For Quick Alerts
ALLOW NOTIFICATIONS  
For Daily Alerts
 

PBKS vs GT: ಗುಜರಾತ್ ಟೈಟನ್ಸ್ ಸವಾಲು ಮೆಟ್ಟಿ ನಿಲ್ಲಲಿದೆಯಾ ಪಂಜಾಬ್ ಕಿಂಗ್ಸ್: ಸಂಭಾವ್ಯ XI, ಪಿಚ್ ರಿಪೋರ್ಟ್

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಗುರುವಾರ ಮುಖಾಮುಖಿಯಾಗಲಿದೆ. ಶಿಖರ್ ಧವನ್ ನೇತೃತ್ವದ ಪಂಜಾಬ್ ಕಿಂಗ್ಸ್ ತಂಡ ಈ ಬಾರಿಯ ಐಪಿಎಲ್‌ನಲ್ಲಿ ಉತ್ತಮ ಆರಂಭವನ್ನು ಪಡೆದುಕೊಂಡಿದ್ದು ಆತ್ಮವಿಶ್ವಾಸದಲ್ಲಿದೆ. ರಾಜಸ್ಥಾನ್ ರಾಯಲ್ಸ್ ತಂಡ ಕೂಡ ಅದ್ಭುತ ಪ್ರದರ್ಶನದೊಂದಿಗೆ ಮಿಂಚುತ್ತಿದ್ದು ಮತ್ತೊಂದು ಗೆಲುವಿನ ಮೇಲೆ ಕಣ್ಣಿಟ್ಟಿದೆ.

ಸೋಲು ಗೆಲುವಿನ ಲೆಕ್ಕಾಚಾರದಲ್ಲಿ ಈ ಬಾರಿಯ ಆವೃತ್ತಿಯಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ ತಂಡಗಳು ಸಮಬಲದಲ್ಲಿದೆ. ಎರಡು ತಂಡಗಳು ಕೂಡ ಆಡಿರುವ ಮೂರು ಪಂದ್ಯಗಳ ಪೈಕಿ ಎರಡು ಗೆಲುವು ಸಾಧಿಸಿದ್ದು ಒಂದು ಸೋಲಿನ ರುಚಿ ಕಂಡಿದೆ. ಆದರೆ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ತಂಡ ನೆಟ್ ರನ್‌ರೇಟ್‌ನಲ್ಲಿ ಉತ್ತಮ ಸ್ಥಿತಿಯಲ್ಲಿದ್ದು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಇತ್ತ ಪಂಜಾಬ್ ಕಿಂಗ್ಸ್ ತಂಡ ಅಂಕಪಟ್ಟಿಯಲ್ಲಿ ಹಿನ್ನಡೆ ಅನುಭವಿಸಿದ್ದು 6ನೇ ಸ್ಥಾನದಲ್ಲಿದೆ.

IPL 2023, Match 18, PBKS vs GT Preview, Predicted Playing 11, Pitch Report, And Weather Forecast

ಪಂದ್ಯದ ಮಾಹಿತಿ ಹಾಗೂ ನೇರ ಪ್ರಸಾರದ ವಿವರ: ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ ವಿರುದ್ಧದ ಈ ಪಂದ್ಯ ಪಂಜಾಬ್ ಕ್ರಿಕೆಟ್ ಅಸೊಸಿಯೇಶನ್ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ಕ್ರೀಡಾಂಗಣದಲ್ಲಿ ಏಪ್ರಿಲ್ 13 ಗುರುವಾರದಂದು ಆಯೋಜನೆಯಾಗಲಿದೆ. ಸಂಜೆ 7:30ಕ್ಕೆ ಈ ಪಂದ್ಯ ಆರಂಭವಾಗಲಿದ್ದು 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಸ್ಟಾರ್ ಸ್ಪೋರ್ಟ್ಸ್ ವಾಹಿನಿ ಪಂದ್ಯದ ನೇರಪ್ರಸಾರ ಮಾಡಿದರೆ ಜಿಯೋ ಸಿನಿಮಾಸದಲ್ಲಿ ಲೈವ್‌ಸ್ಟ್ರೀಮಿಂಗ್ ಮೂಲಕ ವೀಕ್ಷಿಸುವ ಅವಕಾಶವಿದೆ.

ಪಿಚ್ ರಿಪೋರ್ಟ್: ಈ ಪಂದ್ಯ ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೊಸಿಯೇಶನ್ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ಈ ಎರಡು ತಂಡಗಳು ಮುಖಾಮುಖಿಯಾಗಿದೆ. ಇಲ್ಲಿನ ಪಿಚ್ ಸಾಮಾನ್ಯವಾಗಿ ಸಮತೋಲಿತ ಪಿಚ್ ಎನಿಸಿಕೊಂಡಿದೆ. ಆರಂಭಿಕ ಹಂತದಲ್ಲಿ ಬೌಲರ್‌ಗಳಿಗೆ ಪಿಚ್ ಉತ್ತಮ ನೆರವು ನೀಡಲಿದೆ. ಬ್ಯಾಟರ್‌ಗಳು ಸೆನ್ ಆದ ಬಳಿಕ ಇಲ್ಲಿ ರನ್‌ಗಳಿಸುವುದು ಸುಲಭವಾಗಲಿದೆ.

ಹವಾಮಾನ ವರದಿ ಹೀಗಿದೆ: ಪಂದ್ಯದ ದಿನ ಮೊಹಾಲಿಯಲ್ಲಿ ಮಳೆಯಾಗುವ ಯಾವುದೇ ಮುನ್ಸೂಚನೆಯಿಲ್ಲ. ಹಾಗಾಗಿ ಸಂಪೂರ್ಣ ಪಂದ್ಯ ನಿರಾತಂಕವಾಗಿ ನಡೆಯಲಿದೆ. 21 ಡಿಗ್ರಿಯಿಂದ 37 ಡಿಗ್ರಿಯವರೆಗೆ ವಾತಾವರಣದ ಉಷ್ಣಾಂಶವಿರಲಿದೆ.

ಪಂಜಾಬ್ ಕಿಂಗ್ಸ್ ಸಂಭಾವ್ಯ ಆಡುವ ಬಳಗ: ಶಿಖರ್ ಧವನ್ (ನಾಯಕ), ಪ್ರಭಾಸಿಮ್ರಾನ್ ಸಿಂಗ್, ಮ್ಯಾಥ್ಯೂ ಶಾರ್ಟ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಶಾರುಖ್ ಖಾನ್, ಸ್ಯಾಮ್ ಕರನ್, ನಥನ್ ಎಲ್ಲಿಸ್, ಮೋಹಿತ್ ರಥಿ, ಹರ್‌ಪ್ರೀತ್ ಬ್ರಾರ್, ರಾಹುಲ್ ಚಾಹರ್, ಅರ್ಷ್‌ದೀಪ್ ಸಿಂಗ್

ಗುಜರಾತ್ ಟೈಟನ್ಸ್ ಸಂಭಾವ್ಯ ಆಡುವ ಬಳಗ: ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಶುಬ್ಮನ್ ಗಿಲ್, ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ (ನಾಯಕ), ವಿಜಯ್ ಶಂಕರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮೊಹಮ್ಮದ್ ಶಮಿ, ಅಲ್ಜಾರಿ ಜೋಸೆಫ್, ಯಶ್ ದಯಾಲ್

Story first published: Wednesday, April 12, 2023, 15:00 [IST]
Other articles published on Apr 12, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+