ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಕೆಲ ತಂಡಗಳು ವಿಶೇಷ ಕಾರಣಗಳಿಗಾಗಿ ವಿಶೇಷ ಜರ್ಷಿಯನ್ನು ತೊಟ್ಟು ಕಣಕ್ಕಿಳಿಯುವ ಸಂಪ್ರದಾಯವನ್ನು ಹೊಂದಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ರತಿ ಆವೃತ್ತಿಯಲ್ಲಿಯೂ ಒಂದು ಪಂದ್ಯವನ್ನು ಪರಿಸರ ಜಾಗೃತಿ ಮೂಡಿಸುವ ದೃಷ್ಟಿಯಿಂದ ಹಸಿರು ಜರ್ಸಿಯೊಂದಿಗೆ ಕಣಕ್ಕಿಳಿಯುವ ಸಂಪ್ರದಾಯ ಮಾಡಿಕೊಂಡಿದೆ. ಇತ್ತೀಚೆಗಷ್ಟೇ ಗುಜರಾತ್ ಟೈಟನ್ಸ್ ತಂಡ ಕ್ಯಾನ್ಸರ್ ರೋಗಿಗಳಿಗೆ ಸತೈರ್ಯ ತುಂಬುವ ದೃಷ್ಟಿಯಿಂದ ಗುಲಾಬಿ ಬಣ್ಣದ ಜರ್ಸಿಯೊಂದಿಗೆ ಕಣಕ್ಕಿಳಿದಿತ್ತು. ಇದೀಗ ಈ ಸಾಲಿಗೆ ಮತ್ತೊಂದು ತಂಡ ಸೇರ್ಪಡೆಯಾಗುತ್ತಿದೆ.
ಲಕ್ನೋ ಸೂಪರ್ ಜೈಂಟ್ಸ್ ತಂಡ ಲೀಗ್ ಹಂತದಲ್ಲಿ ತನ್ನ ಕೊನೆಯ ಪಂದ್ಯದಲ್ಲಿ ವಿಶೇಷ ಜರ್ಸಿಯೊಂದಿಗೆ ಕಣಕ್ಕಿಳಿಯಲಿದೆ. ಕೊಲ್ಕತ್ತಾ ನಗರಕ್ಕೆ ಗೌರವ ಸಲ್ಲಿಸುವ ದೃಷ್ಟಿಯಿಂದ ಕೊಲ್ಕತ್ತಾ ಮೂಲದ ಫುಟ್ಬಾಲ್ ಕ್ಲಬ್ ಮೋಹನ್ ಬಾಗನ್ ತಂಡದ ಜರ್ಸಿಯನ್ನು ತೊಟ್ಟು ಕಣಕ್ಕಿಳಿಯಲಿದೆ ಲಕ್ನೋ ಸೂಪರ್ ಜೈಂಟ್ಸ್ ತಂಡ. ಈ ಮೂಲಕ ವಿಭಿನ್ನವಾಗಿ ಗೌರವ ಸಲ್ಲಿಸಲಿದೆ.

ಲಕ್ನೋ ಸೂಪರ್ ಜೈಂಟ್ಸ್ ತಂಡದ ಹಂಗಾಮಿ ನಾಯಕ ಕೃನಾಲ್ ಪಾಂಡ್ಯ, ಆಟಗಾರ ನಿಕೋಲಸ್ ಪೂರನ್ ಹಾಗೂ ತಂಡದ ಮಾಲೀಕ ಶಾಶ್ವತ್ ಗೋಯೆಂಕ ಈ ವಿಶೇಷ ಜರ್ಸಿಯನ್ನು ಇಂದು ಅನಾವರಣಗೊಳಿಸಿದ್ದಾರೆ. ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಎಲ್‌ಎಸ್‌ಜಿ ಈ ಜರ್ಸಿಯೊಂದಿಗೆ ಕಣಕ್ಕಿಳಿಯಲಿದೆ.
ಇಲ್ಲಿ ಗಮನಿಸಬೇಕಾದ ಅಂಶವೆಂದರೆ ಭಾರತದ ಉದ್ಯಮಿ ಸಂಜೀವ್ ಗೋಯೆಂಕಾ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಮೋಹನ್ ಬಾಗನ್ ಎರಡು ತಂಡದ ಸಹ ಮಾಲೀಕರಾಗಿದ್ದಾರೆ. ಇದೀಗ ಕೊಲ್ಕತ್ತಾದ ಕ್ರಿಕೆಟ್ ಅಭಿಮಾಣಿಗಳ ಜೊತೆಗೆ ಫುಟ್ಬಾಲ್ ಅಭಿಮಾನಿಗಳು ಈ ಪಂದ್ಯವನ್ನು ಎದುರು ನೋಡುತ್ತಿದ್ದಾರೆ.
ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವಿನ ಲೀಗ್ ಹಂತದ ಕೊನೆಯ ಪಂದ್ಯ ಶನಿವಾರ ನಡೆಯಲಿದೆ. ಶನಿವಾರ ಸಂಜೆ 7:30ಕ್ಕೆ ಈ ಪಂದ್ಯ ನಡೆಯಲಿದೆ.
ಲಕ್ನೋ ಸೂಪರ್ ಜೈಂಟ್ಸ್: ಕೃನಾಲ್ ಪಾಂಡ್ಯ (ನಾಯಕ), ಅವೇಶ್ ಖಾನ್, ಆಯುಷ್ ಬಡೋನಿ, ಕ್ವಿಂಟನ್ ಡಿ ಕಾಕ್, ಕೆ ಗೌತಮ್, ದೀಪಕ್ ಹೂಡಾ, ಪ್ರೇರಕ್ ಮಂಕಡ್, ಕೈಲ್ ಮೇಯರ್ಸ್, ಅಮಿತ್ ಮಿಶ್ರಾ, ಮೊಹ್ಸಿನ್ ಖಾನ್, ನವೀನ್-ಉಲ್-ಹಕ್, ನಿಕೋಲಸ್ ಪೂರನ್, ರವಿ ಬಿಷ್ಣೋಯ್, ಡೇನಿಯಲ್ ಸಾಮ್ಸ್, ಕರಣ್ ಶರ್ಮಾ, ರೊಮಾರಿಯೋ ಶೆಫರ್ಡ್, ಮಾರ್ಕಸ್ ಸ್ಟೊಯಿನಿಸ್, ಸ್ವಪ್ನಿಲ್ ಸಿಂಗ್, ಜಯದೇವ್ ಉನದ್ಕತ್, ಮನನ್ ವೋಹ್ರಾ, ಮಾರ್ಕ್ ವುಡ್, ಮಯಾಂಕ್ ಯಾದವ್, ಯಶ್ ಠಾಕೂರ್, ಯುದ್ವೀರ್ ಸಿಂಗ್, ಕರುಣ್ ನಾಯರ್.
ಕೊಲ್ಕತ್ತಾ ನೈಟ್ ರೈಡರ್ಸ್: ನಿತೀಶ್ ರಾಣಾ (ನಾಯಕ), ವರುಣ್ ಚಕ್ರವರ್ತಿ, ಲಾಕಿ ಫರ್ಗುಸನ್, ರಹಮಾನುಲ್ಲಾ ಗುರ್ಬಾಜ್, ವೆಂಕಟೇಶ್ ಅಯ್ಯರ್, ಸುನಿಲ್ ನರೈನ್, ಹರ್ಷಿತ್ ರಾಣಾ, ಅನುಕುಲ್ ರಾಯ್, ಆಂಡ್ರೆ ರಸೆಲ್, ರಿಂಕು ಸಿಂಗ್, ಟಿಮ್ ಸೌಥಿ, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ವೈಭವ್ ಅರೋರಾ, ಎನ್ ಜಗದೀಸನ್, ಸುಯಶ್ ಶರ್ಮಾ, ಡೇವಿಡ್ ವೈಸ್, ಕುಲ್ವಂತ್ ಖೆಜ್ರೋಲಿಯಾ, ಲಿಟನ್ ದಾಸ್, ಮನ್‌ದೀಪ್ ಸಿಂಗ್, ಜೇಸನ್ ರಾಯ್, ಆರ್ಯ ದೇಸಾಯಿ