RCB vs LSG: ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ಬೌಲಿಂಗ್ ಆಯ್ಕೆ: ಪ್ಲೇಯಿಂಗ್ 11, ಪಿಚ್ ವರದಿ
ಇಂಡಿಯನ್ ಪ್ರೀಮಿಯರ್ ಲೀಗ್ 2023ರ ಆವೃತ್ತಿಯ 15ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಟಾಸ್ ಗೆದ್ದಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದೆ. ಕಳೆದ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಸೋಲನುಭವಿಸಿರುವ ಆರ್‌ಸಿಬಿ ತವರಿನಲ್ಲಿ ಗೆಲುವಿನ ಹಳಿಗೆ ವಾಪಸಾಗಲು ಯೋಜಿಸುತ್ತಿದೆ.
ಇನ್ನು ಆಡಿರುವ ಮೂರು ಪಂದ್ಯಗಳಲ್ಲಿ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿರುವ ಲಕ್ನೋ ಸೂಪರ್ ಜೈಂಟ್ಸ್ ಮೂರನೇ ಗೆಲುವಿಗಾಗಿ ಕಾಯುತ್ತಿದೆ. ಕರ್ನಾಟಕದ ಆಟಗಾರರಾದ ಕೆಎಲ್ ರಾಹುಲ್ ಲಕ್ನೋ ತಂಡದ ನಾಯಕರಾಗಿದ್ದಾರೆ. ಚಿನ್ನಸ್ವಾಮಿಯಲ್ಲಿ ಆಡಿದ ಅನುಭವ ಹೊಂದಿರುವ ಅವರು, ಮನೆಯಂಗಳದಲ್ಲಿ ಉತ್ತಮ ಪ್ರದರ್ಶನ ನೀಡಲು ಸಜ್ಜಾಗಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡುವ ಬಳಗದಲ್ಲಿ ಹಲವು ಬದಲಾವಣೆ ಮಾಡಲಾಗಿದೆ. ರೀಸ್ ಟೋಪ್ಲಿ ಬದಲಾಗಿ ತಂಡವನ್ನು ಸೇರಿಕೊಂಡಿರುವ ದಕ್ಷಿಣ ಆಫ್ರಿಕಾ ಎಡಗೈ ವೇಗದ ಬೌಲರ್ ವೇಯ್ನ್ ಪಾರ್ನೆಲ್ ಆಡುವ ಬಳಗದಲ್ಲಿ ಅವಕಾಶ ಪಡೆದುಕೊಂಡಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ಮಹಿಪಾಲ್ ಲೊಮ್ರೊರ್ ಆಡುವುದು ಖಚಿತವಾಗಿದೆ. ಮೈಕೆಲ್ ಬ್ರೇಸ್‌ವೆಲ್ ತಂಡದಿಂದ ಹೊರಗುಳಿದ್ದಾರೆ.
ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಕೂಡ ಹಲವು ಬದಲಾವಣೆ ಮಾಡಲಾಗಿದೆ. ವೇಗದ ಬೌಲರ್ ಮಾರ್ಕ್ ವುಡ್ ಫಿಟ್ ಆಗಿದ್ದು, ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಯಶ್ ಠಾಕೂರ್ ಪ್ಲೇಯಿಂಗ್ 11ನಿಂದ ಹೊರಗುಳಿದಿದ್ದಾರೆ. ಉತ್ತಮ ಬ್ಯಾಟಿಂಗ್ ಪಡೆಯನ್ನು ಹೊಂದಿರುವ ಲಕ್ನೋ ತಂಡ ಚೇಸಿಂಗ್ ಮಾಡುವ ಉತ್ಸಾಹದಲ್ಲಿದೆ.

ಚಿನ್ನಸ್ವಾಮಿ ಕ್ರೀಡಾಂಗಣ ಪಿಚ್ ವರದಿ
ಸಾಮಾನ್ಯವಾಗಿ ಚಿನ್ನಸ್ವಾಮಿ ಕ್ರೀಡಾಂಗಣದ ಬ್ಯಾಟಿಂಗ್‌ಗೆ ಹೆಚ್ಚಿನ ನೆರವು ನೀಡುತ್ತದೆ. ಚಿಕ್ಕ ಬೌಂಡರಿಗಳನ್ನು ಹೊಂದಿರುವ ಕಾರಣ ಮತ್ತೊಂದು ಹೈಸ್ಕೋರಿಂಗ್ ಪಂದ್ಯವನ್ನು ನಿರೀಕ್ಷೆ ಮಾಡಬಹುದು. ಆರಂಭದಲ್ಲಿ ವೇಗಿಗಳಿಗೆ ಪಿಚ್ ನೆರವು ನೀಡಲಿದೆ ಎಂದು ನಿರೀಕ್ಷೆ ಮಾಡಲಾಗಿದ್ದು, ಆರಂಭಿಕ ಬ್ಯಾಟರ್ ಗಳು ಎಚ್ಚರಿಕೆಯಿಂದ ಇನ್ನಿಂಗ್ಸ್ ಆರಂಭಿಸಬೇಕಿದೆ.
ಉಭಯ ತಂಡಗಳ ಆಡುವ ಬಳಗ:
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಮಹಿಪಾಲ್ ಲೊಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಅನುಜ್ ರಾವತ್, ಡೇವಿಡ್ ವಿಲ್ಲಿ, ವೇಯ್ನ್ ಪಾರ್ನೆಲ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್.
ಲಕ್ನೋ ಸೂಪರ್ ಜೈಂಟ್ಸ್: ಕೆಎಲ್ ರಾಹುಲ್ (ನಾಯಕ), ಕೈಲ್ ಮೇಯರ್ಸ್, ದೀಪಕ್ ಹೂಡಾ, ಮಾರ್ಕಸ್ ಸ್ಟೊಯಿನಿಸ್, ಕೃನಾಲ್ ಪಾಂಡ್ಯ, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಜಯದೇವ್ ಉನದ್ಕತ್, ಅಮಿತ್ ಮಿಶ್ರಾ, ಅವೇಶ್ ಖಾನ್, ಮಾರ್ಕ್ ವುಡ್, ರವಿ ಬಿಷ್ಣೋಯ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications