪಾಠಿ 41 ಎಸೆತಗಳಲ್ಲಿ 4 ಬೌಂಡರಿಗಳ ಸಮೇತ ನಿಧಾಗತಿಯ 35 ರನ್ ಗಳಿಸಿದರು. ಈ ವೇಳೆ ಅನ್ಮೋಲ್‌ಪ್ರಿತ್ ಸಿಂಗ್ 26 ಎಸೆತಗಳಲ್ಲಿ 3 ಬೌಂಡರಿ ಮತ್ತು 1 ಸಿಕ್ಸರ್ ಸಹಾಯದಿಂದ 31 ರನ್ ಗಳಿಸಿದ್ದಾಗ ಕೃನಾಲ್ ಪಾಂಡ್ಯಗೆ ವಿಕೆಟ್ ಒಪ್ಪಿಸಿದರು.

IPL 2023: Lucknow Super Giants Need 122 Runs To Win Against Sun Risers Hyderabad

ಆಗ ಕ್ರೀಸ್‌ಗೆ ಬಂದ ನಾಯಕ ಏಡೆನ್ ಮಾರ್ಕ್ರಾಮ್ ಎದುರಿಸಿದ ಮೊದಲ ಎಸೆತದಲ್ಲಿಯೇ ಕೃನಾಲ್ ಪಾಂಡ್ಯ ಬೌಲಿಂಗ್‌ನಲ್ಲಿ ಬೌಲ್ಡ್ ಆದರು. ನಂತರ ಹ್ಯಾರಿ ಬ್ರೂಕ್ 3 ರನ್, ವಾಷಿಂಗ್ಟನ್ ಸುಂದರ್ 28 ಎಸೆತಗಳಲ್ಲಿ 16 ರನ್, ಅಬ್ದುಲ್ ಸಮದ್ 10 ಎಸೆತಗಳಲ್ಲಿ 1 ಬೌಂಡರಿ ಮತ್ತು 2 ಸಿಕ್ಸರ್ ನೆರವಿನಿಂದ 21 ರನ್ ಗಳಿಸಿದರು. ಉಳಿದಂತೆ ಆದಿಲ್ ರಶೀದ್ 4 ರನ್ ಗಳಿಸಿದರು.

ಇನ್ನು ಬೌಲಿಂಗ್‌ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪರ ಕೃನಾಲ್ ಪಾಂಡ್ಯ 4 ಓವರ್‌ಗಳಲ್ಲಿ 18 ರನ್ ನೀಡಿ 3 ವಿಕೆಟ್ ಪಡೆದರೆ, ಅಮಿತ್ ಮಿಶ್ರಾ 4 ಓವರ್‌ಗಳಲ್ಲಿ 23 ರನ್ ನೀಡಿ 2 ವಿಕೆಟ್ ಪಡೆದರು. ಉಳಿದಂತೆ ಯಶ್ ಠಾಕೂರ್ ಮತ್ತು ರವಿ ಬಿಷ್ಣೋಯಿ ತಲಾ ಒಂದೊಂದು ವಿಕೆಟ್ ಪಡೆದರು.

ಲಕ್ನೋ ಸೂಪರ್ ಜೈಂಟ್ಸ್ vs ಸನ್‌ರೈಸರ್ಸ್ ಹೈದರಾಬಾದ್ ಆಡುವ 11ರ ಬಳಗ
ಲಕ್ನೋ ಸೂಪರ್ ಜೈಂಟ್ಸ್: ಕೆಎಲ್ ರಾಹುಲ್(ನಾಯಕ), ಕೈಲ್ ಮೇಯರ್ಸ್, ದೀಪಕ್ ಹೂಡಾ, ಕೃನಾಲ್ ಪಾಂಡ್ಯ, ಮಾರ್ಕಸ್ ಸ್ಟೋನಿಸ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಅಮಿತ್ ಮಿಶ್ರಾ, ರೊಮಿಯೋ ಶೆಫರ್ಡ್, ಯಶ್ ಠಾಕೂರ್, ರವಿ ಬಿಷ್ಣೋಯಿ, ಜಯದೇವ್ ಉನಾದ್ಕಟ್.

ಸನ್‌ರೈಸರ್ಸ್ ಹೈದರಾಬಾದ್: ಮಯಾಂಕ್ ಅಗರ್ವಾಲ್, ಅನ್ಮೋಲ್‌ಪ್ರಿತ್ ಸಿಂಗ್ (ವಿಕೆಟ್ ಕೀಪರ್), ರಾಹುಲ್ ತ್ರಿಪಾಠಿ, ಏಡೆನ್ ಮಾರ್ಕ್ರಾಮ್(ನಾಯಕ), ಹ್ಯಾರಿ ಬ್ರೂಕ್, ವಾಷಿಂಗ್ಟನ್ ಸುಂದರ್, ಅಬ್ದುಲ್ ಸಮದ್, ಆದಿಲ್ ರಶೀದ್, ಭುವನೇಶ್ವರ್ ಕುಮಾರ್, ಟಿ ನಟರಾಜನ್, ಉಮ್ರಾನ್ ಮಲಿಕ್.

Story first published: Friday, April 7, 2023, 21:15 [IST]
Other articles published on Apr 7, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+