IPL 2023: ಇಬ್ಬರು ಕನ್ನಡಿಗರನ್ನು ಕೈಬಿಡಲು ಮುಂದಾದ ಲಕ್ನೋ ಸೂಪರ್ ಜೈಂಟ್ಸ್, ಬಿಡುಗಡೆ ಮಾಡುವ ಆಟಗಾರರ ಪಟ್ಟಿ

ತಮ್ಮ ಮೊದಲನೇ ಆವೃತ್ತಿಯಲ್ಲೇ ಉತ್ತಮ ಹೋರಾಟ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ಎರಡನೇ ಆವೃತ್ತಿಗೆ ಮತ್ತಷ್ಟು ಬಲಿಷ್ಠ ತಂಡವನ್ನು ಕಟ್ಟಲು ಸಿದ್ಧವಾಗಿದೆ. ನವೆಂಬರ್ 15ರಂದು ಐಪಿಎಲ್ ಫ್ರಾಂಚೈಸಿಗಳು ತಮ್ಮ ಆಟಗಾರರನ್ನು ಬಿಡುಗಡೆ ಮಾಡಲು, ಉಳಿಸಿಕೊಳ್ಳಲು ಕೊನೆಯ ದಿನವಾಗಿದ್ದು ಲಕ್ನೋ ತಂಡ ಕನ್ನಡಿಗರಾದ ಮನೀಶ್ ಪಾಂಡೆ, ಕೃಷ್ಣಪ್ಪ ಗೌತಮ್, ಆಂಡ್ರೂ ಟೈ, ಜೇಸನ್ ಹೋಲ್ಡರ್ ರಂತಹ ಪ್ರಮುಖ ಆಟಗಾರರನ್ನು ಬಿಡುಗಡೆ ಮಾಡಲು ನಿರ್ಧರಿಸಿದೆ.
ಡಿಸೆಂಬರ್ 23ರಂದು ನಡೆಯಲಿರುವ ಮಿನಿ ಹರಾಜಿನಲ್ಲಿ ತಮಗೆ ಬೇಕಾದ ಆಟಗಾರರನ್ನು ಖರೀದಿಸಲು ಪರ್ಸ್ ಮೊತ್ತವನ್ನು ಹೆಚ್ಚಿಸಿಕೊಳ್ಳಲು ಲಕ್ನೋ ತಂಡ ಹಲವು ಆಟಗಾರರನ್ನು ಕೈಬಿಡಲು ಮುಂದಾಗಿದೆ. ಮನೀಶ್ ಪಾಂಡೆ, ಆಂಡ್ರ್ಯೂ ಟೈ ಮತ್ತು ಜೇಸನ್ ಹೋಲ್ಡರ್ ಅವರನ್ನು ಬಿಡುಗಡೆ ಮಾಡಲು ಮುಂದಾಗಿದೆ. ಕಳೆದ ಎರಡು ಸೀಸನ್‌ಗಳಲ್ಲಿ ಮನೀಶ್ ಪಾಂಡೆ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ.
ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ವಿಭಾಗವನ್ನು ಬಲಗೊಳಿಸಲು ಲಕ್ನೋ ತಂಡ 2022ರ ಮೆಗಾ ಹರಾಜಿನಲ್ಲಿ ಮನೀಶ್ ಪಾಂಡೆಯನ್ನು 4.6 ಕೋಟಿ ರುಪಾಯಿ ನೀಡಿ ಖರೀದಿ ಮಾಡಿತ್ತು. ಮನೀಶ್ ಇದುವರೆಗೆ 160 ಐಪಿಎಲ್ ಪಂದ್ಯಗಳನ್ನಾಡಿದ್ದು, 121.52 ಸ್ಟ್ರೈಕ್ ರೇಟ್‌ನಲ್ಲಿ 3648 ರನ್ ಗಳಿಸಿದ್ದಾರೆ.

ನಿರೀಕ್ಷಿತ ಪ್ರದರ್ಶನ ನೀಡದ ಪಾಂಡೆ
ಅನುಭವಿ ಬ್ಯಾಟರ್ ಮನೀಶ್ ಪಾಂಡೆ ಮೇಲೆ ಲಕ್ನೋ ಸೂಪರ್ ಜೈಂಟ್ಸ್ ಭಾರಿ ನಿರೀಕ್ಷೆ ಇಟ್ಟುಕೊಂಡಿತ್ತು. ಆದರೆ, ಮನೀಶ್ ಪಾಂಡೆ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ಸಂಪೂರ್ಣ ವಿಫಲರಾದರು. 2022ರ ಐಪಿಎಲ್‌ನಲ್ಲಿ 6 ಪಂದ್ಯಗಳನ್ನಾಡಿದ ಮನೀಶ್ ಪಾಂಡೆ, ಕೇವಲ 88 ರನ್ ಗಳಿಸಿದರು, ಅವರ ಸ್ಟ್ರೈಕ್ ರೇಟ್ ಕೇವಲ 110.00 ಇದ್ದದ್ದು ಇನ್ನೂ ಪರಿಣಾಮ ಬೀರಿತು.
4.6 ಕೋಟಿ ರುಪಾಯಿ ಹಣವನ್ನು ಉಳಿಸಿಕೊಳ್ಳುವ ಸಲುವಾಗಿ ಮನೀಶ್ ಪಾಂಡೆಯವರನ್ನು ತಂಡದಿಂದ ಕೈ ಬಿಡಲು ಮುಂದಾಗಿದೆ ಎನ್ನಲಾಗಿದೆ. ಮನೀಶ್ ಪಾಂಡೆ ಬದಲಾಗಿ ಮಿನಿ ಹರಾಜಿನಲ್ಲಿ ಬೇರೊಬ್ಬ ಆಟಗಾರರನ್ನು ಖರೀದಿಸಲು ಮುಂದಾಗಿದೆ.

ಆಂಡ್ರ್ಯೂ ಟೈ ಸೇರಿದಂತೆ ಹಲವರ ಬಿಡುಗಡೆ
ಮನೀಶ್ ಪಾಂಡೆ ಮಾತ್ರವಲ್ಲದೆ, ಮತ್ತೊಬ್ಬ ಕನ್ನಡಿಗ ಆಲ್‌ರೌಂಡರ್ ಕೃಷ್ಣಪ್ಪ ಗೌತಮ್‌ರನ್ನು ತಂಡದಿಂದ ಬಿಡುಗಡೆ ಮಾಡಲು ನಿರ್ಧರಿಸಿದೆ. ಇವರ ಜೊತೆಯಲ್ಲಿ ವೆಸ್ಟ್ ಇಂಡೀಸ್ ಆಲ್‌ರೌಂಡರ್ ಜೇಸನ್ ಹೋಲ್ಡರ್, ಆಂಡ್ರ್ಯೂ ಟೈ ಸೇರಿದಂತೆ ಪ್ರಮುಖ ಆಟಗಾರರನ್ನು ಬಿಡುಗಡೆ ಮಾಡಲಿದೆ.
ಅಂಕಿತ್ ರಜಪೂತ್, ಸ್ಪಿನ್ನರ್ ಕರಣ್ ಶರ್ಮಾ, ಮಯಾಂಕ್ ಯಾದವ್, ಶಹಬಾಜ್ ನದೀಮ್, ಮನನ್ ವೋಹ್ರಾ, ಎವಿನ್ ಲೆವಿಸ್‌ರನ್ನು ಕೂಡ ಬಿಡುಗಡೆ ಮಾಡಲು ನಿರ್ಧರಿಸಿದೆ ಎನ್ನಲಾಗಿದೆ. ನವೆಂಬರ್ 15ರಂದು ಅಧಿಕೃತ ಪಟ್ಟಿ ಬಿಡುಗಡೆ ಮಾಡಲಿದೆ.

ಲಕ್ನೋ ತಂಡದಲ್ಲಿ ಉಳಿದಿರುವ ಆಟಗಾರರು
ಉಳಿದಂತೆ ಕಳೆದ ಋತುವಿನಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಎಲ್ಲಾ ಆಟಗಾರರನ್ನು ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಉಳಿಸಿಕೊಂಡಿದೆ. ಮೊಯುವ ಆಟಗಾರ ಆಯುಷ್ ಬದೋನಿಯನ್ನು ಉಳಿಸಿಕೊಳ್ಳಲು ನಿರ್ಧರಿಸಲಾಗಿದೆ. ಕಳೆದ ಋತುವಿನಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದ ಮೊಹ್ಸಿನ್ ಖಾನ್ ಕೂಡ ತಂಡದಲ್ಲಿ ಉಳಿದುಕೊಂಡಿದ್ದಾರೆ.
ಲಕ್ನೋ ಸೂಪರ್ ಜೈಂಟ್ಸ್ : ಕೆಎಲ್ ರಾಹುಲ್ (ನಾಯಕ), ಕೃನಾಲ್ ಪಾಂಡ್ಯ, ಕ್ವಿಂಟನ್ ಡಿ ಕಾಕ್, ದೀಪಕ್ ಹೂಡಾ, ಆಯುಷ್ ಬದೋನಿ, ಕೈಲ್ ಮೇಯರ್ಸ್, ಮಾರ್ಕಸ್ ಸ್ಟೊಯಿನಿಸ್, ಅವೇಶ್ ಖಾನ್, ಮೊಹ್ಸಿನ್ ಖಾನ್, ರವಿ ಬಿಷ್ಣೋಯ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications