Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

MI vs CSK Preview: ಮುಂಬೈ ಇಂಡಿಯನ್ಸ್ vs ಚೆನ್ನೈ ಸೂಪರ್ ಕಿಂಗ್ಸ್, ಸಂಭಾವ್ಯ ಆಡುವ ಬಳಗ, ಪಿಚ್ ರಿಪೋರ್ಟ್

ಇಂಡಿಯನ್ ಪ್ರೀಮಿಯರ್ ಲೀಗ್‌ ಟೂರ್ನಿಯ ಎರಡು ಪ್ರಮುಖ ತಂಡಗಳಾದ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಈ ಬಾರಿಯ ಆವೃತ್ತಿಯಲ್ಲಿ ಮುಖಾಮುಖಿಯಾಗಲಿ ಸಜ್ಜಾಗಿದೆ. ಈ ಎರಡು ತಂಡಗಳ ನಡುವಿನ ಹಣಾಹಣಿ ಅಭಿಮಾನಗಳಿಗೆ ಕುತೂಹಲ ಕೆರಳಿಸಿದ್ದು ಯಾವ ತಂಡ ಗೆದ್ದು ಮೇಲುಗೈ ಸಾಧಿಸಲಿದೆ ಎಂಬ ಪ್ರಶ್ನೆಗೆ ಕೆಲವೇ ಗಂಟೆಗಳು ಬಾಕಿಯಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಲಿದೆ.

ಶನಿವಾರ ಐಪಿಎಲ್‌ನಲ್ಲಿ ಡಬಲ್ ಹೆಡ್ಡರ್ ಪಂದ್ಯಗಳು ನಡೆಯಲಿದ್ದು ಎರಡನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಸೆಣೆಸಾಟ ನಡೆಸಲಿದೆ. ಮುಂಬೈ ಇಂಡಿಯನ್ಸ್ ಈ ಆವೃತ್ತಿಯಲ್ಲಿ ಕಳಪೆ ಆರಂಭವನ್ನು ಪಡೆದುಕೊಂಡಿದ್ದು ಆರಂಭಿಕ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ ಭಾರೀ ಅಂತರದಿಂದ ಸೋಲು ಕಂಡಿತ್ತು. ಮತ್ತೊಂದೆಡೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಆರಂಭಿಕ ಪಂದ್ಯದಲ್ಲಿ ಸೋಲು ಕಂಡಿದ್ದರು ಕೂಡ ಎರಡನೇ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದು ಗೆಲುವು ಸಾಧಿಸಿದೆ.

IPL 2023, Match 12, MI vs CSK Preview, Predicted Playing 11, Pitch Report, And Weather Forecast in Kannada

ಹೀಗಾಗಿ ಮುಂಬೈ ಇಂಡಿಯನ್ಸ್ ತಂಡ ಮೊದಲ ಗೆಲುವಿಗಾಗಿ ಎದುರು ನೋಡುತ್ತಿದ್ದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗೆಲುವಿನ ಲಯವನ್ನು ಮುಂದುವರಿಸಿಕೊಂಡು ಮುನ್ನುಗ್ಗುವ ವಿಶ್ವಾಸದಲ್ಲಿದೆ. ಮುಂಬೈ ಇಂಡಿಯನ್ಸ್ ತವರು ಕ್ರೀಡಾಂಗಣ ವಾಂಖೆಡೆಯಲ್ಲಿ ಈ ಪಂದ್ಯ ನಡೆಯುತ್ತಿದ್ದು ರೋಹಿತ್ ಪಡೆಗೆ ತವರಿನ ಕ್ರೀಡಾಂಗಣದ ಲಾಭ ದೊರೆಯಲಿದೆ.

ಪಂದ್ಯದ ಮಾಹಿತಿ ಹಾಗೂ ನೇರಪ್ರಸಾರ: ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವಿನ ಪಂದ್ಯ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಆಯೋಜನೆಯಾಗಲಿದೆ. ಟೂರ್ನಿಯ 12ನೇ ಪಂದ್ಯ ಇದಾಗಿದ್ದು ಶನಿವಾರ ಸಂಜೆ 7:30ಕ್ಕೆ ಪಂದ್ಯ ಆರಂಭವಾಗಲಿದ್ದು 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ.

ಪಿಚ್ ರಿಪೋರ್ಟ್ ಹೀಗಿದೆ: ಮುಂಬೈನ ವಾಂಖೆಡೆ ಕ್ರೀಡಾಂಗಣದ ಪಿಚ್ ಬ್ಯಾಟರ್‌ಗಳಿಗೆ ಹೇಳಿಮಾಡಿಸಿದ ತಾಣ. ಚೆಂಡು ಸಲೀಸಾಗಿ ಬ್ಯಾಟ್‌ಗೆ ಬರಲಿದ್ದು ಬ್ಯಾಟರ್‌ಗಳು ಆರಂಭದಿಂದಲೇ ಆಕ್ರಮಣಕಾರಿ ಆಟಕ್ಕೆ ಇಳಿಯಬಹುದು. ಯಾವ ತಂಡದ ಬೌಲಿಂಗ್ ವಿಣಾಗ ಕಡಿಮೆ ತಪ್ಪುಗಳನ್ನು ಮಾಡುತ್ತದೆಯೇ ಆ ತಂಡ ಈ ಪಂದ್ಯದಲ್ಲಿ ಮೇಲುಗೈ ಸಾಧಿಸಲು ಕಾರಣವಾಗಲಿದೆ.
ಹವಾಮಾನ ವರದಿ: ಇನ್ನು ಹವಾಮಾನ ವರದಿಯ ಪಂದ್ಯಕ್ಕೆ ಪೂರಕವಾಗಿದ್ದು ಮಳೆಯ ಆತಂಕವಿಲ್ಲ. ಪಂದ್ಯದ ಅವಧಿಯಲ್ಲಿ 25-35 ಡಿಗ್ರಿ ಸೆಲ್ಸಿಯಸ್‌ನಷ್ಟು ಉಷ್ಣಾಂಶವಿರಲಿದೆ.

ಸಂಭಾವ್ಯ ಆಡುವ ಬಳಗ ಹೀಗಿದೆ
ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಕ್ಯಾಮೆರೂನ್ ಗ್ರೀನ್, ತಿಲಕ್ ವರ್ಮಾ, ಟಿಮ್ ಡೇವಿಡ್, ನೆಹಾಲ್ ವಧೇರಾ, ಹೃತಿಕ್ ಶೋಕೀನ್, ಪಿಯೂಷ್ ಚಾವ್ಲಾ, ಜೋಫ್ರಾ ಆರ್ಚರ್, ಅರ್ಷದ್ ಖಾನ್

ಚೆನ್ನೈ ಸೂಪರ್ ಕಿಂಗ್ಸ್ ಡೆವೊನ್ ಕಾನ್ವೆ, ಋತುರಾಜ್ ಗಾಯಕ್ವಾಡ್, ಮೊಯಿನ್ ಅಲಿ, ಬೆನ್ ಸ್ಟೋಕ್ಸ್, ಅಂಬಾಟಿ ರಾಯುಡು, ರವೀಂದ್ರ ಜಡೇಜಾ, ಎಂಎಸ್ ಧೋನಿ (ನಾಯಕ & ವಿಕೆಟ್ ಕೀಪರ್), ಶಿವಂ ದುಬೆ, ಮಿಚೆಲ್ ಸ್ಯಾಂಟ್ನರ್, ದೀಪಕ್ ಚಾಹರ್, ಆರ್ ಎಸ್ ಹಂಗರ್ಗೇಕರ್

Story first published: Friday, April 7, 2023, 15:44 [IST]
Other articles published on Apr 7, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+