IPL 2023: ಲಕ್ನೋ ಸೂಪರ್ ಜೈಂಟ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ಬಲಿಷ್ಠ ತಂಡಗಳ ಕಾದಾಟ; ಪಂದ್ಯದ ವಿವರ, ಆಡುವ 11ರ ಬಳಗ
ಶನಿವಾರ, ಏಪ್ರಿಲ್ 1ರಂದು ಲಕ್ನೋದಲ್ಲಿ ನಡೆಯಲಿರುವ 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 16ನೇ ಸೀಸನ್‌ನ ಮೂರನೇ ಪಂದ್ಯದಲ್ಲಿ ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಡೇವಿಡ್ ವಾರ್ನರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ತಮ್ಮ ಅದೃಷ್ಟ ಪರೀಕ್ಷೆಗೆ ಇಳಿಯಲಿವೆ.
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಎರಡೂ ತಂಡಗಳಿಗೆ ಪಂದ್ಯಾವಳಿಯ ಮೊದಲ ಮೊದಲ ಪಂದ್ಯವಾಗಿದ್ದು, ಗೆಲುವಿನ ಮೂಲಕ ತಮ್ಮ ಅಭಿಯಾನವನ್ನು ಪ್ರಾರಂಭಿಸಲು ಎದುರು ನೋಡುತ್ತಿವೆ. ಕಳೆದ ಬಾರಿ ಪ್ಲೇಆಫ್ ಪ್ರವೇಶಿಸಿದ್ದ ಎಲ್‌ಎಸ್‌ಜಿ ತಂಡ ಆರ್‌ಸಿಬಿ ವಿರುದ್ಧ ಸೋತು ಹೊರಬಿದ್ದಿತ್ತು. ಇನ್ನು ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಆಫ್ ಪ್ರವೇಶಿಸಲಿ ವಿಫಲವಾಗಿತ್ತು.

ಇಂದಿನ ಪಂದ್ಯದಲ್ಲಿ ಎರಡು ತಂಡಗಳು ತಮ್ಮ ಮೊದಲ ಆಯ್ಕೆಯ ಪೂರ್ಣ ಸಾಮರ್ಥ್ಯದ ಆಡುವ 11ರ ಬಳಗವನ್ನು ಕಣಕ್ಕಿಳಿಸಲು ಸಾಧ್ಯವಾಗುವುದಿಲ್ಲ. ಲಕ್ನೋ ಸೂಪರ್ ಜೈಂಟ್ಸ್ ತಂಡವು ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಕ್ವಿಂಟನ್ ಡಿ ಕಾಕ್ ಅನುಪಸ್ಥಿತಿಯಲ್ಲಿ ಆಡಲಿದೆ. ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಸ್ತಫಿಜುರ್ ರೆಹಮಾನ್, ಅನ್ರಿಚ್ ನಾರ್ಟ್ಜೆ ಮತ್ತು ಲುಂಗಿ ಎನ್‌ಗಿಡಿ ಅವರನ್ನು ಮಿಸ್ ಮಾಡಿಕೊಳ್ಳಲಿದೆ.
ಸದ್ಯ ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಹೆಚ್ಚು ಸಮತೋಲನದಿಂದ ಕೂಡಿದ ತಂಡವಾಗಿದ್ದು, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಜಯ ಸಾಧಿಸಲು ಎದುರು ನೋಡುತ್ತಿದೆ. ಮತ್ತೊಂದೆಡೆ, ಡೇವಿಡ್ ವಾರ್ನರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಪಂದ್ಯ ಗೆದ್ದುಕೊಡುವ ಆಟಗಾರರಿದ್ದು, ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಅವರದೇ ನೆಲದಲ್ಲಿ ಮಣಿಸಿ ಶುಭಾರಂಭ ಮಾಡಲು ಹವಣಿಸುತ್ತಿದೆ.

ಲಕ್ನೋ ಸೂಪರ್ ಜೈಂಟ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯದ ವಿವರ
ಸ್ಥಳ ಮತ್ತು ಸಮಯ: ಲಕ್ನೋ ಸೂಪರ್ ಜೈಂಟ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯವು ಶನಿವಾರ, ಏಪ್ರಿಲ್ 1ರಂದು ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದ್ದು, ಪಂದ್ಯವು ಭಾರತೀಯ ಕಾಲಮಾನ ಸಂಜೆ 7.30 ಆರಂಭವಾಗಲಿದೆ.
ಟಿವಿ ಮತ್ತು ಲೈವ್ ಸ್ಟ್ರೀಮಿಂಗ್: ಲಕ್ನೋ ಸೂಪರ್ ಜೈಂಟ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯವನ್ನು ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಗಳಲ್ಲಿ ನೇರಪ್ರಸಾರ ಮಾಡಲಿದ್ದರೆ, Jio Cinema ಅಪ್ಲಿಕೇಶನ್‌ನಲ್ಲಿ ಡಿಜಿಟಲ್ ಲೈವ್ ಸ್ಟ್ರೀಮ್ ಆಗಿ ವೀಕ್ಷಿಸಸಬಹುದು.
ಲಕ್ನೋ ಪಿಚ್ ರಿಪೋರ್ಟ್
ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರಿಕೆಟ್ ಸ್ಟೇಡಿಯಂ ಪಿಚ್ ನಿಧಾನವಾಗಿದ್ದು, ಬ್ಯಾಟ್ಸ್‌ಮನ್‌ಗಳು ಪರಿಸ್ಥಿತಿ ಅರ್ಥ ಮಾಡಿಕೊಳ್ಳಲು ಸ್ವಲ್ಪ ಸಮಯ ಕಳೆಯಬೇಕಾಗುತ್ತದೆ. ಈ ಪಿಚ್‌ನಲ್ಲಿ ಒಂಬತ್ತು ಟಿ20 ಪಂದ್ಯಗಳನ್ನು ಆಡಲಾಗಿದ್ದು, ಐದು ಪಂದ್ಯಗಳನ್ನು ತಂಡವು ಮೊದಲು ಬ್ಯಾಟಿಂಗ್ ಮಾಡಿದ ತಂಡ ಗೆದ್ದಿದೆ. ಹೀಗಾಗಿ ಈ ಪಂದ್ಯದಲ್ಲಿ ಟಾಸ್ ನಿರ್ಣಾಯಕವಾಗಿದ್ದು, ಟಾಸ್ ಗೆದ್ದ ತಂಡವು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ಬೃಹತ್ ಗುರಿಯನ್ನು ನೀಡುವತ್ತ ಒಲವು ತೋರಿಸಲಿವೆ.

ಲಕ್ನೋ ಸೂಪರ್ ಜೈಂಟ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ಸಂಭಾವ್ಯ ಆಡುವ 11ರ ಬಳಗ
ಲಕ್ನೋ ಸೂಪರ್ ಜೈಂಟ್ಸ್ ತಂಡ: ಕೆಎಲ್ ರಾಹುಲ್ (ನಾಯಕ), ಕೈಲ್ ಮೇಯರ್ಸ್, ದೀಪಕ್ ಹೂಡಾ, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಕೃನಾಲ್ ಪಾಂಡ್ಯ, ಮಾರ್ಕಸ್ ಸ್ಟೋನಿಸ್, ಆಯುಷ್ ಬದೋನಿ, ಜಯದೇವ್ ಉನಾದ್ಕಟ್, ಮಾರ್ಕ್ ವುಡ್, ಅವೇಶ್ ಖಾನ್, ರವಿ ಬಿಷ್ಣೋಯ್.
ಡೆಲ್ಲಿ ಕ್ಯಾಪಿಟಲ್ಸ್ ತಂಡ: ಡೇವಿಡ್ ವಾರ್ನರ್ (ನಾಯಕ), ಪೃಥ್ವಿ ಶಾ, ಮಿಚೆಲ್ ಮಾರ್ಷ್, ರಿಲೀ ರುಸ್ಸೌವ್, ಅಭಿಷೇಕ್ ಪೋರೆಲ್ (ವಿಕೆಟ್ ಕೀಪರ್), ರೋವ್ಮನ್ ಪೊವೆಲ್, ಅಕ್ಷರ್ ಪಟೇಲ್, ಕಮಲೇಶ್ ನಾಗರಕೋಟಿ, ಕುಲದೀಪ್ ಯಾದವ್, ಚೇತನ್ ಸಕರಿಯಾ, ಖಲೀಲ್ ಅಹ್ಮದ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications