IPL 2023 KKR Vs MI Preview : ರಸೆಲ್ ಆಡೋದು ಅನುಮಾನ: ಪ್ಲೇಯಿಂಗ್ 11, ಪಿಚ್ ಮತ್ತು ಹವಾಮಾನ ವರದಿ
ಇಂಡಿಯನ್ ಪ್ರೀಮಿಯರ್ ಲೀಗ್ 2023ರ 22ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸೆಣೆಸಲಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ. ಭಾನುವಾರ (ಇಂದು) ಮಧ್ಯಾಹ್ನ 3.30ಕ್ಕೆ ಪಂದ್ಯ ಆರಂಭವಾಗಲಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆಲುವು ಸಾಧಿಸಿರುವ ಮುಂಬೈ ಇಂಡಿಯನ್ಸ್ ತವರಿನಲ್ಲಿ ಮೊದಲ ಜಯ ಸಾಧಿಸುವ ಉತ್ಸಾಹದಲ್ಲಿದೆ.
ಸತತ ಎರಡು ಪಂದ್ಯಗಳಲ್ಲಿ ಸೋಲನುಭವಿಸಿದ್ದ ಮುಂಬೈ ಇಂಡಿಯನ್ಸ್ ದೆಹಲಿಯಲ್ಲಿ ನಡೆದ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಜಯದ ಖಾತೆ ತೆರೆದಿದೆ. ನಾಯಕ ರೋಹಿತ್ ಶರ್ಮಾ ಅರ್ಧಶತಕ ಗಳಿಸಿರುವುದು ತಂಡಕ್ಕೆ ಬಲ ಬಂದಂತಾಗಿದೆ. ತಿಲಕ್ ವರ್ಮಾ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಸೂರ್ಯಕುಮಾರ್ ಯಾದವ್ ಫಾರ್ಮ್‌ಗೆ ಮರಳಿದರೆ ಮುಂಬೈ ಇಂಡಿಯನ್ಸ್ ಗೆಲುವು ಸುಲಭವಾಗಲಿದೆ.

ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೋಲನುಭವಿಸಿತ್ತು. ತವರಿನಲ್ಲಿ ಎರಡನೇ ಪಂದ್ಯವನ್ನಾಡುತ್ತಿದ್ದು, ಗೆಲುವು ಸಾಧಿಸುವ ವಿಶ್ವಾಸದಲ್ಲಿದೆ. ಇಂದಿನ ಪಂದ್ಯಕ್ಕೆ ಜೋಫ್ರಾ ಆರ್ಚರ್ ಫಿಟ್ ಆಗುವ ಸಾಧ್ಯತೆ ಇದ್ದು, ಆಡುವ ಬಳಗದಲ್ಲಿ ಅವಕಾಶ ಪಡೆಯುವ ಸಾಧ್ಯತೆ ಇದೆ.
ಮುಂಬೈ ಇಂಡಿಯನ್ಸ್ ತಂಡದ ಪ್ರಾಬಲ್ಯ
ಮುಂಬೈ ಇಂಡಿಯನ್ಸ್ ಮತ್ತೆ ಕೆಕೆಆರ್ ಇದುವರೆಗೂ 31 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ರೋಹಿತ್ ಶರ್ಮಾ ಪಡೆ 22 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಕೆಕೆಆರ್ 9 ಪಂದ್ಯಗಳನ್ನು ಮಾತ್ರ ಗೆದ್ದಿದೆ. ಐಪಿಎಲ್‌ನಲ್ಲಿ ಇದು ಯಾವುದೇ ತಂಡ ಇನ್ನೊಂದು ತಂಡದ ವಿರುದ್ಧ ಈ ರೀತಿಯ ಮೇಲುಗೈ ಸಾಧಿಸಿಲ್ಲ. ಆದರೆ, ಕಳೆದ ಆವೃತ್ತಿಯಲ್ಲಿ ಕೆಕೆಆರ್ ಎರಡೂ ಪಂದ್ಯಗಳನ್ನು ಗೆದ್ದಿರುವುದು ಅವರ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ.
ಕೆಕೆಆರ್ ಕಳೆದ ಮೂರು ಪಂದ್ಯಗಳಲ್ಲಿ ಸತತವಾಗಿ 200ಕ್ಕಿಂತ ಅಧಿಕ ರನ್ ಕಲೆಹಾಕಿದೆ. ಬ್ಯಾಟರ್ ಗಳು ಉತ್ತಮ ಫಾರ್ಮ್‌ನಲ್ಲಿದ್ದು, ವಾಂಖೆಡೆಯಲ್ಲಿ ಅದೇ ಪ್ರದರ್ಶನ ಮುಂದುವರೆಸಿದರೆ ಮಾತ್ರ ಗೆಲುವು ಸಾಧಿಸಬಹುದು. ನಿತೀಶ್ ರಾಣಾ ಫಾರ್ಮ್‌ಗೆ ಮರಳಿರುವುದು ತಂಡದ ಬ್ಯಾಟಿಂಗ್ ಬಲವನ್ನು ಹೆಚ್ಚಿಸಿದೆ. ಆಂಡ್ರೆ ರಸೆಲ್ ಇಂದಿನ ಪಂದ್ಯದಲ್ಲಿ ಆಡುವುದು ಅನುಮಾನವಾಗಿದ್ದು, ಜೇಸನ್ ರಾಯ್ ಅಥವಾ ಲಿಟ್ಟನ್ ದಾಸ್ ಸ್ಥಾನ ಪಡೆಯಬಹುದು.
ಸ್ಪಿನ್ನರ್ ಗಳಿಗೆ ಹೆಚ್ಚಿನ ನರೆವು?
ಸಿಎಸ್‌ಕೆ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯದಲ್ಲಿ ಸ್ಪಿನ್ನರ್ ಗಳು ಮಿಂಚಿದ್ದರು. ಇಂದು ಮಧ್ಯಾಹ್ನದ ಪಂದ್ಯವಾಗಿರುವುದರಿಂದ ಸ್ಪಿನ್ನರ್ ಗಳಿಗೆ ಹೆಚ್ಚಿನ ನೆರವು ಸಿಗುವ ಸಾಧ್ಯತೆ ಇದೆ. ಒಂದು ವೇಳೆ ಪಿಚ್ ಸ್ಪಿನ್ನರ್ ಗಳಿಗೆ ನೆರವಾದರೆ ಕೆಕೆಆರ್ ತಂಡಕ್ಕೆ ಹೆಚ್ಚಿನ ಲಾಭವಾಗಲಿದೆ. ಮೂವರು ಉತ್ತಮ ಸ್ಪಿನ್ನರ್ ಗಳು ಮುಂಬೈ ಇಂಡಿಯನ್ಸ್ ತಂಡಕ್ಕೆ ಕಂಟಕವಾಗಲಿದ್ದಾರೆ.
ಮುಂಬೈ ಇಂಡಿಯನ್ಸ್ ಸಂಭಾವ್ಯ ಪ್ಲೇಯಿಂಗ್ 11
ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಕ್ಯಾಮೆರಾನ್ ಗ್ರೀನ್, ನೆಹಾಲ್ ವಧೇರಾ, ಕುಮಾರ್ ಕಾರ್ತಿಕೇಯ, ರಿಲೆ ಮೆರೆಡಿತ್ / ಜೋಫ್ರಾ ಆರ್ಚರ್, ಅರ್ಷದ್ ಖಾನ್, ಪಿಯೂಷ್ ಚಾವ್ಲಾ, ಜೇಸನ್ ಬೆಹ್ರೆಂಡಾರ್ಫ್
ಕೆಕೆಆರ್ ಸಂಭಾವ್ಯ ಪ್ಲೇಯಿಂಗ್ 11
ಜೇಸನ್ ರಾಯ್, ಎನ್ ಜಗದೀಸನ್ (ವಿಕೆಟ್ ಕೀಪರ್), ನಿತೀಶ್ ರಾಣಾ (ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್/ಲಿಟ್ಟನ್ ದಾಸ್, ಸುನಿಲ್ ನರೈನ್, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಸುಯಶ್ ಶರ್ಮಾ, ಲಾಕಿ ಫರ್ಗುಸನ್ / ಟಿಮ್ ಸೌಥಿ, ವರುಣ್ ಚಕ್ರವರ್ತಿ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications