IPL 2023: ಚೆನ್ನೈ ತಂಡಕ್ಕೆ ದೊಡ್ಡ ಹಿನ್ನಡೆ: ಬೆನ್ ಸ್ಟೋಕ್ಸ್ ಬೌಲಿಂಗ್ ಮಾಡೋದೆ ಅನುಮಾನ!

ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ 2023ರ ಆವೃತ್ತಿಯ ಮೊದಲನೇ ಪಂದ್ಯಕ್ಕಾಗಿ ಸಜ್ಜಾಗಿದೆ. ಮಾರ್ಚ್ 31ರಂದು ಅಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ 16ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಧೋನಿ ನೇತೃತ್ವದ ಸಿಎಸ್‌ಕೆ ತಂಡ ಹಾಲಿ ಚಾಂಪಿಯನ್ ಗುಜರಾತ್ ಜೈಂಟ್ಸ್ ವಿರುದ್ಧ ಸೆಣೆಸಲಿದೆ.
ಚೆನ್ನೈನ ಚಿದಂಬರಂ ಕ್ರೀಡಾಂಗಣದಲ್ಲಿ ಸಿಎಸ್‌ಕೆ ತಂಡದ ಆಟಗಾರರು ಕಠಿಣ ಅಭ್ಯಾಸ ಮಾಡುತ್ತಿದ್ದು, ಮೊದಲನೇ ಪಂದ್ಯದಲ್ಲಿ ಗೆಲುವಿನ ಆತ್ಮವಿಶ್ವಾಸದಲ್ಲಿದ್ದಾರೆ. ಆದರೆ, ಮೊದಲನೇ ಪಂದ್ಯಕ್ಕೆ ಮುನ್ನವೇ ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ. ತಂಡದ ಪ್ರಮುಖ ಆಲ್‌ರೌಂಡರ್ ಬೆನ್ ಸ್ಟೋಕ್ಸ್ ಐಪಿಎಲ್‌ನಲ್ಲಿ ಬೌಲಿಂಗ್ ಮಾಡುವುದು ಅನುಮಾನ ಎನ್ನಲಾಗಿದೆ.
ಬೆನ್ ಸ್ಟೋಕ್ಸ್ ತಮ್ಮ ಮೊಣಕಾಲಿನ ಗಾಯವನ್ನು ನಿರ್ವಹಿಸಲು, ಸಹಾಯವಾಗುವಂತೆ ಬ್ಯಾಟರ್ ಆಗಿ ಮಾತ್ರ ಆಡಲಿದ್ದಾರೆ. ಸ್ಟೋಕ್ಸ್ ಎಡ ಮೊಣಕಾಲು ನೋವಿನಿಂದ ಬಳಲುತ್ತಿದ್ದಾರೆ. ಐಪಿಎಲ್ ಮುಗಿದ ನಂತರ ಆಶಸ್ ಸರಣಿ ಇರುವುದರಿಂದ ಫಿಟ್‌ನೆಸ್ ಬಗ್ಗೆ ಹೆಚ್ಚಿನ ಗಮನ ಹರಿಸಲು ತೀರ್ಮಾನಿಸಿದ್ದಾರೆ. ಮೊಣಕಾಲಿಗೆ ವಿಶೇಷವಾದ ಚುಚ್ಚುಮದ್ದು ಪಡೆದುಕೊಂಡಿದ್ದಾರೆ ಎಂದು ಇಎಸ್‌ಪಿಎನ್ ಕ್ರಿಕ್‌ಇನ್ಫೋ ವರದಿ ಮಾಡಿದೆ.

