Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2023: SRH vs LSG ಪ೦ದ್ಯದಲ್ಲಿ ನಿಮ್ಮ ಡ್ರೀಮ್ ಟೀಮ್ ಗೆಲ್ಲಲು ಈ ಆಟಗಾರರನ್ನು ಆರಿಸಿ

IPL 2023: Lucknow Super Giants vs Sunrisers Hyderabad dream team prediction

ಸದ್ಯ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದಲ್ಲಿ ಇಂದು ( ಮೇ 13 ) ಎರಡು ಪಂದ್ಯಗಳು ಆಯೋಜನೆಗೊಂಡಿವೆ.

ಲೀಗ್‌ನ 58ನೇ ಪಂದ್ಯ ಮಧ್ಯಾಹ್ನ ಆರಂಭಗೊಳ್ಳಲಿದ್ದು ಈ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾದರೆ, ಸಂಜೆ ನಡೆಯಲಿರುವ 59ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ.

ಸನ್ ರೈಸರ್ಸ್ ಹೈದರಾಬಾದ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳ ನಡುವಿನ ಪಂದ್ಯ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಟೂರ್ನಿಯಲ್ಲಿ ಇಲ್ಲಿಯವರೆಗೂ ಸನ್ ರೈಸರ್ಸ್ ಹೈದರಾಬಾದ್ 10 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದರೆ, ಲಕ್ನೋ ಸೂಪರ್ ಜೈಂಟ್ಸ್ ತಂಡಗಳು 11 ಪಂದ್ಯಗಳನ್ನಾಡಿವೆ. ಹೆಚ್ಚು ಪಂದ್ಯಗಳನ್ನು ಗೆದ್ದಿರುವ ಲಕ್ನೋ ಸೂಪರ್ ಜೈಂಟ್ಸ್ ಅಂಕಪಟ್ಟಿಯಲ್ಲಿ ಉತ್ತಮ ಸ್ಥಾನದಲ್ಲಿದೆ.

ಹೌದು, ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 11 ಪಂದ್ಯಗಳನ್ನಾಡಿರುವ ಲಕ್ನೋ ಸೂಪರ್ ಜೈಂಟ್ಸ್ 5 ಪಂದ್ಯಗಳಲ್ಲಿ ಗೆದ್ದು, 5 ಪಂದ್ಯಗಳಲ್ಲಿ ಸೋತು ಉಳಿದೊಂದ ಪಂದ್ಯ ರದ್ದಾದ ಕಾರಣ ಒಂದು ಅಂಕ ಪಡೆದುಕೊಂಡು ಅಂಕಪಟ್ಟಿಯಲ್ಲಿ ಒಟ್ಟು 11 ಅಂಕಗಳನ್ನು ಪಡೆದುಕೊಳ್ಳುವ ಮೂಲಕ ಐದನೇ ಸ್ಥಾನದಲ್ಲಿದೆ.

ಅತ್ತ ಸನ್ ರೈಸರ್ಸ್ ಹೈದರಾಬಾದ್ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 10 ಪಂದ್ಯಗಳಲ್ಲಿ ಕಣಕ್ಕಿಳಿದು 4 ಪಂದ್ಯಗಳಲ್ಲಿ ಗೆದ್ದು, 6 ಪಂದ್ಯಗಳಲ್ಲಿ ಸೋತು 8 ಅಂಕಗಳನ್ನು ಪಡೆದುಕೊಳ್ಳುವ ಮೂಲಕ ಅಂಕಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿದೆ.

ಇನ್ನು ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಗೆದ್ದರೆ ತನ್ನ ಪ್ಲೇಆಫ್ ಹಾದಿಯನ್ನು ಸುಗಮ ಮಾಡಿಕೊಳ್ಳಲಿದ್ದು, ಗೆಲ್ಲುವ ಯೋಜನೆಯಲ್ಲಿದೆ. ಅತ್ತ ಸನ್ ರೈಸರ್ಸ್ ಹೈದರಾಬಾದ್ ಈ ಪಂದ್ಯದಲ್ಲಿ ಸೋತರೆ ಪ್ಲೇಆಫ್ ಪ್ರವೇಶಿಸುವ ಅರ್ಹತೆಯನ್ನು ಬಹುತೇಕ ಕಳೆದುಕೊಳ್ಳಲಿದ್ದು, ಈ ಪಂದ್ಯವನ್ನು ಗೆಲ್ಲಲೇಬೇಕಿದೆ.

ಹೀಗೆ ಎರಡೂ ತಂಡಗಳಿಗೂ ಈ ಪಂದ್ಯ ಅತ್ಯಮೂಲ್ಯವಾಗಿದ್ದು, ಈ ಹಣಾಹಣಿಯಲ್ಲಿ ಯಾವ ತಂಡ ಗೆಲ್ಲಬಹುದು ಎಂಬ ಲೆಕ್ಕಾಚಾರಗಳು ಒಂದೆಡೆ ನಡೆಯುತ್ತಿದ್ದರೆ, ಮತ್ತೊಂದೆಡೆ ಫ್ಯಾಂಟಸಿ ಕ್ರಿಕೆಟ್ ಪ್ರಿಯರು ಉತ್ತಮ ಪ್ರದರ್ಶನ ನೀಡಬಲ್ಲ ಆಟಗಾರರನ್ನು ಆರಿಸಿ ಡ್ರೀಮ್ ಟೀಮ್ ರಚಿಸುತ್ತಿದ್ದಾರೆ. ಹೀಗೆ ಡ್ರೀಮ್ ಟೀಮ್ ರಚಿಸುತ್ತಿರುವ ಕ್ರಿಕೆಟ್ ಪ್ರಿಯರು ಈ ಕೆಳಕಂಡಂತೆ ತಂಡಗಳನ್ನು ರಚಿಸಿದರೆ ಉತ್ತಮ ಎನ್ನಬಹುದು.

ಡ್ರೀಮ್ ಟೀಮ್ 1: ವಿಕೆಟ್ ಕೀಪರ್ - ಕ್ವಿಂಟನ್ ಡಿ ಕಾಕ್, ಹೆನ್ರಿಕ್ ಕ್ಲಾಸೆನ್

ಬ್ಯಾಟ್ಸ್‌ಮನ್‌ಗಳು - ರಾಹುಲ್ ತ್ರಿಪಾಠಿ, ಅಭಿಷೇಕ್ ಶರ್ಮಾ

ಆಲ್ ರೌಂಡರ್‌ಗಳು - ಏಡನ್ ಮಾರ್ಕ್ರಾಮ್ (ಉಪನಾಯಕ), ಕೈಲ್ ಮೇಯರ್ಸ್, ಮಾರ್ಕೊ ಜಾನ್ಸೆನ್, ಮಾರ್ಕಸ್ ಸ್ಟೊಯಿನಿಸ್ (ನಾಯಕ), ಕೃನಾಲ್ ಪಾಂಡ್ಯ

ಬೌಲರ್‌ಗಳು- ಭುವನೇಶ್ವರ್ ಕುಮಾರ್, ರವಿ ಬಿಷ್ಣೋಯ್

ಡ್ರೀಮ್ ಟೀಮ್ 2: ವಿಕೆಟ್ ಕೀಪರ್ - ಕ್ವಿಂಟನ್ ಡಿ ಕಾಕ್ (ಉಪನಾಯಕ), ಹೆನ್ರಿಕ್ ಕ್ಲಾಸೆನ್

ಬ್ಯಾಟ್ಸ್‌ಮನ್‌ಗಳು - ರಾಹುಲ್ ತ್ರಿಪಾಠಿ, ಅಭಿಷೇಕ್ ಶರ್ಮಾ

ಆಲ್ ರೌಂಡರ್‌ಗಳು - ಐಡೆನ್ ಮಾರ್ಕ್ರಾಮ್ (ನಾಯಕ), ಕೈಲ್ ಮೇಯರ್ಸ್, ಮಾರ್ಕೊ ಜಾನ್ಸೆನ್, ಮಾರ್ಕಸ್ ಸ್ಟೊಯಿನಿಸ್

ಬೌಲರ್‌ಗಳು- ಭುವನೇಶ್ವರ್ ಕುಮಾರ್, ರವಿ ಬಿಷ್ಣೋಯ್, ಮಯಾಂಕ್ ಮಾರ್ಕಂಡೆ

Story first published: Saturday, May 13, 2023, 14:05 [IST]
Other articles published on May 13, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+