Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

LSG vs SRH Preview: ಸನ್‌ರೈಸರ್ಸ್ vs ಸೂಪರ್ ಜೈಂಟ್ಸ್ ಮುಖಾಮುಖಿ; ಸಂಭಾವ್ಯ ಆಡುವ ಬಳಗ, ಇತರ ಮಾಹಿತಿ

ಐಪಿಎಲ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿದ್ದು ಶುಕ್ರವಾರ ಈ ಪಂದ್ಯ ನಡೆಯಲಿದೆ. ಟೂರ್ನಿಯ 10ನೇ ಪಂದ್ಯ ಇದಾಗಿದ್ದು ಎರಡು ತಂಡಗಳು ಕೂಡ ಸಾಕಷ್ಟು ಬಲಿಷ್ಠ ಆಟಗಾರರನ್ನು ಒಳಗೊಂಡಿರುವ ಕಾರಣ ಪೈಪೋಟಿಯ ಪಂದ್ಯವನ್ನು ಅಭಿಮಾನಿಗಳು ನಿರೀಕ್ಷಿಸಬಹುದಾಗಿದೆ.

ಇನ್ನು ಸನ್‌ರೈಸರ್ಸ್ ಹೈದರಾಬಾದ್ ತಂಡ ಮೊದಲ ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿದ್ದು ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ 72 ರನ್‌ಗಳ ಅಂತರದ ಸೋಲು ಕಂಡಿತು. ಹೀಗಾಗಿ ಮೊದಲ ಗೆಲುವಿನ ಮೇಲೆ ಕಣ್ಣಿಟ್ಟಿದೆ. ಇತ್ತ ಲಕ್ನೋ ಸೂಪರ್ ಜೈಂಟ್ಸ್ ತಂಡ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿದ್ದರೂ ಎರಡನೇ ಪಂದ್ಯವನ್ನು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 12 ರನ್‌ಗಳ ಅಂತರದಿಂದ ಸೋತಿತ್ತು. ಹೀಗಾಗಿ ಗೆಲುವಿನ ಲಯಕ್ಕೆ ಮರಳುವ ಪ್ರಯತ್ನ ನಡೆಸಲಿದೆ ಕೆಎಲ್ ರಾಹುಲ್ ಪಡೆ.

IPL 2023, Match 10, LSG vs SRH Preview, Predicted Playing 10, Pitch Report, And Weather Forecast in Kannada

ಇನ್ನು ಸನ್‌ರೈಸರ್ಸ್ ಹೈದರಾಬಾದ್ ತಂಡಕ್ಕೆ ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಆಟಗಾರರ ಬಲ ದೊರೆಯಲಿದೆ. ಮೂವರು ದಕ್ಷಿಣ ಆಫ್ರಿಕಾದ ಆಟಗಾರರಾದ ಐಡೆನ್ ಮಾರ್ಕ್ರಮ್, ಹೆನ್ರಿಕ್ ಕ್ಲಾಸಿನ್ ಹಾಗೂ ಮಾಕ್ರೋ ಜಾನ್ಸನ್ ತಂಡವನ್ನು ಕೂಡಿಕೊಂಡಿದ್ದಾರೆ. ಐಡೆನ್ ಮಾರ್ಕ್ರಮ್ ತಂಡದ ನಾಯಕನಾಗಿ ಜವಾಬ್ಧಾರಿ ವಹಿಸಿಕೊಳ್ಳಲಿದ್ದು ಹೊಸ ನಾಯಕನ ಮುಮದಾಳತ್ವದಲ್ಲಿ ಎಸ್‌ಆರ್‌ಹೆಚ್ ತಂಡ ಯಾವ ರೀತಿಯ ಪ್ರದರ್ಶನ ನೀಡಲಿದೆ ಎಂಬುದು ಕುತೂಹಲ ಮೂಡಿಸಿದೆ.

ಪಂದ್ಯದ ಸಮಯ ಹಾಗೂ ನೇರಪ್ರಸಾರದ ಮಾಹಿತಿ: ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಮುಖಾಮುಖಿ ಶುಕ್ರವಾರ ಸಂಜೆ 7:30ಕ್ಕೆ ಆರಂಭವಾಗಲಿದೆ. ಸಂಜೆ 7 ಗಂಟೆಗೆ ಪಂದ್ಯದ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಸ್ಟಾರ್‌ಸ್ಪೋರ್ಟ್ಸ್ ವಾಹಿನಿ ನೇರಪ್ರಸಾರ ನಿಡಲಿದ್ದು ಜಿಯೋ ಸಿನಿಮಾದಲ್ಲಿ ಲೈವ್ ಸ್ಟ್ರೀಮಿಂಗ್ ವೀಕ್ಷಿಸುವ ಅವಕಾಶವಿದೆ.

ಪಿಚ್ ರಿಪೋರ್ಟ್: ಈ ಪಂದ್ಯ ಲಕ್ನೋದ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಬ್ಯಾಟರ್‌ಗಳು ಹಾಘೂ ಬೌಲರ್‌ಗಳಿಗೆ ಉತ್ತಮವಾಗಿ ನೆರವು ನೀಡಲಿದ್ದು ಸ್ಪರ್ಧಾತ್ಮಕ ಪಿಚ್ ಆಗಿರುವ ಸಾಧ್ಯತೆಯಿದೆ. ಇಲ್ಲಿ ಬೌಲರ್‌ಗಳಿಗೆ ಸ್ವಿಂಗ್ ನೆರವು ದೊರೆಯುವ ಕಾರಣ ಮೇಲುಗೈ ಸಾಧಿಸುವ ಅವಕಾಶವಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಇಲ್ಲಿನ ಸರಾಸರಿ ಸ್ಕೋರ್ 160 ರನ್.

ಲಕ್ನೋ ಸೂಪರ್ ಜೈಂಟ್ಸ್ ಸಂಭಾವ್ಯ ಆಡುವ ಬಳಗ: ಕ್ವಿಂಟನ್ ಡಿ ಕಾಕ್, ಕೈಲ್ ಮೇಯರ್ಸ್, ಕೆಎಲ್ ರಾಹುಲ್, ನಿಕೋಲಸ್ ಪೂರನ್, ದೀಪಕ್ ಹೂಡಾ, ಕೃನಾಲ್ ಪಾಂಡ್ಯ, ಗೌತಮ್, ಯಶ್ ಠಾಕೂರ್, ಮಾರ್ಕ್ ವುಡ್, ರವಿ ಬಿಷ್ಣೋಯ್, ಅವೇಶ್ ಖಾನ್

ಸನ್‌ರೈಸರ್ಸ್ ಹೈದರಾಬಾದ್ ಸಂಭಾವ್ಯ ಆಡುವ ಬಳಗ: ಅಭಿಷೇಕ್ ಶರ್ಮಾ, ಮಯಾಂಕ್ ಅಗರ್ವಾಲ್, ರಾಹುಲ್ ತ್ರಿಪಾಠಿ, ಐಡೆನ್ ಮಾರ್ಕ್ರಾಮ್, ಹ್ಯಾರಿ ಬ್ರೂಕ್, ಹೆನ್ರಿಚ್ ಕ್ಲಾಸೆನ್, ವಾಷಿಂಗ್ಟನ್ ಸುಂದರ್, ಟಿ ನಟರಾಜನ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್, ಮಾರ್ಕೊ ಜಾನ್ಸೆನ್

Story first published: Thursday, April 6, 2023, 12:26 [IST]
Other articles published on Apr 6, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+