IPL 2023 Retention : ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಉಳಿದುಕೊಂಡವರಾರು?

ಐಪಿಎಲ್ 2023ರ ಮಿನಿ ಹರಾಜು ಡಿಸೆಂಬರ್ 23ರಂದು ಕೊಚ್ಚಿಯಲ್ಲಿ ನಡೆಯಲಿದ್ದು, ಹೀಗಾಗಿ ಎಲ್ಲಾ ಹತ್ತು ಫ್ರಾಂಚೈಸಿಗಳಿಗೆ ತಮ್ಮ ತಂಡದ ಉಳಿಸಿಕೊಂಡ ಮತ್ತು ಕೈಬಿಟ್ಟ ಆಟಗಾರರ ಪಟ್ಟಿಯನ್ನು ನವೆಂಬರ್ 15ರೊಳಗೆ ಸಲ್ಲಿಸುವಂತೆ ಗಡುವು ನೀಡಲಾಗಿತ್ತು. ಇದೀಗ ಎಲ್ಲ ತಂಡಗಳು ತಮ್ಮ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿವೆ.
ಆರ್‌ಪಿಎಸ್‌ಜಿ ಗ್ರೂಪ್ ಒಡೆತನದ ಮತ್ತು ಕನ್ನಡಿಗ ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ (ಎಲ್ಎಸ್‌ಜಿ) ತಂಡವು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2023ಕ್ಕೆ ಮುನ್ನ ಉಳಿಸಿಕೊಂಡ ಮತ್ತು ಕೈಬಿಟ್ಟ ಆಟಗಾರರ ಪಟ್ಟಿಯನ್ನು ಮಂಗಳವಾರ ಪ್ರಕಟಿಸಿದೆ.
ಲಕ್ನೋ ಸೂಪರ್ ಜೈಂಟ್ಸ್ ತಂಡ ಐಪಿಎಲ್ 2022ರಲ್ಲಿ ಪ್ಲೇಆಫ್ ತಲುಪಿತು ಮತ್ತು ಈ ಹೊಸ ತಂಡ ಕ್ವಾಲಿಫೈಯರ್ 2ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸೋತ ಕಾರಣ, 2022ರ ಋತುವಿನ ಅಭಿಯಾನವು ಅಂತ್ಯಗೊಂಡಿತು.
ಲಕ್ನೋ ಸೂಪರ್ ಜೈಂಟ್ಸ್ ತಂಡವು ಎವಿನ್ ಲೆವಿಸ್, ಜೇಸನ್ ಹೋಲ್ಡರ್ ಮತ್ತು ಮನೀಶ್ ಪಾಂಡೆ ಅವರಂತಹ ದೊಡ್ಡ ಆಟಗಾರರನ್ನು ಕೈಬಿಡಲಾಗಿದೆ. ಎಲ್ಎಸ್‌ಜಿ ತಂಡವು 23.35 ಕೋಟಿ ರೂಪಾಯಿ ಪರ್ಸ್‌ನೊಂದಿಗೆ ಐಪಿಎಲ್ 2023 ಹರಾಜಿನಲ್ಲಿ ಪಾಲ್ಗೊಳ್ಳಲಿದೆ.

ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಮೆಂಟರ್ ಆಗಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಉಳಿಸಿಕೊಂಡ ಮತ್ತು ಕೈಬಿಡಲಾದ ಆಟಗಾರರ ಸಂಪೂರ್ಣ ಪಟ್ಟಿ ಇಲ್ಲಿದೆ.
ಲಕ್ನೋ ಸೂಪರ್ ಜೈಂಟ್ಸ್ ಉಳಿಸಿಕೊಂಡಿರುವ ಆಟಗಾರರ ಪಟ್ಟಿ:
ಕೆಎಲ್ ರಾಹುಲ್ (ನಾಯಕ), ಆಯುಷ್ ಬದೋನಿ, ಕರಣ್ ಶರ್ಮಾ, ಮನನ್ ವೋಹ್ರಾ, ಕ್ವಿಂಟನ್ ಡಿ ಕಾಕ್, ಮಾರ್ಕಸ್ ಸ್ಟೊಯಿನಿಸ್, ಕೃಷ್ಣಪ್ಪ ಗೌತಮ್, ದೀಪಕ್ ಹೂಡಾ, ಕೈಲ್ ಮೇಯರ್ಸ್, ಕೃನಾಲ್ ಪಾಂಡ್ಯ, ಅವೇಶ್ ಖಾನ್, ಮೊಹ್ಸಿನ್ ಖಾನ್, ಮಾರ್ಕ್ ವುಡ್, ಮಯಾಂಕ್ ಯಾದವ್, ರವಿ ಬಿಷ್ಣೋಯ್.
ಲಕ್ನೋ ಸೂಪರ್ ಜೈಂಟ್ಸ್ ತಂಡ ಕೈಬಿಟ್ಟ ಆಟಗಾರರ ಪಟ್ಟಿ
ಆಂಡ್ರ್ಯೂ ಟೈ, ಅಂಕಿತ್ ರಜಪೂತ್, ದುಷ್ಮಂತ ಚಮೀರಾ, ಎವಿನ್ ಲೆವಿಸ್, ಜೇಸನ್ ಹೋಲ್ಡರ್, ಮನೀಶ್ ಪಾಂಡೆ, ಶಹಬಾಜ್ ನದೀಮ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications