
ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 63ನೇ ಪಂದ್ಯ ಇಂದು ( ಮೇ 16 ) ನಡೆಯುತ್ತಿದ್ದು, ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿವೆ.
ಈ ಪಂದ್ಯ ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನ ಕ್ರಿಕೆಟ್ ಸ್ಟೇಡಿಯಂನಲ್ಲಿ ಜರುಗುತ್ತಿದ್ದು, ಪಂದ್ಯದಲ್ಲಿ ಟಾಸ್ ಗೆದ್ದಿರುವ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ಕೆ ಮಾಡಿಕೊಂಡು ಎದುರಾಳಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದಾರೆ.
ಇನ್ನು ಈ ಎರಡೂ ತಂಡಗಳೂ ಸಹ ಪ್ಲೇಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದ್ದು, ಈ ಪಂದ್ಯದಲ್ಲಿ ಗೆಲ್ಲುವ ತಂಡದ ಪ್ಲೇಆಫ್ ಹಾದಿಯನ್ನು ಸುಲಭಪಡಿಸಿಕೊಳ್ಳಲಿದ್ದು, ಸೋಲುವ ತಂಡದ ಪ್ಲೇಆಫ್ ಪ್ರವೇಶದ ಹಾದಿ ಕಠಿಣಗೊಳ್ಳಲಿದೆ.
12 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತಿರುವ ಮುಂಬೈ ಇಂಡಿಯನ್ಸ್ ತಂಡ 14 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಉಳಿದ ಎರಡು ಪಂದ್ಯಗಳಲ್ಲಿ ಒಂದು ಪಂದ್ಯವನ್ನು ಮುಂಬೈ ಇಂಡಿಯನ್ಸ್ ಗೆಲ್ಲಬೇಕಿದ್ದು, ಈ ಪಂದ್ಯದಲ್ಲಿ ಗೆದ್ದರೆ ಪ್ಲೇಆಫ್ ಬಹುತೇಕ ಖಚಿತವಾದಂತೆ.
ಅತ್ತ 12 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಫಲಿತಾಂಶ ಕಾಣದೇ ಇರುವ ಲಕ್ನೋ ಸೂಪರ್ ಜೈಂಟ್ಸ್ ತಂಡ 13 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದು, ಉಳಿದ ಎರಡೂ ಪಂದ್ಯಗಳನ್ನು ಗೆದ್ದರೆ ಸುಲಭವಾಗಿ ಪ್ಲೇಆಫ್ ಪ್ರವೇಶ ಪಡೆದುಕೊಳ್ಳಲಿದೆ.
ಆಡುವ ಬಳಗಗಳು:
ಮುಂಬೈ ಇಂಡಿಯನ್ಸ್ ಆಡುವ ಬಳಗ: ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್(ವಿಕೆಟ್ ಕೀಪರ್), ಕ್ಯಾಮೆರಾನ್ ಗ್ರೀನ್, ಸೂರ್ಯಕುಮಾರ್ ಯಾದವ್, ನೆಹಾಲ್ ವಧೇರಾ, ಟಿಮ್ ಡೇವಿಡ್, ಹೃತಿಕ್ ಶೋಕೀನ್, ಕ್ರಿಸ್ ಜೋರ್ಡಾನ್, ಪಿಯೂಷ್ ಚಾವ್ಲಾ, ಜೇಸನ್ ಬೆಹ್ರೆನ್‌ಡಾರ್ಫ್, ಆಕಾಶ್ ಮಧ್ವಲ್
ಲಕ್ನೋ ಸೂಪರ್ ಜೈಂಟ್ಸ್ ಆಡುವ ಬಳಗ: ಕ್ವಿಂಟನ್ ಡಿ ಕಾಕ್(ವಿಕೆಟ್ ಕೀಪರ್), ದೀಪಕ್ ಹೂಡಾ, ಪ್ರೇರಕ್ ಮಂಕಡ್, ಕೃನಾಲ್ ಪಾಂಡ್ಯ (ನಾಯಕ, ಮಾರ್ಕಸ್ ಸ್ಟೋನಿಸ್, ನಿಕೋಲಸ್ ಪೂರನ್, ಆಯುಷ್ ಬಡೋನಿ, ನವೀನ್-ಉಲ್-ಹಕ್, ರವಿ ಬಿಷ್ಣೋಯ್, ಸ್ವಪ್ನಿಲ್ ಸಿಂಗ್, ಮೊಹ್ಸಿನ್ ಖಾನ್
ಮುಂಬೈ ಇಂಡಿಯನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ನಡುವಿನ ಪಂದ್ಯದ ಲೈವ್ ಸ್ಕೋರ್