IPL 2023, ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್:ಪಿಚ್ ರಿಪೋರ್ಟ್, ಹವಾಮಾನ ವರದಿ
ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಸೋಮವಾರ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮುಖಾಮುಖಿಯಾಗಲಿದೆ. ಹೈದರಾಬಾದ್‌ನ ರಾಜೀವ್‌ಗಾಂಧಿ ಅಂತಾರಾಷ್ಟ್ರೀಯ ಕ್ರಿಡಾಂಗಣದಲ್ಲಿ ಈ ಪಂದ್ಯ ನಡೆಯಲಿದ್ದು ಎರಡು ತಂಡಗಳಿಗೂ ಈ ಪಂದ್ಯದ ಗೆಲುವು ಅತ್ಯಂತ ಮಹತ್ವದ್ದಾಗಿದೆ. ಅಂಕಪಟ್ಟಿಯಲ್ಲಿ ಈ ಎರಡಯ ತಂಡಗಳು ಕೊನೆಯ ಎರಡು ಸ್ಥಾನಗಳಲ್ಲಿರುವ ಕಾರಣ ಮುಂದಿನ ಪಂದ್ಯಗಳ ಗೆಲುವು ಈ ಎರಡು ತಂಡಗಳಿಗೂ ನಿರ್ಣಾಯಕವಾಗಲಿದೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡ ಸತತ ಐದು ಸೋಲಿನ ಬಳಿಕ ಕಳೆದ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಈ ಟೂರ್ನಿಯ ಮೊದಲ ಗೆಲುವು ಸಾಧಿಸಿತು. ಹೀಗಾಗಿ ಈ ಗೆಲುವಿನ ಲಯವನ್ನು ಮುಂದುವರಿಸುವ ಭರವಸೆಯಲ್ಲಿದೆ ಡೆಲ್ಲಿ ಕ್ಯಾಪಿಟಲ್ಸ್ ಅಂಕಪಟ್ಟಿಯಲ್ಲಿ ಡಿಸಿ ಕೊನೆಯ ಸ್ಥಾನದಲ್ಲಿದೆ. ಮತ್ತೊಂದೆಡೆ ಸನ್‌ರೈಸರ್ಸ್ ಹೈದರಾಬಾದ್ ಆಡಿರುವ 6 ಪಂದ್ಯಗಳಲ್ಲಿ ಕೇವಲ ಎರಡು ಗೆಲುವು ಮಾತ್ರವೇ ಸಾಧಿಸಿದ್ದು ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ.

ಪಂದ್ಯದ ಮಾಹಿತಿ ಹಾಗೂ ನೇರಪ್ರಸಾರದ ವಿವರ
ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಈ ಪಂದ್ಯ ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರೀಡಾಂಗಣ ಏಪ್ರಿಲ್ 24 ಸೋಮವಾರ ಸಂಜೆ ನಡೆಯಲಿದೆ. ಸಂಜೆ 7:30ಕ್ಕೆ ಈ ಪಂದ್ಯ ಆರಂಭವಾಗಲಿದ್ದು 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಸ್ಟಾರ್ ಸ್ಪೋರ್ಟ್ಸ್ ವಾಹಿನಿ ಪಂದ್ಯದ ನೇರಪ್ರಸಾರ ಮಾಡಿದರೆ ಜಿಯೋ ಸಿನಿಮಾದಲ್ಲಿ ಲೈವ್‌ಸ್ಟ್ರೀಮಿಂಗ್ ಮೂಲಕ ವೀಕ್ಷಿಸುವ ಅವಕಾಶವಿದೆ.
ಹವಾಮಾನ ವರದಿ ಹಾಗೂ ಪಿಚ್ ರಿಪೋರ್ಟ್
ಹವಾಮಾನ ವರದಿ: ಈ ಪಂದ್ಯಕ್ಕೆ ಮಳೆಯ ಆತಂಕವಿರುವುದು ಅಭಿಮಾನಿಗಳ ಚಿಂತೆಗೆ ಕಾರಣವಾಗಿದೆ. ಸೋಮವಾರ ಹೈದರಾಬಾದ್‌ನಲ್ಲಿ ಭಾರೀ ಮಳೆಯಾಗುವುದಾಗಿ ಹವಾಮಾನ ಮುನ್ಸೂಚನೆ ಇದೆ. ಇದು ಪಂದ್ಯಕ್ಕೆ ಅಡ್ಡಿಯುಂಟು ಮಾಡುವ ಆತಂಕವಿದೆ.
ಹೈದರಾಬಾದ್‌ನ ರಾಜೀವ್‌ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದ ಪಿಚ್ ಬ್ಯಾಟಿಂಗ್ ಹಾಗೂ ಬೌಲಿಂಗ್‌ಗೆ ಸಮತೋಲಿತವಾದ ಪಿಚ್ ಆಗಿದೆ. ಇನ್ನಿಂಗ್ಸ್‌ನ ಆರಂಭದಲ್ಲಿ ಬ್ಯಾಟ್‌ಗೆ ಚೆಂಡು ಸರಾಗವಾಗಿ ಬರಲಿದ್ದು ಪವರ್‌ಪ್ಲೇನ ಲಾಭವನ್ನು ಉತ್ತಮವಾಗಿ ಬಳಸಿಕೊಳ್ಳಬಹುದು. ನಂತರ ಬೌಲಿಂಗ ವಿಭಾಗ ಮೇಲುಗೈ ಸಾಧಿಸುವ ಅವಕಾಶವಿದೆ.
ಇತ್ತಂಡಗಳ ಸಂಭಾವ್ಯ ಆಡುವ ಬಳಗ
ಸನ್‌ರೈಸರ್ಸ್ ಹೈದರಾಬಾದ್ ಆಡುವ ಬಳಗ: ಹ್ಯಾರಿ ಬ್ರೂಕ್, ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ಏಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಅಬ್ದುಲ್ ಸಮದ್, ವಾಷಿಂಗ್ಟನ್ ಸುಂದರ್, ಮಾರ್ಕೊ ಜಾನ್ಸೆನ್, ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಾಂಡೆ, ಉಮ್ರಾನ್ ಮಲಿಕ್
ಡೆಲ್ಲಿ ಕ್ಯಾಪಿಟಲ್ಸ್ ಆಡುವ ಬಳಗ: ಡೇವಿಡ್ ವಾರ್ನರ್ (ನಾಯಕ), ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ಮಿಚೆಲ್ ಮಾರ್ಷ್, ಮನೀಶ್ ಪಾಂಡೆ, ಅಕ್ಸರ್ ಪಟೇಲ್, ಅಮನ್ ಹಕೀಮ್ ಖಾನ್, ಲಲಿತ್ ಯಾದವ್, ಕುಲದೀಪ್ ಯಾದವ್, ಅನ್ರಿಚ್ ನಾರ್ಟ್ಜೆ, ಇಶಾಂತ್ ಶರ್ಮಾ, ಮುಖೇಶ್ ಕುಮಾರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications