Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2023, ಕೆಕೆಆರ್‌ಗೆ ಸವಾಲೊಡ್ಡಿದ ಸನ್‌ರೈಸರ್ಸ್: ಸಂಭಾವ್ಯ ಆಡುವ ಬಳಗ, ಪಿಚ್ ರಿಪೋರ್ಟ್

ಐಪಿಎಲ್‌ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಶುಕ್ರವಾರ ಮುಖಾಮುಖಿಯಾಗಲಿದೆ. ಆರಂಭಿಕ ಪಂದ್ಯದ ಸೋಲಿನ ಬಳಿಕ ಭರ್ಜರಿಯಾಗಿ ಕಮ್‌ಬ್ಯಾಕ್ ಮಾಡಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಸತತ ಎರಡು ಗೆಲುವು ಸಾಧಿಸಿ ಆತ್ಮವಿಶ್ವಾಸದಲ್ಲಿದೆ. ಹೀಗಾಗಿ ಮತ್ತಿಂದು ಗೆಲುವಿನ ಮೇಲೆ ಕಣ್ಣಿಟ್ಟಿದ್ದು ಅಂಕಪಟ್ಟಿಯಲ್ಲಿಯೂ ಪ್ರಗತಿ ಸಾಧಿಸುವ ಗುರಿಯಿಟ್ಟುಕೊಂಡಿದೆ.

ಈ ಬಾರಿಯ ಐಪಿಎಲ್‌ನ ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸೋಲು ಕಂಡಿದ್ದ ಕೆಕೆಆರ್ ಬಳಿಕ ಆರ್‌ಸಿಬಿ ತಂಡದ ವಿರುದ್ಧ ಗೆದ್ದು ಬೀಗಿತ್ತು. ಬಳಿಕ ಹಾಳಿ ಚಾಂಪಿಯನ್ ಗುಜರಾತ್ ಟೈಟನ್ಸ್ ವಿರುದ್ಧ ತವರಿನಾಚೆಗಿನ ಪಂದ್ಯದಲ್ಲಿ ಗೆದ್ದು ಬೀಗಿದ ಕೆಕೆಆರ್ ತನ್ನ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ. ಹೀಗಾಗಿ ಅಂಕಪಟ್ಟಿಯಲ್ಲಿ ಕೆಕೆಆರ್ ತಂಡ ಸದ್ಯ 3ನೇ ಸ್ಥಾನವನ್ನು ಪಡೆದುಕೊಂಡಿದೆ.

IPL 2023, Match 19, KKR vs SRH Preview, Predicted Playing 11, Pitch Report, And Weather Forecast

ಇತ್ತ ಸನ್‌ರೈಸರ್ಸ್ ಹೈದರಾಬಾದ್ ತಂಡ ಆರಂಬಿಕ ಎರಡು ಪಂದ್ಯಗಳಲ್ಲಿ ಸೋಲು ಅನುಭವಿಸಿ ಭಾರೀ ಹಿನ್ನಡೆಯಲ್ಲಿತ್ತು. ಆದರೆ ಈ ಹಿಂದಿನ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಿದ್ದು ಆ ಪಂದ್ಯದಲ್ಲಿ ಎಸ್‌ಆರ್‌ಹೆಚ್ ತಂಡ 8 ವಿಕೆಟ್‌ಗಳ ಅಂತರದ ಭಾರೀ ಗೆಲುವು ಸಾಧಿಸಿದೆ. ಈ ಮೂಲಕ ಟೂರ್ನಿಯಲ್ಲಿ ಮೊದಲ ಗೆಲುವು ಸಾಧಿಸಿದ್ದು ಈ ಗೆಲುವಿನ ಲಯವನ್ನು ಮುಂದುವರಿಸಿಕೊಂಡು ಹೋಗುವ ವಿಶ್ವಾಸದಲ್ಲಿದೆ.

