Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 2023: ಹೊಸ ಆವೃತ್ತಿಗೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ಹೊಸ ಮಾದರಿಯ ಜರ್ಸಿ ಅನಾವರಣ

IPL 2023: Lucknow Super Giants unveil new jersey for of IPL upcoming season

ಇಂಡಿಯನ್ ಪ್ರೀಮಿಯರ್ ಲೀಗ್‌ನ 16ನೇ ಆವೃತ್ತಿಯ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಮಾರ್ಚ್ ತಿಂಗಳಾಂತ್ಯದಲ್ಲಿ ಐಪಿಎಲ್ ಆರಂಭವಾಗಲಿದ್ದು ಪ್ರಸ್ತುತ ಚೊಚ್ಚಲ ಆವೃತ್ತಿಯ ವುಮೆನ್ಸ್ ಪ್ರೀಮಿಯರ್ ಲೀಗ್ ಆಯೋಜನೆಯಾಗುತ್ತಿದೆ. ಈ ಬಾರಿಯ ಐಪಿಎಲ್‌ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ನೂತನ ಮಾದರಿಯ ಜರ್ಸಿಯೊಂದಿಗೆ ಕಣಕ್ಕಿಳಿಯಲಿದ್ದು ಹೊಸ ಜರ್ಸಿಯನ್ನು ಮಂಗಳವಾರ ಅನಾವರಣಗೊಳಿಸಲಾಗಿದೆ.

ನೂತನ ಆವೃತ್ತಿಗೆ ಲಕ್ನೋ ಸೂಪರ್ ಜೈಂಟ್ಸ್ ತಂಡ ಸಂಪೂರ್ಣ ಹೊಸ ಬಣ್ಣದ ಜರ್ಸಿಯೊಂದಿಗೆ ಕಣಕ್ಕಿಳಿಯಲಿದೆ. 2022ರ ಆವೃತ್ತಿಯಲ್ಲಿ ಕೆಎಲ್ ರಾಹುಲ್ ನೇತೃತ್ವದ ಫ್ರಾಂಚೈಸಿ ಹಸಿರು ಮಿಶ್ರಿತ ನೀಲಿ ಬಣ್ಣದ ಜರ್ಸಿಯೊಂದಿಗೆ ಕಣಕ್ಕಿಳಿದಿತ್ತು. ಆದರೆ ಈ ಬಾರಿ ಲಕ್ನೋ ಫ್ರಾಂಚೈಸಿ ತನ್ನ ಜರ್ಸಿಯನ್ನು ಕಡು ನೀಲಿ ಬಣ್ಣಕ್ಕೆ ಬದಲಾಯಿಸಿಕೊಂಡಿದೆ.

ಈ ನೂತನ ಜರ್ಸಿ ಅನಾವರಣ ಸಮಾರಂಭವನ್ನು ಎಲ್‌ಎಸ್‌ಜಿ ಅದ್ದೂರಿಯಾಗಿಯೇ ಆಯೋಜಿಸಿದೆ. ಫ್ಯಾಶನ್ ಶೋವನ್ನು ಆಯೋಜಿಸಿದ್ದು ಇದರಲ್ಲಿ ಅನೇಕ ಎಲ್‌ಎಸ್‌ಜಿ ಸ್ಟಾರ್‌ಗಳು ಭಾಗಿಯಾಗಿದ್ದಾರೆ. ರವಿ ಬಿಷ್ಣೋಯ್, ಆವೇಶ್ ಖಾನ್, ಜಯದೇವ್ ಉನಾದ್ಕಟ್, ದೀಪಕ್ ಹೂಡಾ ಮತ್ತು ನಾಯಕ ಕೆಎಲ್ ರಾಹುಲ್ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ.

ಅಲ್ಲದೆ ಬಿಸಿಸಿಐ ಕಾರ್ಯದರ್ಶಿ ಜಯ್ ಷಾ, ಎಲ್‌ಎಸ್‌ಜಿ ಮಾಲೀಕ ಸಂಜೀವ್ ಗೋಯೆಂಕಾ ಮತ್ತು ತಂಡದ ಮಾರ್ಗದರ್ಶಕ ಗೌತಮ್ ಗಂಭೀರ್ ಜರ್ಸಿ ಅನಾವರಣ ಸಮಾರಂಭದಲ್ಲಿದ್ದರು. ಹೊಸ ಜರ್ಸಿಯ ಬದಿಗಳಲ್ಲಿ ಕೆಂಪು ಪಟ್ಟಿಗಳಿದ್ದು ಉಳಿದಂತೆ ಕಡು ನೀಲಿ ಬಣ್ಣ ಹೊಂದಿದೆ.

ಕಳೆದ ಬಾರಿಯ ಆವೃತ್ತಿಯ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ಐಪಿಎಲ್‌ನಲ್ಲಿ ಮೊಟ್ಟ ಮೊದಲ ಬಾರಿಗೆ ಕಣಕ್ಕಿಳಿದು ಮೊದಲ ಆವೃತ್ತಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದು ರಾಹುಲ್ ನಾಯಕತ್ವದಲ್ಲಿ ಎಲ್‌ಎಸ್‌ಜಿ ತಂಡ 3ನೇ ಸ್ಥಾನವನ್ನು ಪಡೆದುಕೊಂಡಿತ್ತು. ಆಡಿದ 17 ಪಂದ್ಯಗಳ ಪೈಕಿ 9 ಪಂದ್ಯಗಳಲ್ಲಿ ಗೆಲುವು ಸಾಧಿಸಿತ್ತು. ಈ ಬಾರಿಯೂ ಅಂಥಾದ್ದೇ ಪ್ರದರ್ಶನ ನೀಡುವ ಉತ್ಸಾಹದಲ್ಲಿದೆ.

ಆದರೆ ಇತ್ತ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಈ ಬಾರಿ ಒತ್ತಡದಲ್ಲಿದ್ದು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಫಾರ್ಮ್ ಕಳೆದುಕೊಂಡು ಸಾಕಷ್ಟು ಟೀಕೆಗಳಿಗೆ ಗುರಿಯಾಗಿದ್ದಾರೆ. 2022ರ ಆವೃತ್ತಿಯಲ್ಲಿ ರಾಹುಲ್ 600ಕ್ಕೂ ಅಧಿಕ ರನ್‌ಗಳಿಸಿದ್ದು ಈ ಬಾರಿಯ ಐಪಿಎಲ್‌ನಲ್ಲಿ ಮತ್ತೆ ಅದ್ಭುತ ಪ್ರದರ್ಶನ ನೀಡಿ ಭಾರತ ತಂಡದಲ್ಲಿ ಮತ್ತೆ ಸ್ಥಾನ ಖಾಯಂ ಮಾಡಿಕೊಳ್ಳುತ್ತಾರಾ ಎಂಬುದು ಕುತೂಹಲ ಮೂಡಿಸಿದೆ.

Story first published: Tuesday, March 7, 2023, 15:40 [IST]
Other articles published on Mar 7, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+