Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2023 RCB vs KKR: ಕೊಲ್ಕತ್ತಾ ವಿರುದ್ಧ ಸೋಲಿನ ಸೇಡು ತೀರಿಸಿಕೊಳ್ಳುತ್ತಾ ಆರ್‌ಸಿಬಿ: ಸಂಭಾವ್ಯ XI, ಪಿಚ್ ರಿಪೋರ್ಟ್

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಬುಧವಾರ ಆರ್‌ಸಿಬಿ ತಂಡ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಈ ಬಾರಿಯ ಆವೃತ್ತಿಯಲ್ಲಿ ಎರಡನೇ ಬಾರಿ ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್‌ಸಿಬಿ ತಂಡಕ್ಕೆ ಕೆಕೆಆರ್ ಸವಾಲೊಡ್ಡಿದ್ದು ಸೆಣೆಸಾಟ ಕುತೂಹಲ ಮೂಡಿಸಿದೆ. ಈ ಬಾರಿಯ ಆವೃತ್ತೊಯಲ್ಲಿ ಮೊದಲ ಹಂತದಲ್ಲಿ ಕೊಲ್ಕತ್ತಾದಲ್ಲಿ ಸೆಣೆಸಾಡಿದ್ದಾಗ ಆರ್‌ಸಿಬಿ ಆಘಾತಕಾರಿ ರೀತಿಯಲ್ಲಿ ಸೋಲು ಅನುಭವಿಸಿತ್ತು. ಈ ಸೋಲಿನ ಸೇಡು ತೀರಿಸಿಕೊಳ್ಳಲಿದೆಯಾ ಎಂಬುದು ಈಗಿನ ಕುತೂಹಲವಾಗಿದೆ.

ಆದರೆ ಆರ್‌ಸಿಬಿ ತಂಡ ಉತ್ತಮ ಲಯದಲ್ಲಿದ್ದು 7 ಪಂದ್ಯಗಳಲ್ಲಿ 4 ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ಅದರಲ್ಲೂ ಕಳೆದ ಎರಡು ಪಂದ್ಯಗಳಲ್ಲಿ ಆರ್‌ಸಿಬಿ ಸತತ ಗೆಲುವು ಸಾಧಿಸಿರುವ ಕಾರಣ ಆತ್ಮವಿಶ್ವಾಸದಲ್ಲಿದೆ. ಕೆಕೆಆರ್ ತಂಡ ಸತತ ಸೋಲು ಅನುಭವಿಸಿ ಸಂಕಷ್ಟದಲ್ಲಿದ್ದು ಸತತ ನಾಲ್ಕು ಸೋಲು ಕಂಡು ಆಘಾತ ಅನುಭವಿಸಿದೆ. ಹೀಗಾಗಿ ಆರ್‌ಸಿಬಿ ವಿರುದ್ಧ ಮತ್ತೊಮ್ಮೆ ಗೆಲ್ಲುವ ವಿಶ್ವಾಸದಲ್ಲಿದೆ ಕೆಕೆಆರ್

IPL 2023, Match 36, RCB vs KKR Preview, Predicted Playing 11, Pitch Report

ಪಂದ್ಯದ ಮಾಹಿತಿ ಹಾಗೂ ನೇರಪ್ರಸಾರದ ವಿವರ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಈ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಕ್ರೀಡಾಂಗಣದಲ್ಲಿ ಏಪ್ರಿಲ್ 26 ಬುಧವಾರ ಸಂಜೆ ಆಯೋಜನೆಯಾಗಲಿದೆ. ಸಂಜೆ 7:30ಕ್ಕೆ ಈ ಪಂದ್ಯ ಆರಂಭವಾಗಲಿದ್ದು 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಸ್ಟಾರ್ ಸ್ಪೋರ್ಟ್ಸ್ ವಾಹಿನಿ ಪಂದ್ಯದ ನೇರಪ್ರಸಾರ ಮಾಡಿದರೆ ಜಿಯೋ ಸಿನಿಮಾದಲ್ಲಿ ಲೈವ್‌ಸ್ಟ್ರೀಮಿಂಗ್ ಮೂಲಕ ವೀಕ್ಷಿಸುವ ಅವಕಾಶವಿದೆ.

ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಪಿಚ್ ಬ್ಯಾಟಿಂಗ್‌ಗೆ ಹೇಳಿಮಾಡಿದಂತಾ ಪಿಚ್ ಆಗಿದೆ. ಇನ್ನಿಂಗ್ಸ್‌ನ ಆರಂಭದಿಂದಲೇ ಬ್ಯಾಟರ್‌ಗಳಿಗೆ ದೊಡ್ಡ ಹೊಡೆಗಳಿಗೆ ಮುಂದಾಗುವುದು ಇಲ್ಲಿ ಸಾಮಾನ್ಯ. ಚೆಂಡು ಸರಾಗವಾಗಿ ಬ್ಯಾಟ್‌ಗೆ ಬೀಳುವ ಕಾರಣ ಇಲ್ಲಿ ಬ್ಯಾಟಿಂಗ್ ನಡೆಸುವುದನ್ನು ಬ್ಯಾಟರ್‌ಗಳು ಆನಂದಿಸಲಿದ್ದಾರೆ. ಮತ್ತೊಂದು ಹೈಸ್ಕೋರಿಂಗ್ ಮ್ಯಾಚನ್ನು ಈ ಪಂದ್ಯದಲ್ಲಿ ನಿರೀಕ್ಷಿಸಬಹುದು.

ಹವಾಮಾನ ವರದಿ: ಪಂದ್ಯದ ದಿನ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರುವುದು ಸ್ಪಷ್ಟ. ಸಣ್ಣ ಪ್ರಮಾಣದ ಮಳೆ ಸುರಿದರೂ ಪಂದ್ಯಕ್ಕೆ ಅಡ್ಡಿಯಾಗುವ ಆತಂಕ ಕಡಿಮೆಯಿದೆ. ವಾತಾವರಣ ಉಷ್ಣಾಂಶ 21-33 ಡಿಗ್ರಿ ಸೆಲ್ಸಿಯಸ್‌ನ ಮಧ್ಯೆ ಇರಲಿದೆ.

ವೇಗವಾಗಿ 150 ಐಪಿಎಲ್ ಸಿಕ್ಸರ್ ಬಾರಿಸಿದವರು; ಕೊಹ್ಲಿ, ರೋಹಿತ್ ಅಲ್ಲ ಆತನೊಬ್ಬನೇ ಭಾರತೀಯ!
ಇತ್ತಂಡಗಳ ಸಂಭಾವ್ಯ ಆಡುವ ಬಳಗ

ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ (ವಿಕೆಟ್ ಕೀಪರ್), ಫಾಫ್ ಡು ಪ್ಲೆಸಿಸ್, ಮಹಿಪಾಲ್ ಲೊಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ವನಿಂದು ಹಸರಂಗ, ಸುಯಶ್ ಪ್ರಭುದೇಸಾಯಿ, ಹರ್ಷಲ್ ಪಟೇಲ್, ಡೇವಿಡ್ ವಿಲ್ಲಿ, ಮೊಹಮ್ಮದ್ ಸಿರಾಜ್.

ಕೊಲ್ಕತ್ತಾ ನೈಟ್ ರೈಡರ್ಸ್: ಜೇಸನ್ ರಾಯ್, ನಿತೀಶ್ ರಾಣಾ (ನಾಯಕ), ಆಂಡ್ರೆ ರಸೆಲ್, ಎನ್ ಜಗದೀಸನ್ (ವಿಕೆಟ್ ಕೀಪರ್), ಸುನಿಲ್ ನರೈನ್, ಕುಲ್ವಂತ್ ಖೆಜ್ರೋಲಿಯಾ, ರಿಂಕು ಸಿಂಗ್, ಸುಯಾಶ್ ಶರ್ಮಾ, ವರುಣ್ ಚಕ್ರವರ್ತಿ, ಉಮೇಶ್ ಯಾದವ್, ಡೇವಿಡ್ ವೈಸ್

Story first published: Tuesday, April 25, 2023, 9:47 [IST]
Other articles published on Apr 25, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+