ಪಂದ್ಯದ ವಿವರ ಹಾಗೂ ನೇರ ಪ್ರಸಾರದ ಮಾಹಿತಿ

ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಈ ಪಂದ್ಯ ಕೊಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ಏಪ್ರಿಲ್ 14 ಶುಕ್ರವಾರದಂದು ಆಯೋಜನೆಯಾಗಲಿದೆ. ಸಂಜೆ 7:30ಕ್ಕೆ ಈ ಪಂದ್ಯ ಆರಂಭವಾಗಲಿದ್ದು 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಸ್ಟಾರ್ ಸ್ಪೋರ್ಟ್ಸ್ ವಾಹಿನಿ ಪಂದ್ಯದ ನೇರಪ್ರಸಾರ ಮಾಡಿದರೆ ಜಿಯೋ ಸಿನಿಮಾದಲ್ಲಿ ಲೈವ್‌ಸ್ಟ್ರೀಮಿಂಗ್ ಮೂಲಕ ವೀಕ್ಷಿಸುವ ಅವಕಾಶವಿದೆ.

ಪಿಚ್ ರಿಪೋರ್ಟ್

ಕೊಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣ ಕೆಕೆಆರ್ ತಂಡದ ತವರು ಮೈದಾನವಾಗಿದ್ದು 79 ಐಪಿಎಲ್ ಪಂದ್ಯಗಳು ನಡೆದಿದೆ. ಸಾಮಾನ್ಯವಾಗಿ ಇಲ್ಲಿ ಬ್ಯಾಟಿಂಗ್ ಸ್ನೇಹಿ ಪಿಚ್ ಆಗಿದ್ದು ಹೈಸ್ಕೋರಿಂಗ್ ಮ್ಯಾಚ್‌ಗಳೂ ಹೆಚ್ಚಾಗಿ ನಡೆದಿದೆ. ಕ್ರೀಡಾಂಗಣ ಕೂಡ ಸಣ್ಣದಾಗಿರುವ ಕಾರಣ 180ಕ್ಕಿಂತ ಕಡಿಮೆ ಮೊತ್ತವನ್ನು ಇಲ್ಲಿ ರಕ್ಷಿಸಿಕೊಳ್ಳುವುದು ದೊಡ್ಡ ಸವಾಲಾಗಿರಲಿದೆ. ಹಾಗಾಗಿ ಇಲ್ಲಿ ಟಾಸ್ ಗೆದ್ದ ತಂಡ ಆರಂಭದಲ್ಲಿ ಬೌಲಿಂಗ್ ನಡೆಸುವ ತೀರ್ಮಾನ ತೆಗೆದುಕೊಳ್ಳುವುದು ಸಹಜ.

ಸನ್‌ರೈಸರ್ಸ್ ಹೈದರಾಬಾದ್ ಸಂಭಾವ್ಯ ಆಡುವ ಬಳಗ

ಮಯಾಂಕ್ ಅಗರ್ವಾಲ್, ಹ್ಯಾರಿ ಬ್ರೂಕ್, ರಾಹುಲ್ ತ್ರಿಪಾಠಿ, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಮಾರ್ಕೊ ಜಾನ್ಸೆನ್, ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಾಂಡೆ, ಉಮ್ರಾನ್ ಮಲಿಕ್, ಟಿ ನಟರಾಜನ್

ಕೊಲ್ಕತ್ತಾ ನೈಟ್ ರೈಡರ್ಸ್ ಸಂಭಾವ್ಯ ಆಡುವ ಬಳಗ

ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಎನ್ ಜಗದೀಸನ್, ನಿತೀಶ್ ರಾಣಾ (ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ಸುನಿಲ್ ನರೈನ್, ಶಾರ್ದೂಲ್ ಠಾಕೂರ್, ಸುಯಾಶ್ ಶರ್ಮಾ, ಲಾಕಿ ಫರ್ಗುಸನ್, ಉಮೇಶ್ ಯಾದವ್, ವರುಣ್ ಚಕ್ರವರ್ತಿ

Story first published: Thursday, April 13, 2023, 14:56 [IST]
Other articles published on Apr 13, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+