ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಶನಿವಾರ ಎರಡು ಪಂದ್ಯಗಳು ಆಯೋಜನೆಯಾಗಲಿದೆ. ಮೊದಲ ಮುಖಾಮುಖಿಯಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಸವಾಲನ್ನು ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ತಂಡ ಎದುರಿಸಲಿದೆ. ಲಕ್ನೋದ ಏಕಾನ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದ್ದು ಕದನ ಕುತೂಹಲ ಮೂಡಿಸಿದೆ.
ಎರಡು ತಂಡಗಳು ಕೂಡ ಈ ಬಾರಿಯ ಆವೃತ್ತಿಯಲ್ಲಿಯೂ ಉತ್ತಮ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದೆ. ಕೆಎಲ್ ರಾಹುಲ್ ನಾಯಕತ್ವದ ಲಕ್ನೋಸ ಸೂಪರ್ ಜೈಂಟ್ಸ್ ತಂಡ ಆಡಿರುವ ಆರು ಪಂದ್ಯಗಳಲ್ಲಿ 4ರಲ್ಲಿ ಗೆಲುವು ಸಾಧಿಸಿದ್ದು ಎರಡು ಸೋಲು ಕಂಡಿದೆ. ಹೀಗಾಗಿ 8 ಅಂಕಗಳನ್ನು ಪಡೆದುಕೊಂಡಿರುವ ಎಲ್‌ಎಸ್‌ಜಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಇನ್ನು ಗುಜರಾತ್ ಟೈಟನ್ಸ್ ತಂಟ ಆಡಿರುವ ಐದು ಪಂದ್ಯಗಳಲ್ಲಿ 3 ಗೆಲುವು ಹಾಗೂ 2 ಸೋಲು ಅನುಭವಿಸಿದೆ. ಈ ಮೂಲಕ 6 ಅಂಕಗಳೊಂದಿಗೆ 4ನೇ ಸ್ಥಾನದಲ್ಲಿದೆ.

ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಗುಜರಾತ್ ಟೈಟನ್ಸ್ ವಿರುದ್ಧದ ಈ ಪಂದ್ಯ ಲಕ್ನೋದ ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಏಕಾನ ಕ್ರೀಡಾಂಗಣದಲ್ಲಿ ಏಪ್ರಿಲ್ 22 ಶನಿವಾರ ಮಧ್ಯಾಹ್ನ ಆಯೋಜನೆಯಾಗಲಿದೆ. ಮಧ್ಯಾಹ್ನ 3:30ಕ್ಕೆ ಈ ಪಂದ್ಯ ಆರಂಭವಾಗಲಿದ್ದು 3 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಸ್ಟಾರ್ ಸ್ಪೋರ್ಟ್ಸ್ ವಾಹಿನಿ ಪಂದ್ಯದ ನೇರಪ್ರಸಾರ ಮಾಡಿದರೆ ಜಿಯೋ ಸಿನಿಮಾಸದಲ್ಲಿ ಲೈವ್‌ಸ್ಟ್ರೀಮಿಂಗ್ ಮೂಲಕ ವೀಕ್ಷಿಸುವ ಅವಕಾಶವಿದೆ.
ಲಕ್ನೋದ ಏಕಾನ ಕ್ರೀಡಾಂಗಣ ಸ್ಪಿನ್ನರ್‌ಗಳಿಗೆ ಹೆಚ್ಚಿನ ನೆರವು ನೀಡುವ ಪಿಚ್ ಆಗಿದ್ದು ಸ್ಪಿನ್ನರ್‌ಗಳಿಗೆ ಇಲ್ಲಿ ಉತ್ತಮ ನೆರವು ದೊರೆಯುವ ಸಾಧ್ಯತೆಯಿದೆ. ಅಲ್ಲದೆ ಪಂದ್ಯ ಸಾಗುತ್ತಿದ್ದಂತೆಯೇ ಪಿಚ್ ನಿಧಾನಗತಿಯಲ್ಲಿ ವರ್ತಿಸಲಿದ್ದು ಬ್ಯಾಟಿಂಗ್‌ಗೆ ಸವಾಲಾಗಲಿದೆ. ಈ ಪಿಚ್‌ನಲ್ಲಿ ರನ್ ಬೆನ್ನಟ್ಟುವುದು ಸವಾಲಾಗಲಿದ್ದು ಟಾಸ್ ಗೆದ್ದ ತಂಡ ಆರಂಭದಲ್ಲಿ ಬ್ಯಾಟಿಂಗ್ ಆಯ್ಕೆ ಮಾಡಿಕೊಳ್ಳುವುದು ಉತ್ತಮ ನಿರ್ಧಾರವಾಗಲಿದೆ.
ಲಕ್ನೋ ಸೂಪರ್ ಜೈಂಟ್ಸ್: ಕೆಎಲ್ ರಾಹುಲ್ (ವಿಕೆಟ್ ಕೀಪರ್/ನಾಯಕ), ಕೈಲ್ ಮೇಯರ್ಸ್, ಕೃನಾಲ್ ಪಾಂಡ್ಯ, ಮಾರ್ಕಸ್ ಸ್ಟೋನಿಸ್, ನಿಕೋಲಸ್ ಪೂರನ್, ದೀಪಕ್ ಹೂಡಾ, ಆಯುಷ್ ಬಡೋನಿ, ಮಾರ್ಕ್ ವುಡ್, ರವಿ ಬಿಷ್ಣೋಯ್, ಯಶ್ ಠಾಕೂರ್, ಜಯದೇವ್ ಉನದ್ಕತ್
ಗುಜರಾತ್ ಟೈಟಾನ್ಸ್: ಶುಬ್ಮನ್ ಗಿಲ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ನಾಯಕ), ಸಾಯಿ ಸುದರ್ಶನ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮೊಹಮ್ಮದ್ ಶಮಿ, ಜೋಶುವಾ ಲಿಟಲ್, ಅಲ್ಜಾರಿ ಜೋಸೆಫ್, ಮೋಹಿತ್ ಶರ್ಮಾ