IPL 2023 RR vs CSK: ಬಲಾಢ್ಯರ ಸೆಣೆಸಾಟದಲ್ಲಿ ಯಾರಿಗೆ ಮೇಲುಗೈ: ಸಂಭಾವ್ಯ XI, ಪಿಚ್ ರಿಪೋರ್ಟ್
ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಗುರುವಾರ ಈ ಬಾರಿಯ ಆವೃತ್ತಿಯ ಎರಡು ಬಲಿಷ್ಠ ತಂಡಗಳ ನಡುವಿನ ಮುಖಾಮುಖಿ ನಡೆಯಲಿದೆ. ಪ್ರಸ್ತುತ ಅಂಕಪಟ್ಟಿಯಲ್ಲಿ ಅಗ್ರಸ್ಥಾದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ರಾಜಸ್ಥಾನ ತಂಡದ ಸವಾಲನ್ನು ಎದುರಿಸಲಿದೆ. ಇದು ಈ ಎರಡು ತಂಡಗಳಿಗೆ ಈ ಬಾರಿಯ ಟೂರ್ನಿಯಲ್ಲಿ ಎಡನೇ ಮುಖಾಮುಖಿಯಾಗಿದೆ. ಮೊದಲ ಬಾರಿಗೆ ಚೆನ್ನೈನಲ್ಲಿ ಮುಖಾಮುಖಿಯಾಗಿದ್ದಾಗ ಆರ್‌ಆರ್ ತಂಡ 3 ರನ್‌ಗಳ ಅಂತರದ ಗೆಲುವು ಸಾಧಿಸಿತ್ತು. ಇದೀಗ ಆರ್‌ಆರ್ ತಂಡದ ತವರು ಮೈದಾನ ಜೈಪುರದಲ್ಲಿ ನಡೆಯಲಿರುವ ಈ ಪಂದ್ಯ ಕುತೂಹಲ ಮೂಡಿಸಿದೆ.
ಆಡಿರುವ ಏಳು ಪಂದ್ಯಗಳಲ್ಲಿ 4 ಪಂದ್ಯಗಳಲ್ಲಿ ಗೆಲುವು ಸಾಧಿಸಿರುವ ರಾಜಸ್ಥಾನ್ ರಾಯಲ್ಸ್ ತಂಡ 8 ಅಂಕಗಳನ್ನು ಹೊಂದಿದೆ. ಆದರೆ ಕಳೆದ ಎರಡು ಪಂದ್ಯಗಳಲ್ಲಿ ಹಿನ್ನಡೆ ಅನುಭವಿಸಿರುವ ಆರ್‌ಆರ್ ತಂಡ ಗೆಲುವಿನ ಲಯವನ್ನು ಕಳೆದುಕೊಂಡಿತು. ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸೋಲು ಸೇರಿಸಂತೆ ಕೊನೆಯ ಎರಡು ಪಂದ್ಯಗಳಲ್ಲಿ ಆರ್‌ಆರ್ ತಂಡ ಸೋಲಿನ ರುಚಿ ಕಂಡಿದೆ.

ಆದರೆ ಇತ್ತ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಬಾರಿಯ ಆವೃತ್ತಿಯಲ್ಲಿ ಅಮೋಘ ಪ್ರದರ್ಶನ ನೀಡುತ್ತಿದೆ. ಆಡಿರುವ 7 ಪಂದ್ಯಗಳಲ್ಲಿ 5 ಗೆಲುವು ಸಾಧಿಸಿರುವ ಸಿಎಸ್‌ಕೆ 10 ಅಂಕಗಳನ್ನು ಖಾತೆಯಲ್ಲಿ ಹೊಂದಿದೆ. ಈಗಾಗಲೇ ಹ್ಯಾಟ್ರಿಕ್ ಜಯ ಸಾಧಿಸಿರುವ ಧೋನಿ ಪಡೆ ಗೆಲುವಿನ ಲಯವನ್ನು ಮುಂದುವರಿಸುವ ವಿಶ್ವಾಸದಲ್ಲಿದೆ. ಕೆಕೆಆರ್ ವಿರುದ್ಧ ಕೊನೆಯ ಪಂದ್ಯದಲ್ಲಿ ಭಾರೀ ಅಂತರದಿಂದ ಗೆಲುವು ಸಾಧಿಸಿತು.
ಪಂದ್ಯದ ಮಾಹಿತಿ ಹಾಗೂ ನೇರಪ್ರಸಾರದ ವಿವರ
ರಾಜಸ್ಥಾನ್ ರಾಯಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ವಿರುದ್ಧದ ಈ ಪಂದ್ಯ ಜೈಪುರದ ಸವಾಯ್ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ಏಪ್ರಿಲ್ 27 ಗುರುವಾರ ಸಂಜೆ ಆಯೋಜನೆಯಾಗಲಿದೆ. ಸಂಜೆ 7:30ಕ್ಕೆ ಈ ಪಂದ್ಯ ಆರಂಭವಾಗಲಿದ್ದು 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಸ್ಟಾರ್ ಸ್ಪೋರ್ಟ್ಸ್ ವಾಹಿನಿ ಪಂದ್ಯದ ನೇರಪ್ರಸಾರ ಮಾಡಿದರೆ ಜಿಯೋ ಸಿನಿಮಾದಲ್ಲಿ ಲೈವ್‌ಸ್ಟ್ರೀಮಿಂಗ್ ಮೂಲಕ ವೀಕ್ಷಿಸುವ ಅವಕಾಶವಿದೆ.
RR vs CSK ಪಿಚ್ ರಿಪೋರ್ಟ್
ಸವಾಯ್ ಮಾನ್‌ಸಿಂಗ್ ಕ್ರೀಡಾಂಗಣ ಸಮತೋಲಿತ ಪಿಚ್ ಹೊಂದಿದೆ. ಇಲ್ಲಿ ಆರಂಭದಲ್ಲಿ ಬ್ಯಾಟರ್‌ಗಳಿಗೆ ಸವಾ;ಲು ಎದುರಾಗಲಿದ್ದು ತಾಳ್ಮೆಯಿಂದ ಬ್ಯಾಟಿಂಗ್ ನಡೆಸಬೇಕಾಗುತ್ತದೆ. ಪರಿಸ್ಥಿತಿಯನ್ನು ಅರ್ಥೈಸಿಕೊಳ್ಳಬೇಕಾದರೆ ಕೆಲ ಕಾಲ ಕ್ರೀಸ್‌ನಲ್ಲಿ ಕಾಲಕಳೆಯುವುದು ಅನಿವಾರ್ಯ. ಇಲ್ಲಿ ಸ್ಪಿನ್ನರ್‌ಗಳು ನಿರ್ಣಾಯಕ ಪಾತ್ರವಹಿಸುವ ಸಾಧ್ಯತೆಯಿದೆ.
ಹವಾಮಾನ ವರದಿ: ಇನ್ನು ಪಂದ್ಯದ ದಿನ ಆಟಕ್ಕೆ ಪೂರಕವಾದ ವಾತಾವರಣವಿರಲಿದ್ದು ಅಭಿಮಾನಿಗಳು ಸಂಪೂರ್ಣವಾಗಿ ಪಂದ್ಯವನ್ನು ಆನಂದಿಸಬಹುದು. 20-30ರ ಆಸುಪಾಸಿನಲ್ಲಿ ಉಷ್ಣಾಂಶವಿರಲಿದೆ.
ಇತ್ತಂಡಗಳ ಸಂಭಾವ್ಯ ಆಡುವ ಬಳಗ
ರಾಜಸ್ಥಾನ್ ರಾಯಲ್ಸ್: ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ನಾಯಕ & ವಿಕೆಟ್ ಕೀಒರ್), ದೇವದತ್ ಪಡಿಕ್ಕಲ್, ಶಿಮ್ರೋನ್ ಹೆಟ್ಮೆಯರ್, ಧ್ರುವ್ ಜುರೆಲ್, ರವಿಚಂದ್ರನ್ ಅಶ್ವಿನ್, ಜೇಸನ್ ಹೋಲ್ಡರ್, ಟ್ರೆಂಟ್ ಬೌಲ್ಟ್, ಸಂದೀಪ್ ಶರ್ಮಾ, ಯುಜ್ವೇಂದ್ರ ಚಾಹಲ್, ಮುರುಗನ್ ಅಶ್ವಿನ್
ಚೆನ್ನೈ ಸೂಪರ್ ಕಿಂಗ್ಸ್: ಋತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಅಜಿಂಕ್ಯ ರಹಾನೆ, ಮೊಯಿನ್ ಅಲಿ, ಅಂಬಾಟಿ ರಾಯುಡು, ಶಿವಂ ದುಬೆ, ರವೀಂದ್ರ ಜಡೇಜಾ, ಎಂಎಸ್ ಧೋನಿ (ನಾಯಕ & ವಿಕೆಟ್ ಕೀಪರ್), ಮಥೀಶ ಪತಿರಣ, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications