IPL 2023, ಲಕ್ನೋ ಸೂಪರ್ ಜೈಂಟ್ಸ್ ಅಗ್ನಿ ಪರೀಕ್ಷೆ ಗೆಲ್ಲಲಿದೆಯಾ ಪಂಜಾಬ್ ಕಿಂಗ್ಸ್?: ಸಂಭಾವ್ಯ ಆಡುವ ಬಳಗ, ಪಿಚ್ ರಿಪೋರ್ಟ್
ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಏಪ್ರಿಲ್ 15 ಶನಿವಾರದಂದು ಎರಡು ಕದನಗಳು ನಡೆಯಲಿದೆ. ಮೊದಲ ಮುಖಾಮುಖಿಯಲ್ಲಿ ಆರ್‌ಸಿಬಿ ತಂಡವನ್ನು ಡೆಲ್ಲಿ ಕ್ಯಾಪಿಟಲ್ಸ್ ಎದುರಿಸಿದರೆ ಎರಡನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಲಕ್ನೋದ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಲಕ್ನೂ ಸೂಪರ್ ಜೈಂಟ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳ ನಡುವಿನ ಪಂದ್ಯದ ಸಂಪೂರ್ಣ ಮಾಹಿತಿಯನ್ನು ನೋಡೋಣ.
ಲಕ್ನೋ ಸೂಪರ್‌ಜೈಂಟ್ಸ್ ತಂಡ ಈ ಬಾರಿಯ ಐಪಿಎಲ್‌ನಲ್ಲಿಯೂ ಅದ್ಭುತ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದೆ. ಆಡಿರುವ ನಾಲ್ಕು ಪಂದ್ಯಗಳ ಪೈಕಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಮೂರು ಪಂದ್ಯಗಳಲ್ಲಿ ಗೆದ್ದು ಬೀಗಿದ್ದು ಒಂದರಲ್ಲಿ ಮಾತ್ರವೇ ಸೋಲು ಕಂಡಿದೆ. ಹೀಗಾಗಿ ಅಂಕಪಟ್ಟಿಯಲ್ಲಿ ಎಲ್‌ಎಸ್‌ಜಿ ತಂಡ ಉತ್ತಮ ಸ್ಥಿತಿಯಲ್ಲಿದ್ದು ಎರಡನೇ ಸ್ಥಾನದಲ್ಲಿ ಮುಂದುವರಿದಿದೆ. ಈ ಸ್ಥಾನವನ್ನು ಮತ್ತಷ್ಟು ಭದ್ರಪಡಿಸುವುದು ಕೆಎಲ್ ರಾಹುಲ್ ಬಳಗದ ಇರಾದೆಯಾಗಿದೆ.

ಇತ್ತ ಪಂಜಾಬ್ ಕಿಂಗ್ಸ್ ತಂಡ ಶಿಖರ್ ಧವನ್ ನಾಯಕತ್ವದಲ್ಲಿ ಅದ್ಭುತ ಆರಂಬ ಪಡೆದಿದ್ದು ಆರಂಭಿಕ ಎರಡು ಪಂದ್ಯಗಳಲ್ಲಿ ಭರ್ಜರಿ ಗೆಲುವು ಸಾಧಿಸಿತ್ತು. ಆದರೆ ನಂತರದ ಎರಡು ಪಂದ್ಯಗಳಲ್ಲಿ ಸತತ ಸೋಲು ಅನುಭವಿಸಿದ್ದು ಹಿನ್ನಡೆ ಅನುಭವಿಸಿದೆ. ಅದರಲ್ಲೂ ಗುಜರಾತ್ ಟೈನಟ್ಸ್ ವಿರುದ್ಧದ ಪಂದ್ಯದ ಅಂತಿಮ ಹಂತದಲ್ಲಿ ಪಂಜಾಬ್ ಕಿಂಗ್ಸ್ ತಂಡದ ಕೈತಪ್ಪಿದ್ದು ತಂಡಕ್ಕೆ ನಿರಾಸೆ ಮೂಡಿಸಿರುವುದರಲ್ಲಿ ಅನುಮಾನವಿಲ್ಲ. ಹೀಗಾಗಿ ಪಂಜಾಬ್ ಕಿಂಗ್ಸ್ ತಂಡ ಮತ್ತೆ ಗೆಲುವಿನ ಲಯಕ್ಕೆ ಮರಳುವ ಪ್ರಯತ್ನ ನಡೆಸಲಿದೆ.
ಪಂದ್ಯದ ವಿವರ ಹಾಗೂ ನೇರ ಪ್ರಸಾರದ ಮಾಹಿತಿ
ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಪಂಜಾಬ್ ಕಿಂಗ್ಸ್ ವಿರುದ್ಧದ ಈ ಪಂದ್ಯ ಲಕ್ನೋದ ಏಕಾನ ಕ್ರೀಡಾಂಗಣದಲ್ಲಿ ಏಪ್ರಿಲ್ 15 ಶನಿವಾರದಂದು ಆಯೋಜನೆಯಾಗಲಿದೆ. ಸಂಜೆ 7:30ಕ್ಕೆ ಈ ಪಂದ್ಯ ಆರಂಭವಾಗಲಿದ್ದು 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಸ್ಟಾರ್ ಸ್ಪೋರ್ಟ್ಸ್ ವಾಹಿನಿ ಪಂದ್ಯದ ನೇರಪ್ರಸಾರ ಮಾಡಿದರೆ ಜಿಯೋ ಸಿನಿಮಾದಲ್ಲಿ ಲೈವ್‌ಸ್ಟ್ರೀಮಿಂಗ್ ಮೂಲಕ ವೀಕ್ಷಿಸುವ ಅವಕಾಶವಿದೆ.
ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ
ಲಕ್ನೋದ ಏಕಾನ ಕ್ರಿಕೆಟ್ ಸ್ಟೇಡಿಯಂನ ಪಿಚ್ ಸಮತೋಲಿತ ಟ್ರ್ಯಾಕ್ ಎನಿಸಿಕೊಂಡಿದೆ. ಇಲ್ಲಿ ಹೊಸ ಚೆಂಚು ಬ್ಯಾಟ್‌ಗೆ ಸರಾಗವಾಗಿ ಬರಲಿದ್ದು ಬ್ಯಾಟರ್‌ಗಳು ಇದರ ಲಾಭ ಪಡೆಯಬಹುದು. ಆಟ ಮುಂದುವರಿಯುತ್ತಿದ್ದಂತೆಯೇ ಪಿಚ್‌ನ ಮೇಲ್ಮೈ ನಿಧಾನವಾಗಲಿದ್ದು ಸ್ಪಿನ್ನರ್‌ಗಳು ಮೇಲುಗೈ ಸಾಧಿಸುವ ಅವಕಾಶವಿದೆ. ಹೀಗಾಗಿ ಇಲ್ಲಿನ ಪಂದ್ಯ ಸಾಕಷ್ಟು ಪೈಪೋಟಿಯಿಂದ ಕೂಡಿರುವುದರಲ್ಲಿ ಅನುಮಾನವಿಲ್ಲ.
ಇನ್ನು ಈ ಪಂದ್ಯಕ್ಕೆ ಮಳೆಯ ಆತಂಕವಿಲ್ಲ ಹಾಗಾಗಿ ಪಂದ್ಯ ನಿರಾತಂಕವಾಗಿ ನಡೆಯಲಿದೆ. ಉಷ್ಣಾಂಶ 21-41 ಡಿಗ್ರಿ ಸೆಲ್ಸಿಯಸ್‌ನಷ್ಟು ಇರುವ ಸಾಧ್ಯತೆಯಿದೆ.
ಇತ್ತಂಡಗಳ ಸಂಭಾವ್ಯ ಆಡುವ ಬಳಗ
ಲಕ್ನೋ ಸೂಪರ್ ಜೈಂಟ್ಸ್: ಕೆಎಲ್ ರಾಹುಲ್ (ನಾಯಕ), ಕೈಲ್ ಮೇಯರ್ಸ್, ದೀಪಕ್ ಹೂಡಾ, ಮಾರ್ಕಸ್ ಸ್ಟೊಯಿನಿಸ್, ಕೃನಾಲ್ ಪಾಂಡ್ಯ, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಜಯದೇವ್ ಉನಾದ್ಕಟ್, ಅಮಿತ್ ಮಿಶ್ರಾ, ಆವೇಶ್ ಖಾನ್, ಮಾರ್ಕ್ ವುಡ್, ರವಿ ಬಿಷ್ಣೋಯ್
ಪಂಜಾಬ್ ಕಿಂಗ್ಸ್: ಪ್ರಭಾಸಿಮ್ರಾನ್ ಸಿಂಗ್, ಶಿಖರ್ ಧವನ್ (ನಾಯಕ), ಮ್ಯಾಥ್ಯೂ ಶಾರ್ಟ್, ಭಾನುಕಾ ರಾಜಪಕ್ಷೆ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸ್ಯಾಮ್ ಕರನ್, ಶಾರುಖ್ ಖಾನ್, ಹರ್ಪ್ರೀತ್ ಬ್ರಾರ್, ಕಗಿಸೊ ರಬಾಡ, ರಿಷಿ ಧವನ್, ಅರ್ಶ್‌ದೀಪ್ ಸಿಂಗ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications