CSK vs RR: ಚೆನ್ನೈ vs ರಾಜಸ್ಥಾನ್ ಮುಖಾಮುಖಿ: ಪ್ರಿವ್ಯೂ, ಸಂಭಾವ್ಯ XI, ಪಿಚ್ ರಿಪೋರ್ಟ್
ಬುಧವಾರ ಐಪಿಎಲ್‌ನಲ್ಲಿ ಮತ್ತೊಂದು ದೊಡ್ಡ ಸೆಣೆಸಾಟ ನಡೆಯಲಿದೆ. ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಎರಡು ತಂಡಗಳು ಕೂಡ ಉತ್ತಮ ಪ್ರದರ್ಶನ ನೀಡುತ್ತಿದ್ದು ಪೈಪೋಟಿಯ ಪ್ರದರ್ಶನವನ್ನು ನಿರೀಕ್ಷಿಸಲಾಗುತ್ತಿದೆ. ಎರಡು ತಂಡಗಳು ಕೂಡ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದು ಆಡಿರುವ ಮೂರು ಪಂದ್ಯಗಳಲ್ಲಿ ತಲಾ ಎರಡು ಗೆಲುವು ಹಾಗು ಒಂದು ಸೋಲು ಕಂಡಿದೆ.
ರಾಜಸ್ಥಾನ್ ರಾಯಲ್ಸ್ ತಂಡ ಈ ಬಾರಿಯ ಆವೃತ್ತಿಯಲ್ಲಿ ಆಡಿರುವ ಮೂರು ಪಂದ್ಯಗಳಲ್ಲಿಯೂ ಅದ್ಭುತ ಪ್ರದರ್ಶನ ನೀಡಿದೆ. ಮೊದಲ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 72 ರನ್‌ಗಳ ಅಂತರದ ಬೃಹತ್ ಗೆಲುವು ಸಾಧಿಸಿದ ಬಳಿಕ ಪಂಜಾಬ್ ಕಿಂಗ್ಸ್ ವಿರುದ್ಧ 5 ರನ್‌ಗಳ ಅಂತರದ ರೋಚಕ ಸೋಲು ಕಂಡಿತ್ತು. ನಂತರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಭರ್ಜರಿ ಪ್ರದರ್ಶನ ನೀಡಿದ ಆರ್‌ಆರ್ ತಂಡ 57 ರನ್‌ಗಳ ಬೃಹತ್ ಅಂತರದಿಂದ ಗೆದ್ದು ಗೆಲುವಿನ ಲಯಕ್ಕೆ ಮರಳಿದೆ.

ಇತ್ತ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಜೈಂಟ್ಸ್ ವಿರುದ್ಧ ಸೋಲು ಅನುಭವಿಸಿದರು ಕೂಡ ಅದಾದ ಬಳಿಕ ನಡೆದ ಎರಡು ಪಂದ್ಯದಲ್ಲಿಯೂ ಅಮೋಘ ಪ್ರದರ್ಶನ ನೀಡಿದ್ದು ಸತತ ಎರಡು ಗೆಲುವು ಸಾಧಿಸಿದೆ. ತಂಡದ ಹೆಚ್ಚಿನ ಆಟಗಾರರು ಉತ್ತಮ ಲಯದಲ್ಲಿದ್ದು ಧೋನಿ ಪಡೆ ಆತ್ಮವಿಶ್ವಾಸದಿಂದ ಮುಂದಿನ ಪಂದ್ಯಕ್ಕೆ ಸಜ್ಜಾಗುತ್ತಿದೆ.
ಪಂದ್ಯದ ಮಾಹಿತಿ ಹಾಗೂ ನೇರ ಪ್ರಸಾರದ ವಿವರ: ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಈ ಪಂದ್ಯ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಏಪ್ರಿಲ್ 12 ಬುಧವಾರದಂದು ಆಯೋಜನೆಯಾಗಲಿದೆ. ಸಂಜೆ 7:30ಕ್ಕೆ ಈ ಪಂದ್ಯ ಆರಂಭವಾಗಲಿದ್ದು 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಸ್ಟಾರ್ ಸ್ಪೋರ್ಟ್ಸ್ ವಾಹಿನಿ ಪಂದ್ಯದ ನೇರಪ್ರಸಾರ ಮಾಡಿದರೆ ಜಿಯೋ ಸಿನಿಮಾಸದಲ್ಲಿ ಲೈವ್‌ಸ್ಟ್ರೀಮಿಂಗ್ ಮೂಲಕ ವೀಕ್ಷಿಸುವ ಅವಕಾಶವಿದೆ.
ಪಿಚ್ ರಿಪೋರ್ಟ್: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣ ಸಾಮಾನ್ಯವಾಗಿ ಸ್ಪಿನ್ನರ್‌ಗಳಿಗೆ ಹೆಚ್ಚಿನ ನೆರವು ನಿಡುವ ಪಿಚ್ ಆಗಿದ್ದು ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗದ ಮಧ್ಯೆ ಅತ್ಯುತ್ತಮ ಸ್ಪರ್ಧೆಗೆ ಸಹಕಾರಿಯಾಗುವಂತಾ ಪಿಚ್ ಆಗಿದೆ. ಆದರೆ ಇಲ್ಲಿ ನಡೆದ ಎಲ್‌ಎಸ್‌ಜಿ ವಿರುದ್ಧದ ಪಂದ್ಯದಲ್ಲಿ ರನ್ ಮಳೆಯೇ ಹರಿದಿದ್ದು ಕುತೂಹಲ ಮೂಡಿಸಿದೆ. ಆ ಪಂದ್ಯಗಳಲ್ಲಿ ಎರಡು ತಂಡಗಳು ಒಟ್ಟು 422 ರನ್‌ಗಳನ್ನು ಗಳಿಸಿದ್ದವು. ಕಳೆದ ಐದು ಪಂದ್ಯಗಳಲ್ಲಿ ಮೊದಲ ಇನ್ನಿಂಗ್ಸ್‌ನಲ್ಲಿ ಇಲ್ಲಿನ ಸರಾಸರಿ ಸ್ಕೋರ್ 158 ರನ್ ಆಗಿದೆ.
ಚೆನ್ನೈ ಸೂಪರ್ ಕಿಂಗ್ಸ್ ಸಂಭಾವ್ಯ ಆಡುವ ಬಳಗ: ಋತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಅಜಿಂಕ್ಯ ರಹಾನೆ, ಮೊಹಮ್ಮದ್ ಅಲಿ, ರವೀಂದ್ರ ಜಡೇಜಾ, ಶಿವಂ ದುಬೆ, ಮಿಚೆಲ್ ಸ್ಯಾಂಟ್ನರ್, ಎಸ್‌ಎಸ್‌ಬಿ ಮಗಲ, ಎಂಎಸ್ ಧೋನಿ(ನಾಯಕ), ಆರ್‌ಎಸ್ ಹಂಗರ್ಗೇಕರ್, ತುಷಾರ್ ದೇಶಪಾಂಡೆ
ರಾಜಸ್ಥಾನ್ ರಾಯಲ್ಸ್ ಸಂಭಾವ್ಯ ಆಡುವ ಬಳಗ: ಯಶಸ್ವಿ ಜೈಸ್ವಾಲ್, ರಿಯಾನ್ ಪರಾಗ್, ಶಿಮ್ರಾನ್ ಹೆಟ್ಮೆಯರ್, ರವಿಚಂದ್ರನ್ ಅಶ್ವಿನ್, ಜೇಸನ್ ಹೋಲ್ಡರ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್(ನಾಯಕ), ಡಿಸಿ ಜುರೆಲ್, ಟ್ರೆಂಟ್ ಬೋಲ್ಟ್, ಯುಜ್ವೇಂದ್ರ ಚಾಹಲ್, ಸಂದೀಪ್ ಶರ್ಮಾ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications