LSG vs SRH IPL 2023: ಲಕ್ನೋ vs ಹೈದರಾಬಾದ್ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ & ಲೈವ್ ಸ್ಕೋರ್
ಶುಕ್ರವಾರ, ಏಪ್ರಿಲ್ 7ರಂದು ಲಕ್ನೋದಲ್ಲಿ ನಡೆಯುತ್ತಿರುವ 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 10ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿವೆ.
ಟಾಸ್ ಗೆದ್ದ ಸನ್‌ರೈಸರ್ಸ್ ಹೈದರಾಬಾದ್ ತಂಡದ ನಾಯಕ ಏಡೆನ್ ಮಾರ್ಕ್ರಾಮ್ ಮೊದಲು ಬ್ಯಾಟಿಂಗ್ ಆಯ್ದುಕೊಂಡರು. ಹೀಗಾಗಿ ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡ ಮೊದಲು ಬೌಲಿಂಗ್ ಮಾಡಲಿದೆ.

ಲಕ್ನೋ ಸೂಪರ್ ಜೈಂಟ್ಸ್ ತಂಡ ತನ್ನ ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 50 ರನ್‌ಗಳ ಗೆಲುವು ಸಾಧಿಸಿತ್ತು. ನಂತರ ಚೆನ್ನೈನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 12 ರನ್‌ಗಳ ಸೋಲು ಕಂಡಿತು. ಮತ್ತೊಂದೆಡೆ, ಸನ್‌ರೈಸರ್ಸ್ ಹೈದರಾಬಾದ್ ತಂಡವು ತನ್ನ ಮೊದಲ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ 72 ರನ್‌ಗಳ ಹೀನಾಯ ಸೋಲು ಅನುಭವಿಸಿದೆ.
ಇದೀಗ ಸನ್‌ರೈಸರ್ಸ್ ಹೈದರಾಬಾದ್ ತಂಡಕ್ಕೆ ಹೊಸ ನಾಯಕ ಏಡೆನ್ ಮಾರ್ಕ್ರಾಮ್ ಆಗಮಿಸಿದ್ದು, ತಮ್ಮ ತಂಡಕ್ಕೆ ಗೆಲುವಿನ ಖಾತೆ ತೆರೆಯಲು ಪ್ರಯತ್ನಿಸಲಿದ್ದಾರೆ. ಇನ್ನು ಲಕ್ನೋ ತಂಡದ ನಾಯಕ ಕೆಎಲ್ ರಾಹುಲ್ ಕಳೆದ ಎರಡು ಪಂದ್ಯಗಳಲ್ಲಿ ತಮ್ಮ ನೈಜ ಆಟ ಆಡಲು ವಿಫಲರಾಗಿದ್ದು, ಈ ಪಂದ್ಯದಲ್ಲಾದರೂ ತಮ್ಮ ಬ್ಯಾಟಿಂಗ್ ಫಾರ್ಮ್‌ಗೆ ಮರಳಲು ಎದುರು ನೋಡುತ್ತಿದ್ದಾರೆ.
ಟಿವಿ ಮತ್ತು ಲೈವ್ ಸ್ಟ್ರೀಮಿಂಗ್ ವಿವರ
ಲಕ್ನೋ ಸೂಪರ್ ಜೈಂಟ್ಸ್ vs ಸನ್‌ರೈಸರ್ಸ್ ಹೈದರಾಬಾದ್ ಪಂದ್ಯವನ್ನು ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ನೇರಪ್ರಸಾರವಾಗಲಿ ಮತ್ತು Jio Cinema ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮ್ ಆಗಿ ವೀಕ್ಷಿಸಬಹುದು.
ಲಕ್ನೋ ಸೂಪರ್ ಜೈಂಟ್ಸ್ vs ಸನ್‌ರೈಸರ್ಸ್ ಹೈದರಾಬಾದ್ ಆಡುವ 11ರ ಬಳಗ
ಲಕ್ನೋ ಸೂಪರ್ ಜೈಂಟ್ಸ್: ಕೆಎಲ್ ರಾಹುಲ್(ನಾಯಕ), ಕೈಲ್ ಮೇಯರ್ಸ್, ದೀಪಕ್ ಹೂಡಾ, ಕೃನಾಲ್ ಪಾಂಡ್ಯ, ಮಾರ್ಕಸ್ ಸ್ಟೋನಿಸ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಅಮಿತ್ ಮಿಶ್ರಾ, ರೊಮಿಯೋ ಶೆಫರ್ಡ್, ಯಶ್ ಠಾಕೂರ್, ರವಿ ಬಿಷ್ಣೋಯಿ, ಜಯದೇವ್ ಉನಾದ್ಕಟ್.
ಸನ್‌ರೈಸರ್ಸ್ ಹೈದರಾಬಾದ್: ಮಯಾಂಕ್ ಅಗರ್ವಾಲ್, ಅನ್ಮೋಲ್‌ಪ್ರಿತ್ ಸಿಂಗ್ (ವಿಕೆಟ್ ಕೀಪರ್), ರಾಹುಲ್ ತ್ರಿಪಾಠಿ, ಏಡೆನ್ ಮಾರ್ಕ್ರಾಮ್(ನಾಯಕ), ಹ್ಯಾರಿ ಬ್ರೂಕ್, ವಾಷಿಂಗ್ಟನ್ ಸುಂದರ್, ಅಬ್ದುಲ್ ಸಮದ್, ಆದಿಲ್ ರಶೀದ್, ಭುವನೇಶ್ವರ್ ಕುಮಾರ್, ಟಿ ನಟರಾಜನ್, ಉಮ್ರಾನ್ ಮಲಿಕ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications