For Quick Alerts
ALLOW NOTIFICATIONS  
For Daily Alerts
 

IPL 2023: ಸಿಎಸ್‌ಕೆ ಬತ್ತಳಿಕೆಗೆ ಸೇರ್ಪಡೆಯಾದ ಶ್ರೀಲಂಕಾದ ಮಾರಕ ಜೋಡಿ ಅಸ್ತ್ರ; ಎಂಸ್ ಧೋನಿ ಫುಲ್ ಖುಷ್!

2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 16ನೇ ಋತುವಿನಲ್ಲಿ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಉತ್ತಮ ಪ್ರದರ್ಶನ ನೀಡುತ್ತಿದೆ. ಆಡಿದ ಮೂರು ಪಂದ್ಯಗಳಲ್ಲಿ ಒಂದು ಪಂದ್ಯ ಸೋತು, ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದಾರೆ.

ಇದೇ ವೇಳೆ, ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡದ ಕೆಲವು ಪಂದ್ಯಗಳಿಗೆ ಪ್ರಮುಖ ಹಾಗೂ ದುಬಾರಿ ಆಟಗಾರರಾದ ದೀಪಕ್ ಚಹಾರ್ ಮತ್ತು ಬೆನ್ ಸ್ಟೋಕ್ಸ್ ಅವರ ಸೇವೆಯಿಲ್ಲದೆ ಆಟಬೇಕಾದ ಪರಿಸ್ಥಿತಿ ಇದೆ.

IPL 2023: Maheesh Theekshan and Mathish Pathirana Join Chennai Super Kings Squad

ಇದೀಗ ಸಿಎಸ್‌ಕೆ ನಾಯಕ ಎಂಎಸ್ ಧೋನಿ ಅವರು ಶ್ರೀಲಂಕಾ ಜೋಡಿಯಾದ ಮಹೀಶ್ ತೀಕ್ಷಣ ಮತ್ತು ಮಥೀಶ್ ಪತಿರಾನ ಅವರು ತಂಡಕ್ಕೆ ಸೇರ್ಪಡೆಯಾಗುವುದರೊಂದಿಗೆ ಗಮನಾರ್ಹ ಉತ್ತೇಜನ ಪಡೆದಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ಸಿಎಸ್‌ಕೆ ಹೆಣಗಾಡುತ್ತಿರುವ ವೇಳೆ, ಶ್ರೀಲಂಕಾದ ಇಬ್ಬರು ಯುವ ಆಟಗಾರರ ಆಗಮನ ಸಿಎಸ್‌ಕೆ ತಂಡದ ಪ್ರದರ್ಶನದ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ.

ಮಹೀಶ್ ತೀಕ್ಷಣ ಮತ್ತು ಮಥೀಶ್ ಪತಿರಾನ ಅವರು ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಶ್ರೀಲಂಕಾ ತಂಡದ ಪರ ಆಡುತ್ತಿದ್ದರಿಂದ ಆರಂಭದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಕೂಡಿಕೊಳ್ಳಲು ಸಾಧ್ಯವಾಗಲಿಲ್ಲ. ಏಪ್ರಿಲ್ 9ರಂದು ಅಂತಾರಾಷ್ಟ್ರೀಯ ಸರಣಿ ಮುಕ್ತಾಯಗೊಂಡ ಬೆನ್ನಲ್ಲೇ, ಇವರಿಬ್ಬರು ಸಿಎಸ್‌ಕೆ ತಂಡವನ್ನು ಸೇರಿಕೊಂಡಿದ್ದಾರೆ.

ಪ್ರಮುಖ ಆಟಗಾರರಾದ ದೀಪಕ್ ಚಹಾರ್ ಮಂಡಿರಜ್ಜು ಗಾಯದಿಂದ ಬಳಲುತ್ತಿದ್ದರೆ ಮತ್ತು ಬೆನ್ ಸ್ಟೋಕ್ಸ್ ಕಾಲಿನ ಬೆರಳು ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಮಹೀಶ್ ತೀಕ್ಷಣ ಮತ್ತು ಮಥೀರ್ಶ ಪತಿರಾನ ಅವರ ಸೇರ್ಪಡೆಯಿಂದ ಬೌಲಿಂಗ್ ವಿಭಾಗದಲ್ಲಿ ಹೆಚ್ಚು ಅಗತ್ಯವಿರುವ ಬಲವನ್ನು ತಂದುಕೊಡುವ ನಿರೀಕ್ಷೆ ಇದೆ.

ಅಹಮದಾಬಾದ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಆಡಿದ 2023ರ ಐಪಿಎಲ್‌ನ ಉದ್ಘಾಟನಾ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡದ ವಿರುದ್ಧ ಮುಖಭಂಗ ಅನುಭವಿಸಿತು. ನಂತರ ನಡೆದ ತವರಿನ ಚೆಪಾಕ್ ಕ್ರೀಡಾಂಗಣದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಗೆದ್ದು ಬೀಗಿತು. ಆ ಬಳಿಕ ಮುಂಬೈ ಇಂಡಿಯನ್ಸ್ ವಿರುದ್ಧ ಅವರದೇ ಮೈದಾನದಲ್ಲಿ ಸೋಲಿನ ರುಚಿ ತೋರಿಸಿತು.

MI vs DC IPL 2023: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಗೆಲುವಿಗೆ ಇದೇ ಕಾರಣ ಎಂದ ರೋಹಿತ್ ಶರ್ಮಾ

ಇದೀಗ ನಾಲ್ಕು ಬಾರಿಯ ಐಪಿಎಲ್ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಬುಧವಾರ, ಏಪ್ರಿಲ್ 12ರಂದು ರಾಜಸ್ಥಾನ ರಾಯಲ್ಸ್ (ಆರ್‌ಆರ್) ತಂಡವನ್ನು ಎದುರಿಸಲಿದೆ. ರಾಜಸ್ಥಾನ ರಾಯಲ್ಸ್ ವಿರುದ್ಧ ತಮ್ಮ ಗೆಲುವಿನ ನಾಗಾಲೋಟವನ್ನು ಮುಂದುವರೆಸಲು ಎಂಎಸ್ ಧೋನಿ ಬಳಗ ಉತ್ಸುಕವಾಗಿದೆ. ಮತ್ತೊಂದೆಡೆ, ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ ತಂಡವು ಆಡಿದ ಮೂರು ಪಂದ್ಯಗಳಲ್ಲಿ ಎರಡನ್ನು ಗೆದ್ದು, ಒಂದರಲ್ಲಿ ಸೋತಿದೆ.

IPL 2023: Maheesh Theekshan and Mathish Pathirana Join Chennai Super Kings Squad


ಸನ್‌ರೈಸರ್ಸ್ ಹೈದರಾಬಾದ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳನ್ನು ಸೋಲಿಸಿರುವ ರಾಜಸ್ಥಾನ ರಾಯಲ್ಸ್ ತಂಡ, ಪಂಜಾಬ್ ಕಿಂಗ್ಸ್ ವಿರುದ್ಧ ಸೋಲು ಕಂಡಿತ್ತು. ರಾಜಸ್ಥಾನ ರಾಯಲ್ಸ್ ತಂಡದ ಬ್ಯಾಟರ್‌ಗಳು ಉತ್ತಮ ಫಾರ್ಮ್‌ನಲ್ಲಿದ್ದು, ವಿಶೇಷವಾಗಿ ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್ ಮತ್ತು ನಾಯಕ ಸಂಜು ಸ್ಯಾಮ್ಸನ್ ಚೆನ್ನಾಗಿ ಆಡುತ್ತಿದ್ದಾರೆ. ರಾಜಸ್ಥಾನ ರಾಯಲ್ಸ್ ತಂಡ ಈ ಋತುವಿನಲ್ಲಿ ಆಡಿದ ಎಲ್ಲಾ ಮೂರು ಪಂದ್ಯಗಳಲ್ಲಿ 190 ಪ್ಲಸ್ ಮೊತ್ತ ದಾಖಲಿಸಿದೆ.

ರಾಜಸ್ಥಾನ ರಾಯಲ್ಸ್ ಬೌಲಿಂಗ್ ವಿಭಾಗದಲ್ಲಿ ಟ್ರೆಂಟ್ ಬೌಲ್ಟ್ ಅತ್ಯುತ್ತಮ ಫಾರ್ಮ್‌ನಲ್ಲಿದ್ದರೆ, ರವಿಚಂದ್ರನ್ ಅಶ್ವಿನ್ ಮತ್ತು ಯುಜ್ವೇಂದ್ರ ಚಹಾಲ್ ತಂಡದ ವಿಕೆಟ್ ಟೇಕರ್ ಸ್ಪಿನ್ನರ್‌ಗಳಾಗಿದ್ದಾರೆ.

ಒಟ್ಟಿನಲ್ಲಿ ಮಹೀಶ್ ತೀಕ್ಷಣ ಮತ್ತು ಮಥೀಶ್ ಪತಿರಾನಾ ತಂಡಕ್ಕೆ ಸೇರ್ಪಡೆಗೊಳ್ಳುವುದರೊಂದಿಗೆ ರಾಜಸ್ಥಾನ ರಾಯಲ್ಸ್ ವಿರುದ್ಧ ತಮ್ಮ ಗೆಲುವಿನ ಫಾರ್ಮ್ ಅನ್ನು ಮುಂದುವರೆಸು ಸಾಧ್ಯತೆಗಳ ಬಗ್ಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ವಿಶ್ವಾಸ ಹೊಂದಿದೆ.

Story first published: Wednesday, April 12, 2023, 8:15 [IST]
Other articles published on Apr 12, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+