ಕೊನೆಯ ಹಂತದ ಪಂದ್ಯಗಳಲ್ಲಿ ಬೌಲಿಂಗ್?
ತನ್ನ ಕೆಲಸದ ಹೊರೆಯನ್ನು ನಿರ್ವಹಿಸಲು, ಆಶಸ್ ಸರಣಿಗೆ ಫಿಟ್ ಆಗಿರಲು ಅವರು ಶ್ರಮ ಪಡುತ್ತಿದ್ದಾರೆ. ಐಪಿಎಲ್‌ನ ಕೊನೆಯ ಹಂತದ ಪಂದ್ಯಗಳಲ್ಲಿ ಸಂಪೂರ್ಣವಾಗಿ ಫಿಟ್ ಆದರೆ ಮಾತ್ರ ಬೌಲಿಂಗ್ ಮಾಡುವ ಸಾಧ್ಯತೆ ಇದೆ. ಸ್ಟೋಕ್ಸ್ ಬೌಲಿಂಗ್ ಮಾಡದೇ ಇರುವುದು ಸಿಎಸ್‌ಕೆ ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ.
ಸ್ಟೋಕ್ಸ್ ಅವರಿಗೆ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಮತ್ತೆ ಮೊಣಕಾಲಿನ ನೋವು ಕಾಣಿಸಿಕೊಂಡಿದೆ. ಎರಡೂ ಟೆಸ್ಟ್ ಪಂದ್ಯಗಳಲ್ಲಿ ಅವರು ಕೇವಲ 9 ಓವರ್ ಮಾತ್ರ ಬೌಲಿಂಗ್ ಮಾಡಿದರು. ಬ್ಯಾಟಿಂಗ್ ಮಾಡುವಾಗ ಕೂಡ ಮೊಣಕಾಲು ನೋವಿನಿಂದ ಬಳಲುತ್ತಿದ್ದರು.
ನಂತರ ಸ್ಟೋಕ್ಸ್ ಗಾಯದ ಸ್ಕ್ಯಾನ್‌ಗೆ ಒಳಗಾಗಿದ್ದರು, ಗಂಭೀರ ಪ್ರಮಾಣದ ಗಾಯವಾಗಿಲ್ಲ ಎಂದು ವರದಿಯಲ್ಲಿ ಹೇಳಿದೆ ಎನ್ನಲಾದರೂ, ಸ್ಟೋಕ್ಸ್ ತಮ್ಮ ಫಿಟ್‌ನೆಸ್ ಬಗ್ಗೆ ಎಲ್ಲಿಯೂ ಮಾತನಾಡಿಲ್ಲ. ಐಪಿಎಲ್‌ಗಾಗಿ ಆಡಲು ಕಾರ್ಟಿಸೋನ್ ಇಂಜೆಕ್ಷನ್ ತೆಗೆದುಕೊಂಡಿದ್ದಾರೆ.ಇದು ಸಾಮಾನ್ಯ ಉರಿಯೂತದ ಚುಚ್ಚುಮದ್ದು, ಇದು ಊತವನ್ನು ಕಡಿಮೆ ಮಾಡುತ್ತದೆ.

ಅವರು ಹೆಚ್ಚು ಬೌಲಿಂಗ್ ಮಾಡಲ್ಲ ಎಂದ ಕೋಚ್
"ಮೊದಲನೇ ಪಂದ್ಯದಿಂದ ಸ್ಟೋಕ್ಸ್ ಸ್ಪೆಷಲ್ ಬ್ಯಾಟರ್ ಆಗಿ ಕಣಕ್ಕಿಳಿಯಲಿದ್ದಾರೆ. ಬೌಲಿಂಗ್ ಮಾಡುವ ಬಗ್ಗೆ ಕಾದು ನೋಡಬೇಕಿದೆ. ಅವರು ಮೊಣಕಾಲಿಗೆ ಚುಚ್ಚುಮದ್ದು ಪಡೆದುಕೊಂಡಿದ್ದರಿಂದ, ಭಾನುವಾರ ಕೆಲ ಹೊತ್ತು ನೆಟ್‌ನಲ್ಲಿ ಬೌಲಿಂಗ್ ಮಾಡಿದರು. ಆದರೆ, ಪಂದ್ಯಾವಳಿಯಲ್ಲಿ ಅವರು ಬೌಲಿಂಗ್ ಮಾಡುವುದು ಅನುಮಾನ, ಕೆಲವು ವಾರಗಳ ನಂತರ ಅವರು ಬೌಲಿಂಗ್ ಮಾಡಬಹುದು ಎಂದು ನಿರೀಕ್ಷೆ ಮಾಡಲಾಗಿದೆ" ಎಂದು ಸಿಎಸ್‌ಕೆ ತಂಡದ ಬ್ಯಾಟಿಂಗ್ ಕೋಚ್ ಮೈಕೆಲ್ ಹಸ್ಸಿ ಹೇಳಿದ್ದಾರೆ.
ಬೆನ್ ಸ್ಟೋಕ್ಸ್ ಫಿಟ್‌ನೆಸ್ ಬಗ್ಗೆ ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಹೆಚ್ಚಿನ ನಿಗಾ ವಹಿಸಿದೆ. ನ್ಯೂಜಿಲೆಂಡ್ ಸರಣಿಯ ನಂತರ ಸ್ಟೀಫನ್ ಫ್ಲೆಮಿಂಗ್ ಅವರೊಂದಿಗೆ ಸಂಪರ್ಕದಲ್ಲಿರುವುದಾಗಿ ಇಂಗ್ಲೆಂಡ್ ಟೆಸ್ಟ್ ಕೋಚ್ ಬ್ರೆಂಡನ್ ಮೆಕಲಮ್ ಹೇಳಿದ್ದರು. ಜೂನ್ 1 ರಂದು ಪ್ರಾರಂಭವಾಗುವ ಐರ್ಲೆಂಡ್ ವಿರುದ್ಧದ ಟೆಸ್ಟ್‌ನಲ್ಲಿ ಆಡಲು ಸ್ಟೋಕ್ಸ್ ಬೇಗನೆ ಐಪಿಎಲ್ ತೊರೆಯುವ ಬಗ್ಗೆ ಸುಳಿವು ನೀಡಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications