For Quick Alerts
ALLOW NOTIFICATIONS  
For Daily Alerts
 

IPL 2023, ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಸಿಎಸ್‌ಕೆ ಸವಾಲು: ಸಂಭಾವ್ಯ XI, ಪಿಚ್ ರಿಪೋರ್ಟ್

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಭಾನುವಾರ ಎರಡು ಪಂದ್ಯಗಳು ಆಯೋಜನೆಯಾಗಲಿದ್ದು ಎರಡನೇ ಪಂದ್ಯದ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್‌ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದ್ದು ಯಾವ ತಂಡ ಮೇಲುಗೈ ಸಾಧಿಸಲಿದೆ ಎಂಬುದು ಕುತೂಹಲ ಮೂಡಿಸಿದೆ.

ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಬಾರಿಯ ಐಪಿಎಲ್‌ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದು ಆಡಿದ ಆರು ಪಂದ್ಯಗಳಲ್ಲಿ 4 ಗೆಲುವು ಸಾಧಿಸಿದ್ದು ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ. ಆದರೆ ನಿತೀಶ್ ರಾಣಾ ನೇತೃತ್ವದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಹ್ಯಾಟ್ರಿಕ್ ಸೋಲು ಅನುಭವಿಸಿದ್ದು ಸಂಕಷ್ಟದಲ್ಲಿದೆ. ಆಡಿರುವ 6 ಪಂದ್ಯಗಳಲ್ಲಿ ಕೆಕೆಆರ್ ಕೇವಲಕ ಎರಡು ಗೆಲುವು ಮಾತ್ರವೇ ಸಾಧಿಸಿದ್ದು ಗೆಲುವಿನ ಹಸಿವಿನಲ್ಲಿದೆ.

IPL 2023, Match 34, KKR vs CSK Preview, Predicted Playing 11, Pitch Report

ಪಂದ್ಯದ ಮಾಹಿತಿ ಹಾಗೂ ನೇರಪ್ರಸಾರದ ವಿವರ

ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಈ ಪಂದ್ಯ ಕೊಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ಏಪ್ರಿಲ್ 23 ಭಾನುವಾರ ಸಂಜೆ ಆಯೋಜನೆಯಾಗಲಿದೆ. ಸಂಜೆ 7:30ಕ್ಕೆ ಈ ಪಂದ್ಯ ಆರಂಭವಾಗಲಿದ್ದು 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಸ್ಟಾರ್ ಸ್ಪೋರ್ಟ್ಸ್ ವಾಹಿನಿ ಪಂದ್ಯದ ನೇರಪ್ರಸಾರ ಮಾಡಿದರೆ ಜಿಯೋ ಸಿನಿಮಾದಲ್ಲಿ ಲೈವ್‌ಸ್ಟ್ರೀಮಿಂಗ್ ಮೂಲಕ ವೀಕ್ಷಿಸುವ ಅವಕಾಶವಿದೆ.

ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ

ಈಡನ್ ಗಾರ್ಡನ್‌ ಮೈದಾನದ ಪಿಚ್ ನಿಧಾನಗತಿಯಲ್ಲಿ ವರ್ತಿಸುವ ಗುಣಹೊಂದಿದೆ. ಬೌಲಿಂಗ್ ಸಂದರ್ಭದಲ್ಲಿ ಇಲ್ಲಿ ಸ್ಪಿನ್ನರ್‌ಗಳು ಹೆಚ್ಚಿನ ಲಾಭ ಪಡೆಯುವ ಸಾಧ್ಯತೆಯಿದೆ. ಬ್ಯಾಟರ್‌ಗಳು ಸರಾಗವಾಗಿ ಬ್ಯಾಟ್ ಮಾಡುವುದು ಇಲ್ಲಿ ಸವಾಲಾಗಲಿದ್ದು ಎಚ್ಚರಿಕೆಯ ಬ್ಯಾಟಿಂಗ್ ನಡೆಸುವುದು ಅಗತ್ಯ.
ಹವಾಮಾನ ವರದಿ: ಪಂದ್ಯದ ಸಂದರ್ಭದಲ್ಲಿ ಮಳೆಯಾಗುವ ಆತಂಕವಿಲ್ಲದಿರುವ ಕಾರಣ ಪೂರ್ಣ ಪ್ರಮಾಣದ ಪಂದ್ಯನಡೆಯಲಿದೆ. ವಾತಾವರಣ ಉಷ್ಣಾಂಶ 26-33 ಡಿಗ್ರಿ ಸೆಲ್ಸಿಯಸ್‌ನ ಮಧ್ಯೆ ಇರಲಿದೆ.

IPL 2023: ಒಂದೇ ಒಂದು ಕೆಟ್ಟ ಎಸೆತ ಎಸೆಯಲಿಲ್ಲ ಆತ: ಅನುಭವಿ ಆಲ್‌ರೌಂಡರ್ ಆಟಕ್ಕೆ ಹರ್ಭಜನ್ ಮೆಚ್ಚುಗೆ
ಸಂಭಾವ್ಯ ಆಡುವ ಬಳಗ

ಕೊಲ್ಕತ್ತಾ ನೈಟ್ ರೈಡರ್ಸ್: ಜೇಸನ್ ರಾಯ್, ಲಿಟ್ಟನ್ ದಾಸ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ (ನಾಯಕ), ಆಂಡ್ರೆ ರಸೆಲ್, ರಿಂಕು ಸಿಂಗ್, ಸುನಿಲ್ ನರೈನ್, ಅನುಕುಲ್ ರಾಯ್, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ವರುಣ್ ಚಕ್ರವರ್ತಿ

ಚೆನ್ನೈ ಸೂಪರ್ ಕಿಂಗ್ಸ್: ಋತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಅಜಿಂಕ್ಯ ರಹಾನೆ, ಶಿವಂ ದುಬೆ, ಮೊಯಿನ್ ಅಲಿ, ರವೀಂದ್ರ ಜಡೇಜಾ, ಎಂಎಸ್ ಧೋನಿ (ನಾಯಕ & ವಿಕೆಟ್ ಕೀಪರ್), ಮಹೇಶ್ ತೀಕ್ಷಣ, ತುಷಾರ್ ದೇಶಪಾಂಡೆ, ಆಕಾಶ್ ಸಿಂಗ್, ಮತೀಶ ಪತಿರಾನ

Story first published: Saturday, April 22, 2023, 21:54 [IST]
Other articles published on Apr 22, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+