
2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 16ನೇ ಸೀಸನ್‌ಗೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಎಲ್ಲಾ ಹತ್ತು ತಂಡಗಳು ಶಿಬಿರ ಸೇರಿಕೊಂಡು ಸಿದ್ಧತೆ ಆರಂಭಿಸಿವೆ. ಮಾರ್ಚ್ 31ರಂದು ಮಾಜಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ತಂಡಗಳ ನಡುವೆ ಉದ್ಘಾಟನಾ ಪಂದ್ಯ ನಡೆಯಲಿದೆ.
ಬಹುನಿರೀಕ್ಷಿತ ಐಪಿಎಲ್ ಪಂದ್ಯಾವಳಿಯಲ್ಲಿ ಭಾರತೀಯ ಹಾಗೂ ವಿಶ್ವದ ಹಲವು ಆಟಗಾರರಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಸೂಕ್ತ ವೇದಿಕೆಯಾಗಿದೆ. ಇದಕ್ಕಾಗಿ ಕ್ರಿಕೆಟ್ ಅಭಿಮಾನಿಗಳಿಗೆ ಕುತೂಹಲದಿಂದ ಕಾಯುತ್ತಿದ್ದಾರೆ.
2023ರ ಐಪಿಎಲ್ ಆವೃತ್ತಿಗೂ ಮುನ್ನ ಕೆಲವು ಕೆಲವು ಫ್ರಾಂಚೈಸಿಗಳ ಆಟಗಾರರು ಗಾಯಕ್ಕೆ ತುತ್ತಾಗಿದ್ದು, ಈ ಬಾರಿಯ ಐಪಿಎಲ್‌ನಿಂದ ಹೊರಗುಳಿದಿದ್ದಾರೆ. ಅದರಲ್ಲಿ ಪಂಜಾಬ್ ಕಿಂಗ್ಸ್ ಪರ ಆಡುತ್ತಿರುವ ಇಂಗ್ಲೆಂಡ್‌ನ ಜಾನಿ ಬೈರ್‌ಸ್ಟೋವ್ ಕೂಡ ಒಬ್ಬರು.
ಇದೀಗ ಆರಂಭಿಕ ಬ್ಯಾಟ್ಸ್‌ಮನ್ ಜಾನಿ ಬೈರ್‌ಸ್ಟೋವ್ ಬದಲಿಗೆ ನ್ಯೂಜಿಲೆಂಡ್‌ನ ಮಾರ್ಟಿನ್ ಗಪ್ಟಿಲ್ ಅವರು ಪಂಜಾಬ್ ಕಿಂಗ್ಸ್ ತಂಡಕ್ಕೆ ಆಯ್ಕೆಯಾಗಿದ್ದು, ಈ ಬಾರಿಯ ಐಪಿಎಲ್‌ನಲ್ಲಿ ಆರಂಭಿಕ ಬ್ಯಾಟರ್ ಆಗಿ ಕಣಕ್ಕಿಳಿಯಲಿದ್ದಾರೆ.
ಪಂಜಾಬ್ ಕಿಂಗ್ಸ್ ತಂಡದ ಬ್ಯಾಟಿಂಗ್ ಲೈನ್‌ಅಪ್‌ನ ಪ್ರಮುಳನಾಗಿದ್ದ ಜಾನಿ ಬೈರ್‌ಸ್ಟೋವ್, ಇಂಗ್ಲೆಂಡ್ ತಂಡದ ಪರ ಆಡುವಾಗ ಬೆರಳಿಗೆ ಗಾಯ ಮಾಡಿಕೊಂಡಿದ್ದರು. ಹೀಗಾಗಿ ಜಾನಿ ಬೈರ್‌ಸ್ಟೋವ್ ಸ್ವಲ್ಪ ಸಮಯದವರೆಗೆ ಕ್ರಿಕೆಟ್‌ನಿಂದ ದೂರವುಳಿಯಲಿದ್ದಾರೆ.

2023ರ ಐಪಿಎಲ್‌ಗೂ ಮುನ್ನ ಪಂಜಾಬ್ ಕಿಂಗ್ಸ್ ಫ್ರಾಂಚೈಸಿಯು ಮಾರ್ಟಿನ್ ಗಪ್ಟಿಲ್ ಅವರನ್ನು ಬದಲಿ ಆಟಗಾರನಾಗಿ ತೆಗೆದುಕೊಳ್ಳಲು ಹಿಂದುಮುಂದು ನೋಡಲಿಲ್ಲ.
ಈ ಹಿಂದೆ ಐಪಿಎಲ್‌ನಲ್ಲಿ ವಿವಿಧ ಫ್ರಾಂಚೈಸಿಗಳಲ್ಲಿ ಆಡಿರುವ ಮಾರ್ಟಿನ್ ಗಪ್ಟಿಲ್ ಅಗ್ರಕ್ರಮಾಂಕದಲ್ಲಿ ಅತ್ಯುತ್ತಮ ಬ್ಯಾಟಿಂಗ್ ಸಹ ಪ್ರದರ್ಶಿಸಿದ್ದಾರೆ. ತನ್ನ ಸ್ಫೋಟಕ ಬ್ಯಾಟಿಂಗ್ ಶೈಲಿಗೆ ಹೆಸರುವಾಸಿಯಾಗಿರುವ ನ್ಯೂಜಿಲೆಂಡ್ ಆರಂಭಿಕ ಬ್ಯಾಟರ್ ಯಾವುದೇ ಬೌಲರ್ ವಿರುದ್ಧ ರನ್ ಗಳಿಸುವ ಸಾಮರ್ಥ್ಯ ಹೊಂದಿದ್ದಾರೆ.
ಕಳೆದ ವರ್ಷದ ನಿರಾಶಾದಾಯಕ ಋತುವಿನ ನಂತರ ಪುಟಿದೇಳಲು ಪಂಜಾಬ್ ಕಿಂಗ್ಸ್ ತಂಡಕ್ಕೆ ಈ ಬಾರಿ ಉತ್ತಮ ಅವಕಾಶವಿದೆ. ಇದೀಗ ಮಾರ್ಟಿನ್ ಗಪ್ಟಿಲ್ ಅವರ ಸೇರ್ಪಡೆ ತಂಡವನ್ನು ಇನ್ನಷ್ಟು ಬಲಿಷ್ಠವನ್ನಾಗಿ ಮಾಡಿದೆ.

ಐಪಿಎಲ್ ವಿಶ್ವದ ಅತ್ಯಂತ ಶ್ರೀಮಂತ ಹಾಗೂ ಸ್ಪರ್ಧಾತ್ಮಕ ಟಿ20 ಪಂದ್ಯಾವಳಿಗಳಲ್ಲಿ ಒಂದಾಗಿರುವುದರಿಂದ, ಪ್ರಶಸ್ತಿ ಗೆಲ್ಲಲು ಪ್ರತಿ ತಂಡವು ಸಮತೋಲಿನದಿಂದ ಕೂಡಿರಬೇಕು.
2023ರ ಐಪಿಎಲ್‌ನಲ್ಲಿ ಪಂಜಾಬ್ ಕಿಂಗ್ಸ್ ತಂಡದ ಅಭಿಮಾನಿಗಳು ಮಾರ್ಟಿನ್ ಗಪ್ಟಿಲ್ ಅವರಿಂದ ದೊಡ್ಡ ಇನ್ನಿಂಗ್ಸ್ ಅನ್ನು ಬಯಸುತ್ತಿದ್ದಾರೆ ಮತ್ತು ಈ ಮೂಲಕ ಪಂಜಾಬ್ ಕಿಂಗ್ಸ್ ತಂಡ ಚೊಚ್ಚಲ ಬಾರಿಗೆ ಐಪಿಎಲ್ ಟ್ರೋಫಿ ಎತ್ತಿ ಹಿಡಿಯಲು ನೆರವಾಗುತ್ತಾರೆಯೇ ಎಂದು ಕಾದು ನೋಡಬೇಕಿದೆ.
ಐಪಿಎಲ್ 2023: ಪಂಜಾಬ್ ಕಿಂಗ್ಸ್ ಪೂರ್ಣ ತಂಡ
ಶಿಖರ್ ಧವನ್ (ನಾಯಕ), ಶಾರುಖ್ ಖಾನ್, ಮಾರ್ಟಿನ್ ಗಪ್ಟಿಲ್, ಪ್ರಭ್‌ಸಿಮ್ರಾನ್ ಸಿಂಗ್, ಭಾನುಕಾ ರಾಜಪಕ್ಸೆ, ಜಿತೇಶ್ ಶರ್ಮಾ, ರಾಜ್ ಬಾವಾ, ರಿಷಿ ಧವನ್, ಲಿಯಾಮ್ ಲಿವಿಂಗ್‌ಸ್ಟೋನ್, ಅಥರ್ವ ಟೈಡೆ, ಅರ್ಶ್‌ದೀಪ್ ಸಿಂಗ್, ನಾಥನ್ ಎಲ್ಲಿಸ್, ಬಲ್ತೇಜ್ ಸಿಂಗ್, ಕಗಿಸೊ ರಬಾಡ, ರಾಹುಲ್ ಚಾಹರ್, ಸ್ಯಾಮ್ ಕುರಾನ್, ಸಿಕಂದರ್ ರಝಾ, ಹರ್‌ಪ್ರೀತ್ ಭಾಟಿಯಾ, ವಿದ್ವತ್ ಕಾವೇರಪ್ಪ, ಶಿವಂ ಸಿಂಗ್, ಮೋಹಿತ್ ರಾಥೆ, ಹರ್‌ಪ್ರೀತ್ ಬ್ರಾರ್.