IPL 2023 PBKS vs LSG: ಪಂಜಾಬ್ ಕಿಂಗ್ಸ್ vs ಲಕ್ನೋ ಸೂಪರ್ ಜೈಂಟ್ಸ್: ಸಂಭಾವ್ಯ XI, ಪಿಚ್ ರಿಪೋರ್ಟ್
ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಶುಕ್ರವಾರ ಮತ್ತೊಂದು ಕುತೂಹಲಕಾರಿ ಪಂದ್ಯ ನಡೆಯಲಿದೆ. ಪಂಜಾಬ್ ಕಿಂಗ್ಸ್ ತಂಡದ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ತಂಡ ಸೆಣೆಸಾಡಲಿದ್ದು ಪಂಜಾಬ್ ಕಿಂಗ್ಸ್ ತಂಡದ ಆತಿಥ್ಯದಲ್ಲಿ ಈ ಪಂದ್ಯ ಆಯೋಜನೆಯಾಗಲಿದೆ. ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೊಸಿಯೇಶನ್ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಯಾಗಲಿದೆ.
ಲಕ್ನೋ ಸೂಪರ್ ಜೈಂಟ್ಸ್ ತಂಡ ಈ ಬಾರಿಯ ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದರೂ ಕೆಲ ಪಂದ್ಯಗಳಲ್ಲಿ ಆಘಾತಕಾರಿಯಾಗಿ ಸೋಲು ಅನುಭವಿಸಿದೆ. ಅದರಲ್ಲೂ ಕಳೆದ ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯದಲ್ಲಿ ಎಲ್‌ಎಸ್‌ಜಿ ತಂಡದ ನೀಡಿದ ಪ್ರದರ್ಶನ ಕ್ರಿಕೆಟ್ ಅಭಿಮಾನಿಗಳನ್ನು ದುಗ್ಭ್ರಮೆಗೆ ಒಳಪಡಿಸಿತ್ತು. ಕೊನೆಯ ಐದು ಓವರ್‌ಗಳಲ್ಲಿ ಎಲ್‌ಜಿ ತಂಡದ ಆಟಗಾರರು ಪ್ರದರ್ಶಿಸಿದ ಬ್ಯಾಟಿಂಗ್ ಅಚ್ಚರಿಗೆ ಕಾರಣವಾಗಿದೆ. ಹೀಗಾಗಿ ಸಾಕಷ್ಟು ಟೀಕೆಗೂ ಅದು ಒಳಗಾಗಿದೆ. ಇವುಗಳಿಂದ ತಂಡ ಹೊರಬರುವುದು ಅಗತ್ಯವಾಗಿದೆ.

ಮತ್ತೊಂದೆಡೆ ಪಂಜಾಬ್ ಕಿಂಗ್ಸ್ ತಂಡದ ಕೂಡ ಅಸ್ಥಿರ ಪ್ರದರ್ಶನ ನೀಡುತ್ತಿದೆ. ಕೊನೆಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 13 ರನ್‌ಗಳ ಅಂತರದ ಗೆಲುವು ಸಾಧಿಸಿರುವುದು ತಂಡದ ಆತ್ಮವಿಶ್ವಾಸ ಹೆಚ್ಚಿಸಿರುವುದರಲ್ಲಿ ಅನುಮಾನವಿಲ್ಲ. ಹೀಗಾಗಿ ತವರಿನಲ್ಲಿ ನಡೆಯಲಿರುವ ಪಂದ್ಯದಲ್ಲಿ ಯಾವ ರೀತಿಯ ಪ್ರದರ್ಶನ ನೀಡಲಿದೆ ಎಂಬುದು ಕುತೂಹಲ ಮೂಡಿಸಿದೆ.
ಪಂದ್ಯದ ಮಾಹಿತಿ ಹಾಗೂ ನೇರಪ್ರಸಾರದ ವಿವರ
ಪಂಜಾಬ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳ ವಿರುದ್ಧದ ಈ ಪಂದ್ಯ ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೊಸಿಯೇಶನ್ ಕ್ರೀಡಾಂಗಣದಲ್ಲಿ ಏಪ್ರಿಲ್ 28 ಶುಕ್ರವಾರ ಸಂಜೆ ಆಯೋಜನೆಯಾಗಲಿದೆ. ಸಂಜೆ 7:30ಕ್ಕೆ ಈ ಪಂದ್ಯ ಆರಂಭವಾಗಲಿದ್ದು 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಸ್ಟಾರ್ ಸ್ಪೋರ್ಟ್ಸ್ ವಾಹಿನಿ ಪಂದ್ಯದ ನೇರಪ್ರಸಾರ ಮಾಡಿದರೆ ಜಿಯೋ ಸಿನಿಮಾದಲ್ಲಿ ಲೈವ್‌ಸ್ಟ್ರೀಮಿಂಗ್ ಮೂಲಕ ವೀಕ್ಷಿಸುವ ಅವಕಾಶವಿದೆ.
ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ
ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೊಸಿಯೇಶನ್ ಕ್ರೀಡಾಂಗಣ ಬ್ಯಾಟರ್‌ಗಳಿಗೆ ಉತ್ತಮ ನೆರವು ನೀಡುವ ಪಿಚ್ ಆಗಿದೆ. ಉತ್ತಮ ವೇಗ ಹಾಗೂ ಬೌನ್ಸ್ ದೊರೆಯುವ ಕಾರಣ ನೇರವಾಗಿ ಬ್ಯಾಟ್‌ಗೆ ಚೆಂಡು ಬರಲಿದ್ದು ದೊಡ್ಡ ಮೊತ್ತದ ರನ್ ಹರಿದು ಬರುವ ನಿರೀಕ್ಷೆಯಿದೆ. ಆದರೆ ಪಂದ್ಯದ ಆರಂಭದ ಕೆಲ ಕಾಲ ವೇಗುಗಳಿಗೂ ಕೂಡ ಇಲ್ಲಿ ನೆರವು ದೊರೆಯುವ ಕಾರಣ ವೇಗದ ಬೌಲರ್‌ಗಳಿಗೂ ಮಿಂಚುವ ಅವಕಾಶವಿದೆ.
ಹವಾಮಾನ ವರದಿ: ಇನ್ನು ಪಂದ್ಯದ ದಿನ ಆಟಕ್ಕೆ ಪೂರಕವಾದ ವಾತಾವರಣವಿರಲಿದ್ದು ಅಭಿಮಾನಿಗಳು ಸಂಪೂರ್ಣವಾಗಿ ಪಂದ್ಯವನ್ನು ಆನಂದಿಸಬಹುದು. 20-30ರ ಆಸುಪಾಸಿನಲ್ಲಿ ಉಷ್ಣಾಂಶವಿರಲಿದೆ.
ಇತ್ತಂಡಗಳ ಸಂಭಾವ್ಯ ಆಡುವ ಬಳಗ
ಲಕ್ನೋ ಸೂಪರ್ ಜೈಂಟ್ಸ್: ಕೆಎಲ್ ರಾಹುಲ್, ಕೈಲ್ ಮೇಯರ್ಸ್, ಕುರ್ನಾಲ್ ಪಾಂಡ್ಯ, ನಿಕೋಲಸ್ ಪೂರನ್, ಆಯುಷ್ ಬಡೋನಿ, ಮಾರ್ಕಸ್ ಸ್ಟೋನಿಸ್, ದೀಪಕ್ ಹೂಡಾ, ರವಿ ಬಿಷ್ಣೋಯ್, ಅವೇಶ್ ಖಾನ್, ಮಾರ್ಕ್ ವುಡ್, ಯುಧ್ವೀರ್ ಸಿಂಗ್.
ಪಂಜಾಬ್ ಕಿಂಗ್ಸ್: ಮ್ಯಾಟ್ ಶಾರ್ಟ್, ಶಿಖರ್ ಧವನ್, ಪ್ರಭ್‌ಸಿಮ್ರಾನ್ ಸಿಂಗ್, ಲಿಯಾಮ್ ಲಿವಿಂಗ್‌ಸ್ಟೋನ್, ಹರ್‌ಪ್ರೀತ್ ಸಿಂಗ್, ಸ್ಯಾಮ್ ಕರಾನ್, ಜಿತೇಶ್ ಶರ್ಮಾ, ಶಾರುಖ್ ಖಾನ್, ಹರ್‌ಪ್ರೀತ್ ಬ್ರಾರ್, ರಾಹುಲ್ ಚಾಹರ್, ಅರ್ಶ್‌ದೀಪ್ ಸಿಂಗ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications