Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

DC vs MI: ಡೆಲ್ಲಿ vs ಮುಂಬೈ ಸೆಣೆಸಾಟದಲ್ಲಿ ಯಾರಿಗೆ ಮೊದಲ ಗೆಲುವು? ಸಂಭಾವ್ಯ XI, ಇತರ ಮಾಹಿತಿ

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಮಂಗಳವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ತಂಡ ಸೆಣೆಸಾಟ ನಡೆಸಲಿದೆ. ಈ ಎರಡು ತಂಡಗಳು ಕೂಡ ಸತತ ಸೋಲಿನ ರುಚಿ ಕಂಡಿದ್ದು ಮೊದಲ ಗೆಲುವಿಗಾಗಿ ಹಂಬಲಿಸುತ್ತಿದೆ. ಈ ಮುಖಾಮುಖಿಯಲ್ಲಿ ಯಾವ ತಂಡ ಮೊದಲ ಗೆಲುವು ಸಾಧಿಸಲಿದೆ ಎಂಬುದು ಕುತೂಹಲ ಮೂಡಿಸಿದೆ.

ಮುಂಬೈ ಇಂಡಿಯನ್ಸ್ ಈಗಾಗಲೇ ಎರಡು ಪಂದ್ಯಗಳನ್ನು ಆಡಿದ್ದು ಎರಡರಲ್ಲಿಯೂ ಸೋಲು ಕಂಡಿದೆ. ಎರಡು ಪಂದ್ಯಗಳಲ್ಲಿಯೂ ಮುಂಬೈ ಇಂಡಿಯನ್ಸ್ ತಂಡ ಯಾವುದೇ ಪೈಪೋಟಿ ನೀಡಲು ಸಾಧ್ಯವಾಗದೆ ಸೋಲು ಕಂಡಿರುವುದು ಅಭಿಮಾನಿಗಳ ನಿರಾಸೆ ಹೆಚ್ಚಿಸಿದೆ. ನಾಯಕ ರೋಹಿತ್ ಶರ್ಮಾ, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ ಸೇರಿದಂತೆ ಸ್ಟಾರ್ ಆಟಗಾರರು ವೈಫಲ್ಯ ಅನುಭವಿಸುತ್ತಿದ್ದು ಬೌಲಿಂಗ್ ವಿಭಾಗ ಕೂಡ ದುರ್ಬಲವಾಗಿ ತೋರುತ್ತಿದೆ.

IPL 2023, Match 16, DC vs MI Preview, Predicted Playing 11, Pitch Report, And Weather Forecast

ಇತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಥಿತಿ ಕೂಡ ಭಿನ್ನವಾಗಿಲ್ಲ. ಡಿಸಿ ತಂಡ ಆಡಿದ ಮೂರು ಪಂದ್ಯಗಳಲ್ಲಿ ಮೂರರಲ್ಲಿಒಯೂ ಹೀನಾಯ ಸೋಲು ಕಂಡಿದೆ. ಡಿಸಿ ಪರವಾಗಿ ಕೂಡ ಸ್ಟಾರ್ ಆಟಗಾರರು ಮಿಂಚಲು ವಿಫಲವಾಗುತ್ತಿದ್ದು ನಾಯಕ ಡೇವಿಡ್ ವಾರ್ನರ್ ಚಿಂತೆ ಹೆಚ್ಚಿಸಿದೆ. ಹೀಗಾಗಿ ಮಂಗಳವಾರದ ಪಂದ್ಯದಲ್ಲಿ ಈ ಹಿಂದಿನ ಪಂದ್ಯಗಳಲ್ಲಿ ಮಾಡಿದ ತಪ್ಪನ್ನು ತಿದ್ದಿಕೊಂಡು ಕಣಕ್ಕಿಳಿಯುವ ವಿಶ್ವಾಸದಲ್ಲಿದೆ ಡಿಸಿ ತಂಡ.

ಪಂದ್ಯದ ಮಾಹಿತಿ ಹಾಗೂ ನೇರ ಪ್ರಸಾರದ ವಿವರ: ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ವಿರುದ್ಧದ ಈ ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಏಪ್ರಿಲ್ 11 ಮಂಗಳವಾರದಂದು ಆಯೋಜನೆಯಾಗಲಿದೆ. ಸಂಜೆ 7:30ಕ್ಕೆ ಈ ಪಂದ್ಯ ಆರಂಭವಾಗಲಿದ್ದು 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಸ್ಟಾರ್ ಸ್ಪೋರ್ಟ್ಸ್ ವಾಹಿನಿ ಪಂದ್ಯದ ನೇರಪ್ರಸಾರ ಮಾಡಿದರೆ ಜಿಯೋ ಸಿನಿಮಾಸದಲ್ಲಿ ಲೈವ್‌ಸ್ಟ್ರೀಮಿಂಗ್ ಮೂಲಕ ವೀಕ್ಷಿಸುವ ಅವಕಾಶವಿದೆ.

ಪಿಚ್ ರಿಪೋರ್ಟ್: ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣ ಸಾಮಾನ್ಯವಾಗಿ ನಿಧಾನಗತಿಯ ಗುಣಗಳನ್ನು ಹೊಂದಿದೆ. ಆದರೆ ಇಲ್ಲಿನ ಬೌಂಡರಿಗಳು ಹೆಚ್ಚು ದೂರವನ್ನು ಹೊಂದಿಲ್ಲ ಹಾಗೂ ಔಟ್‌ಫೀಲ್ಡ್ ವೇಗವಾಗಿದೆ. ನಿಧಾನಗತಿಯ ಪಿಚ್ ಆಗಿರುವ ಕಾರಣ ಇಲ್ಲಿ ಸ್ಪಿನ್ನರ್‌ಗಳ ಪಾತ್ರ ಮಹತ್ವದ್ದಾಗಿರುತ್ತದೆ. ಇನ್ನು ಮೊದಲು ಬ್ಯಾಟಿಂಗ್ ಮಾಡಿದ ತಂಡ 170ಕ್ಕಿಂತ ಅಧಿಕ ರನ್‌ಗಳಿಸಿದರೆ ಎದುರಾಳಿಗೆ ಸವಾಲಾಗಲಿದೆ. ಇನ್ನು ಈ ಕ್ರೀಡಾಂಗಣದಲ್ಲಿ 78 ಐಪಿಎಲ್ ಪಂದ್ಯಗಳು ಆಯೋಜನೆಯಾಗಿದ್ದು 43 ಬಾರಿ ರನ್ ಬೆನ್ನಟ್ಟಿದ ತಂಡ ಗೆದ್ದಿದ್ದರೆ 35 ಬಾರಿ ಮೊದಲು ಬ್ಯಾಟಿಂಗ್ ಮಾಡಿದ ತಂಡ ಗೆಲುವು ಸಾಧಿಸಿದೆ.

ಇತ್ತಂಡಗಳ ಸಂಭಾವ್ಯ ಆಡುವ ಬಳಗ
ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ಕ್ಯಾಮರೂನ್ ಗ್ರೀನ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಟಿಮ್ ಡೇವಿಡ್, ಟ್ರಿಸ್ಟಾನ್ ಸ್ಟಬ್ಸ್, ಅರ್ಷದ್ ಖಾನ್, ಹೃತಿಕ್ ಶೋಕೀನ್, ಪಿಯೂಷ್ ಚಾವ್ಲಾ, ಜೇಸನ್ ಬೆಹ್ರೆಂಡಾರ್ಫ್

ಡೆಲ್ಲಿ ಕ್ಯಾಪಿಟಲ್ಸ್: ಡೇವಿಡ್ ವಾರ್ನರ್ (ನಾಯಕ), ಮನೀಶ್ ಪಾಂಡೆ, ರಿಲೀ ರೊಸೊ, ರೋವ್ಮನ್ ಪೊವೆಲ್, ಲಲಿತ್ ಯಾದವ್, ಅಕ್ಷರ್ ಪಟೇಲ್, ಅಭಿಷೇಕ್ ಪೊರೆಲ್ (ವಿಕೆಟ್ ಕೀಪರ್), ಅನ್ರಿಕ್ ನಾರ್ಕಿಯಾ, ಖಲೀಲ್ ಅಹ್ಮದ್, ಕುಲದೀಪ್ ಯಾದವ್, ಮುಖೇಶ್ ಕುಮಾರ್

Story first published: Monday, April 10, 2023, 13:06 [IST]
Other articles published on Apr 10, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+