Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2023: ಗಾಯಕ್ವಾಡ್, ಕಾನ್ವೇ ಭರ್ಜರಿ ಬ್ಯಾಟಿಂಗ್; ಲಕ್ನೋ ಸೂಪರ್ ಜೈಂಟ್ಸ್‌ಗೆ ಬೃಹತ್ ಗುರಿ ನೀಡಿದ ಸಿಎಸ್‌ಕೆ

ಸೋಮವಾರ, ಏಪ್ರಿಲ್ 3ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ ಆರನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ವಿರುದ್ಧ ಬೃಹತ್ ಮೊತ್ತ ಕಲೆಹಾಕಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 217 ರನ್ ಪೇರಿಸಿದ್ದು, ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ 218 ರನ್‌ಗಳ ಗುರಿ ನೀಡಿದೆ.

IPL 2023: Lucknow Super Giants Need 218 Runs To Win Against Chennai Super Kings

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಆರಂಭಿಕ ಬ್ಯಾಟ್ಸ್‌ಮನ್‌ಗಳಾದ ರುತುರಾಜ್ ಗಾಯಕ್ವಾಡ್ ಮತ್ತು ಡೆವೊನ್ ಕಾನ್ವೆ ಉತ್ತಮ ಆರಂಭ ಒದಗಿಸಿದರು. ಮೊದಲ ವಿಕೆಟ್‌ಗೆ 9.1 ಓವರ್‌ಗಳಲ್ಲಿ 110 ರನ್‌ಗಳ ಜೊತೆಯಾಟ ನೀಡಿ ಬೇರ್ಪಟ್ಟರು. ರುತುರಾಜ್ ಗಾಯಕ್ವಾಡ್ 31 ಎಸೆತಗಳಲ್ಲಿ 3 ಬೌಂಡರಿ ಮತ್ತು 4 ಸಿಕ್ಸರ್‌ಗಳ ನೆರವಿನಿಂದ 57 ರನ್ ಬಾರಿಸಿ ರವಿ ಬಿಷ್ಣೋಯಿ ಅವರಿಗೆ ವಿಕೆಟ್ ನೀಡಿದರು.

ಇನ್ನು ಡೆವೊನ್ ಕಾನ್ವೆ 29 ಎಸೆತಗಳಲ್ಲಿ 5 ಬೌಂಡರಿ ಮತ್ತು 2 ಸಿಕ್ಸರ್‌ಗಳ ಸಹಾಯದಿಂದ 47 ರನ್ ಗಳಿಸಿ ಔಟಾದರು.ನಂತರ ಬಂದ ಶಿವಂ ದುಬೆ ಸ್ಫೋಟಕ ಬ್ಯಾಟಿಂಗ್ ಮಾಡಿ 16 ಎಸೆತಗಳಲ್ಲಿ 1 ಬೌಂಡರಿ ಮತ್ತು 3 ಭರ್ಜರಿ ಸಿಕ್ಸರ್‌ಗಳ ನೆರವಿನಿಂದ 27 ರನ್ ಬಾರಿಸಿದರು. ಮೊಯಿನ್ ಅಲಿ ಕೂಡ 13 ಎಸೆತಗಳಲ್ಲಿ 19 ರನ್ ಗಳಿಸಿದರೆ, ಬೆನ್ ಸ್ಟೋಕ್ಸ್ 8 ಎಸೆತಗಳಲ್ಲಿ 8 ರನ್ ಗಳಿಸಿ ಮತ್ತೊಮ್ಮೆ ನಿರಾಸೆ ಮೂಡಿಸಿದರು.

IPL 2023: Lucknow Super Giants Need 218 Runs To Win Against Chennai Super Kings

ಇನ್ನು ಕೊನೆಯಲ್ಲಿ ಆರ್ಭಟಿಸಿದ ಅಂಬಟಿ ರಾಯುಡು 14 ಎಸೆತಗಳಲ್ಲಿ 2 ಸಿಕ್ಸರ್ ಮತ್ತು 2 ಬೌಂಡರಿ ಮೂಲಕ ಅಜೇಯ 27 ರನ್ ಬಾರಿಸಿದರೆ, ನಾಯಕ ಎಂಎಸ್ ಧೋನಿ 3 ಎಸೆತಗಳಲ್ಲಿ 2 ಸಿಕ್ಸರ್ ನೆರವಿನಿಂದ 12 ರನ್ ಗಳಿಸಿದರು. ರವೀಂದ್ರ ಜಡೇಜಾ 3 ರನ್ ಮತ್ತು ಮಿಚೆಲ್ ಸ್ಯಾಂಟ್ನರ್ 1 ರನ್ ಗಳಿಸಿದರು.

ಇನ್ನು ಬೌಲಿಂಗ್‌ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ರವಿ ಬಿಷ್ಣೋಯಿ 4 ಓವರ್‌ಗಳಲ್ಲಿ 28 ರನ್ ನೀಡಿ 3 ವಿಕೆಟ್ ಪಡೆದರೆ, ಮಾರ್ಕ್ ವುಡ್ 4 ಓವರ್‌ಗಳಲ್ಲಿ 49 ರನ್ ನೀಡಿ 3 ವಿಕೆಟ್ ಪಡೆದರು. ಅವೇಶ್ ಖಾನ್ 3 ಓವರ್‌ಗಳಲ್ಲಿ 3 ರನ್ ನೀಡಿ 1 ವಿಕೆಟ್ ಪಡೆದರು.

ಚೆನ್ನೈ ಸೂಪರ್ ಕಿಂಗ್ಸ್ vs ಲಕ್ನೋ ಸೂಪರ್ ಜೈಂಟ್ಸ್ ಆಡುವ 11ರ ಬಳಗ
ಚೆನ್ನೈ ಸೂಪರ್ ಕಿಂಗ್ಸ್ ತಂಡ: ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೆ, ಬೆನ್ ಸ್ಟೋಕ್ಸ್, ಮೊಯಿನ್ ಅಲಿ, ಅಂಬಟಿ ರಾಯುಡು, ರವೀಂದ್ರ ಜಡೇಜಾ, ಎಂಎಸ್ ಧೋನಿ (ನಾಯಕ/ ವಿಕೆಟ್ ಕೀಪರ್), ಶಿವಂ ದುಬೆ, ಮಿಚೆಲ್ ಸ್ಯಾಂಟ್ನರ್, ದೀಪಕ್ ಚಹಾರ್, ರಾಜವರ್ಧನ್ ಹಂಗರ್ಗೇಕರ್

ಲಕ್ನೋ ಸೂಪರ್ ಜೈಂಟ್ಸ್: ಕೆಎಲ್ ರಾಹುಲ್ (ನಾಯಕ/ ವಿಕೆಟ್ ಕೀಪರ್), ಕೈಲ್ ಮೇಯರ್ಸ್, ದೀಪಕ್ ಹೂಡಾ, ನಿಕೋಲಸ್ ಪೂರನ್, ಮಾರ್ಕಸ್ ಸ್ಟೋನಿಸ್, ಆಯುಷ್ ಬದೊನಿ, ಕೃನಾಲ್ ಪಾಂಡ್ಯ, ಅವೇಶ್ ಖಾನ್, ರವಿ ಬಿಷ್ಣೋಯ್, ಯಶ್ ಠಾಕೂರ್, ಮಾರ್ಕ್ ವುಡ್.

Story first published: Monday, April 3, 2023, 21:30 [IST]
Other articles published on Apr 3, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+